
ಬೆಂಗಳೂರು(ಫೆ.09): ರಾಜ್ಯ ವಿವಿಧ ಶಾಲಾ ಕಾಲೇಜುಗಳಲ್ಲಿ ಹಿಜಾಬ್(Hijab) ಹಾಗೂ ಕೇಸರಿ ಶಾಲು ಸಂಘರ್ಷ ಬಿಗಡಾಯಿಸಲು ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್(BC Nagesh) ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಅವರು ನೀಡುತ್ತಿರುವ ಪ್ರಚೋದನಕಾರಿ ಹೇಳಿಕೆಗಳೇ ಕಾರಣ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಆರೋಪಿಸಿದ್ದಾರೆ.
ಹಿಜಾಬ್-ಕೇಸರಿ ಶಾಲು ನಡುವಿನ ಸಂಘರ್ಷ ಅತಿರೇಕಕ್ಕೆ ತಲುಪಿ ವಿದ್ಯಾರ್ಥಿಗಳು(Students) ಪರಸ್ಪರ ಕಾದಾಟಕ್ಕೆ ಇಳಿದು ಶಾಲಾ-ಕಾಲೇಜುಗಳೇ ಕದನ ಕಣಗಳಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ. ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಹೊಣೆಗಾರಿಕೆ ಹೊಂದಿರುವ ರಾಜ್ಯ ಶಿಕ್ಷಣ ಸಚಿವರು ಮತ್ತು ಗೃಹಸಚಿವರು ನೀಡುತ್ತಿರುವ ಪ್ರಚೋದನಾಕಾರಿ ಹೇಳಿಕೆ ಪರಿಸ್ಥಿತಿ ಬಿಗಡಾಯಿಸಲು ಕಾರಣವಾಗಿರುವುದು ವಿಷಾದನೀಯ ಎಂದು ತಿಳಿಸಿದ್ದಾರೆ.
Hijab Row: ಹಿಜಾಬ್ ವಿಚಾರದಿಂದಲೇ ಕಾಂಗ್ರೆಸ್ ಸರ್ವನಾಶವಾಗುವುದು ಖಚಿತ: ಈಶ್ವರಪ್ಪ!
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಸಂಘರ್ಷ ನಡೆದಿರುವ ಕಡೆ ಹಲ್ಲೆಗೆ ಮುಂದಾಗಿರುವವರ ವಿರುದ್ಧ ಕ್ರಮ ಕಠಿಣ ಕ್ರಮಕೈಗೊಳ್ಳದೆ ಪೊಲೀಸರು(Police) ಮೂಕ ಪ್ರೇಕ್ಷಕರಾಗಿರುವುದು ವಿದ್ಯಾರ್ಥಿಗಳ ಹೆತ್ತವರಲ್ಲಿ ಆತಂಕ ಹುಟ್ಟಿಸಿದೆ. ಪ್ರಾರಂಭದ ಹಂತದಲ್ಲಿಯೇ ಸ್ಥಳೀಯವಾಗಿ ಸೌಹಾರ್ದಯುತವಾಗಿ ಬಗೆಹರಿಸಬಹುದಾಗಿದ್ದ ಸರಳ ಸಮಸ್ಯೆಯಿದು. ಆದರೆ, ರಾಜಕೀಯ ಕಾರಣಕ್ಕಾಗಿ ಈ ಸಮಸ್ಯೆಯನ್ನು ಉಲ್ಬಣಗೊಳಿಸಿರುವ ರಾಜ್ಯ ಸರ್ಕಾರ(Government of Karnataka) ಈಗ ನಿಯಂತ್ರಿಸಲಾಗದೆ ಕೈಚೆಲ್ಲಿ ಕೂತಿದೆ. ಕೂಡಲೇ ಪರಿಸ್ಥಿತಿ ಗಂಭೀರತೆಯನ್ನು ಅರಿತು ಮುಖ್ಯಮಂತ್ರಿ ಅವರು ಮಧ್ಯಪ್ರವೇಶಿಸಿ ಪರಿಸ್ಥಿತಿ ನಿಭಾಯಿಸಲು ಕಠಿಣ ಕ್ರಮ ಅನುಸರಿಸಬೇಕು. ಶಾಲಾ ಕಾಲೇಜುಗಳನ್ನು ಬಂದ್ ಮಾಡಿರುವ ಸರ್ಕಾರ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಆನ್‌ಲೈನ್ ಶಿಕ್ಷಣ(Online Edcuation0 ಆರಂಭಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ರಾಷ್ಟ್ರಧ್ವಜ ಕೆಳಗಿಳಿಸಿ ಕೇಸರಿ ಧ್ವಜ: ಕ್ರಮಕ್ಕೆ ಸಲೀಂ ಅಹ್ಮದ್ ಆಗ್ರಹ
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಕಾಲೇಜೊಂದರಲ್ಲಿ ರಾಷ್ಟ್ರಧ್ವಜವನ್ನು(National Flag) ಕೆಳಗಿಳಿಸಿ ಕೇಸರಿ ಧ್ವಜವನ್ನು(Saffron flag) ಹಾರಿಸಿರುವ ಘಟನೆ ಇಡೀ ದೇಶವೇ ತಲೆ ತಗ್ಗಿಸುವಂತಹದ್ದು. ಯಾರೇ ಈ ತಪ್ಪು ಮಾಡಿದ್ದರೂ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್(Saleem Ahmed) ಸರ್ಕಾರವನ್ನು ಒತ್ತಾಯಿಸಿದ್ದಾರೆ.
Hijab Row: ಪೊಲೀಸರಿಗೆ ಸೂಚನೆ ನೀಡಿದ್ದೇವೆ, ಪರಿಸ್ಥಿತಿ ನಿಯಂತ್ರಣದಲ್ಲಿದೆ: ಗೃಹ ಸಚಿವ
ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಅಲ್ಪಸಂಖ್ಯಾತ ಸಮುದಾಯದ ವಿವಿಧ ಸಮಸ್ಯೆಗಳ ಬಗ್ಗೆ ಮುಸ್ಲಿಂ ನಾಯಕರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ಧ್ವಜ ಇಳಿಸಿದ್ದು ದುರ್ದೈವದ ಸಂಗತಿ. ಘಟನೆಯಿಂದ ಬಹಳ ದುಃಖವಾಗಿದೆ. ಇದರ ಬಗ್ಗೆ ಸರ್ಕಾರ ಉತ್ತರ ಕೊಡಬೇಕು. ರಾಷ್ಟ್ರದಲ್ಲಿ ರಾಜ್ಯದ ಮರ್ಯಾದೆ ಹೋಗಿದೆ. ಯಾರೇ ತಪ್ಪು ಮಾಡಿದ್ದರೂ ಸರ್ಕಾರ ನಿದ್ರ್ಯಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಇಸ್ಲಾಂ(Islam) ಧರ್ಮದಲ್ಲಿ ಬುರ್ಖಾ, ನಕಾಬ್, ಹಿಜಾಬ್ ಎಂಬ ಮೂರು ಪದ್ಧತಿಗಳಿವೆ. ನೂರಾರು ವರ್ಷಗಳಿಂದ ಇದನ್ನ ಪಾಲಿಸುತ್ತಿದ್ದೇವೆ. ಈಗ ವಿವಾದ ಆಗುತ್ತಿರೋದು ಏಕೆ? ಹಿಜಾಬ್-ಕೇಸರಿ ಸಂಘರ್ಷ ಬಗ್ಗೆ ತನಿಖೆಯಾಗಬೇಕು. ಕೆಲವು ಕಾಣದ ಕೈಗಳು ಇದರ ಹಿಂದಿದ್ದು, ರಾಜಕೀಯ ಷಟ್ಯಂತ್ರ ಅಡಗಿದೆ. ನಾವು ಎಲ್ಲಿಗೆ ತಲುಪುತ್ತಿದ್ದೇವೆ. ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ಸಂಪೂರ್ಣ ಯಡವಿದೆ. ಸರ್ಕಾರ ಹಾಗೂ ಸಚಿವರುಗಳು ಮಾಡಿದ ಯಡವಟ್ಟುಗಳಿಂದಲೇ ಇವತ್ತು ಈ ಸಮಸ್ಯೆ ಕೈ ಮೀರಿ ಹೋಗಿದೆ ಎಂದು ಕಿಡಿ ಕಾರಿದರು.
ಶಿವಮೊಗ್ಗ ಜಿಲ್ಲೆಯ ಕಾಲೇಜೊಂದರಲ್ಲಿ ರಾಷ್ಟ್ರಧ್ವಜವನ್ನು ಕೆಳಗಿಳಿಸಿ ಕೇಸರಿ ಧ್ವಜವನ್ನು ಹಾರಿಸಿರುವ ಘಟನೆ ಇಡೀ ದೇಶವೇ ತಲೆ ತಗ್ಗಿಸುವಂತಹದ್ದು. ಯಾರೇ ಈ ತಪ್ಪು ಮಾಡಿದ್ದರೂ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಅಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆಗ್ರಹಿಸಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ನೇತೃತ್ವದಲ್ಲಿ ಮಂಗಳವಾರ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ನಡೆದ ಅಲ್ಪಸಂಖ್ಯಾತ ಮುಖಂಡರ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್, ವಿಧಾನ ಪರಿಷತ್ ಸದಸ್ಯ ನಜೀರ್ ಅಹ್ಮದ್, ಶಾಸಕ ಎನ್.ಎ.ಹ್ಯಾರಿಸ್, ರಹೀಂ ಖಾನ್ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ