
ಬೆಂಗಳೂರು (ಆ.22) : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ದೇಗುಲಗಳಲ್ಲಿ ವರಮಹಾಲಕ್ಷ್ಮೇ ಹಬ್ಬದ ಪ್ರಯುಕ್ತ ದೇವಾಲಯಕ್ಕೆ ಬರುವ ಮಹಿಳೆಯರಿಗೆ ಅರಿಶಿಣ-ಕುಂಕುಮ, ಹಸಿರು ಬಳೆಗಳನ್ನು ಗೌರವಸೂಚಕವಾಗಿ ನೀಡಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.
ಧಾರ್ಮಿಕ ದತ್ತಿ ಇಲಾಖೆಯು ಸುತ್ತೋಲೆ ಹೊರಡಿಸಿದ್ದು, ಕಳೆದ ವರ್ಷದಂತೆ ಈ ಬಾರಿಯೂ ಆಚರಣೆಗೆ ಸೂಚಿಸಿದೆ.
ಇದೇ ತಿಂಗಳ 25ರಂದು ಶುಕ್ರವಾರ ವರಮಹಾಲಕ್ಷ್ಮೇ ಹಬ್ಬ ಇದ್ದು, ಅಂದು ದೇವಾಲಯಕ್ಕೆ ವಿಶೇಷ ಪೂಜೆ ಸಲ್ಲಿಸಲು ಮಹಿಳೆಯರು ಆಗಮಿಸುತ್ತಾರೆ. ಈ ವೇಳೆ ದೇವಾಲಯಗಳು ತಮ್ಮ ನಿಧಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿಣ-ಕುಂಕುಮ, ಹಸಿರು ಬಳೆಗಳನ್ನು ತಂದು ದೇವರ ಮುಂದೆ ಇಟ್ಟು ಪೂಜಿಸಿ ಗೌರವ ಪೂರ್ವಕವಾಗಿ ಮಹಿಳೆಯರಿಗೆ ನೀಡಬೇಕು. ಪ್ರಸಾದ ರೂಪವಾದ ಅರಿಶಿಣ-ಕುಂಕುಮವನ್ನು ಕಾಗದದ ಲಕೋಟೆಗಳಲ್ಲಿ ಸರ್ಕಾರದ ಲಾಂಛನದೊಂದಿಗೆ ದೇವಾಲಯದ ಹೆಸರನ್ನು ಮುದ್ರಿಸಿ, ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ವಿತರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಈ ದರಿದ್ರ ಕೆಲಸದಿಂದ ‘ಲಕ್ಷ್ಮಿ ದೇವಿ’ ಕೋಪಗೊಳ್ಳುವಳು; ಇವುಗಳನ್ನು ಇಂದೇ ನಿಲ್ಲಿಸಿ.!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ