ಆರ್ಟಿಕಲ್ 370 ರದ್ದು: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಮಾಜಿ ಪ್ರಧಾನಿ ದೇವೇಗೌಡ

By Kannadaprabha News  |  First Published Dec 12, 2023, 5:39 AM IST

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಆರ್ಟಿಕಲ್ 370 ಅನ್ನು ರದ್ದು ಮಾಡಿದ್ದ ಕೇಂದ್ರ ಸರ್ಕಾರದ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂಕೋರ್ಟ್ ನಿರ್ಧಾರವನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸ್ವಾಗತಿಸಿದರು.


ಹಾಸನ (ಡಿ.12) ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಆರ್ಟಿಕಲ್ 370 ಅನ್ನು ರದ್ದು ಮಾಡಿದ್ದ ಕೇಂದ್ರ ಸರ್ಕಾರದ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂಕೋರ್ಟ್ ನಿರ್ಧಾರವನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸ್ವಾಗತಿಸಿದರು.

ಸೋಮವಾರ ಹೊಳೆನರಸೀಪುರ ತಾಲೂಕಿನ ತಮ್ಮ ಹುಟ್ಟೂರು ಹರದನಹಳ್ಳಿಯಲ್ಲಿ ಕಡೆ ಕಾರ್ತಿಕ ಮಾಸದ ಅಂಗವಾಗಿ ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.

Latest Videos

undefined

ಸುಪ್ರೀಂಕೋರ್ಟ್ ತೀರ್ಪನ್ನು ನಾನು ಸ್ವಾಗತಿಸುತ್ತೇನೆ, ಆರ್ಟಿಕಲ್ 370 ಮೂಲಕ ಕಾಶ್ಮೀರಕ್ಕೆ ವಿಶೇಷ ಸವಲತ್ತು ಕಲ್ಪಿಸಲಾಗಿತ್ತು. ಅದನ್ನು ಲೋಕಸಭೆ, ರಾಜ್ಯಸಭೆಯಲ್ಲಿ ತಿದ್ದುಪಡಿ ಮಾಡುವ ಮುಖೇನ ಆ ಸವಲತ್ತು ರದ್ದು ಮಾಡಿದ್ದರು. ಇದರಿಂದ ಬೇರೆ ರಾಜ್ಯಗಳಿಗೂ, ಅನ್ಯಾಯ, ಅನುಕೂಲವಾಗುತ್ತೋ ಅದು ಜಮ್ಮು, ಕಾಶ್ಮೀರಕ್ಕೂ ಅನ್ವಯವಾಗುತ್ತೆ ಎಂದು ನುಡಿದರು.

ಸುಪ್ರೀಂ ತೀರ್ಪಿಗೂ ಮುನ್ನ ಸೋಲೊಪ್ಪಿಕೊಂಡಿದ್ದ ಕಪಿಲ್‌ ಸಿಬಲ್ ಪೋಸ್ಟ್‌ ವೈರಲ್; ದುಯೋಧನನಿಗೆ ಹೋಲಿಸಿದ ನೆಟ್ಟಿಗರು!

ಐದು ಜನ ನ್ಯಾಯಾಧೀಶರು ಸುಪ್ರೀಂಕೋರ್ಟ್‌ನಲ್ಲಿ ತೀರ್ಪು ಕೊಟ್ಟಿದ್ದಾರೆ ಅದನ್ನು ನಾನು ಸ್ವಾಗತಿಸುತ್ತೇನೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಂದು ಕಡೆ, ಇನ್ನೊಂದು ಕಡೆ ಎನ್‌ಡಿಎ ಇದೆ. ನಾವು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಲೋಕಸಭೆ ಚುನಾವಣೆಯಲ್ಲಿ ಈ ರಾಷ್ಟ್ರದ ಮಹಾಜನತೆ ಇಂಡಿಯಾಗೆ ತೀರ್ಪು ಕೊಡುತ್ತಾರೋ, ಎನ್‌ಡಿಎ ಮೈತ್ರಿಕೂಟಕ್ಕೆ ತೀರ್ಪು ಕೊಡ್ತಾರೋ ಕಾಯ್ದು ನೋಡಬೇಕು ಎಂದು ಹೇಳಿದರು. ಐದು ರಾಜ್ಯಗಳ ಚುನಾವಣೆ ಫಲಿತಾಂಶ ಗಮನಿಸಿದರೆ ಜನರ ಮನಸ್ಸಿನಲ್ಲಿ ಬಿಜೆಪಿಗೆ ಸ್ವಾಭಾವಿಕವಾಗಿ ಹೆಚ್ಚಿ ಶಕ್ತಿ ಕೊಟ್ಟಿದ್ದಾರೆ ಎಂದರು.

Article 370: ಸುಪ್ರೀಂಕೋರ್ಟ್‌ ತೀರ್ಪಿನ ಬಗ್ಗೆ ಮೋದಿ, ಅಮಿತ್‌ ಶಾ, ಕಾಶ್ಮೀರಿ ನಾಯಕರು ಹೇಳಿದ್ದೀಗೆ..

ಆರ್ಟಿಕಲ್ 370 ಯಾವಾಗ ಕಾಶ್ಮೀರಕ್ಕೆ ಕೊಟ್ಟಿದ್ದಂತಹ ವಿಶೇಷ ಸವಲತ್ತು ಇದೆಯೋ. ಅದನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ತಿದ್ದುಪಡಿ ತರುವುದರ ಮುಖೇನ ಆ ಒಂದು ಸವಲತ್ತನ್ನು ರದ್ದು ಮಾಡಿದೆ. ಅದರಿಂದ ಬೇರೆ ರಾಜ್ಯಗಳಿಗೆ ಏನೂ ಅನುಕೂಲ ಆಗುತ್ತದೆಯೋ ಎನ್ನುವುದನ್ನು ನೋಡಬೇಕು ಎಂದರು.

click me!