ಹೃದಯ ಕಾಯಿಲೆ ಪತ್ತೆಗೆ ಕೃತಕ ಬುದ್ಧಿಮತ್ತೆ: ಸುಧಾಕರ್‌

Published : Apr 08, 2022, 04:53 AM ISTUpdated : Apr 08, 2022, 07:58 AM IST
ಹೃದಯ ಕಾಯಿಲೆ ಪತ್ತೆಗೆ ಕೃತಕ ಬುದ್ಧಿಮತ್ತೆ: ಸುಧಾಕರ್‌

ಸಾರಾಂಶ

*  ರಾಜ್ಯದ 22 ಜಿಲ್ಲೆಗಳಲ್ಲಿ ಈ ವರ್ಷ ತಂತ್ರಜ್ಞಾನದ ಪ್ರಾಯೋಗಿಕ ಬಳಕೆ *  ‘ವಿಶ್ವ ಆರೋಗ್ಯ ದಿನ’ ಸಮಾರಂಭದಲ್ಲಿ ಆರೋಗ್ಯ ಸಚಿವರ ಹೇಳಿಕೆ *  ಆಶಾ ಕಾರ್ಯಕರ್ತೆಯರ ಬೃಹತ್‌ ಸಮಾವೇಶ   

ಬೆಂಗಳೂರು(ಏ.08):  ರೋಗ ಬಂದ ಬಳಿಕ ಚಿಕಿತ್ಸೆ ನೀಡುವ ಬದಲು, ರೋಗದ ಸಂಭವನೀಯತೆಯನ್ನು ಹೇಳುವ ತಪಾಸಣಾ ವ್ಯವಸ್ಥೆ ರಾಜ್ಯದಲ್ಲಿ ಬೆಳೆಯಬೇಕಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌(Dr K Sudhakar) ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಸೌಧದಲ್ಲಿ ನಡೆದ ’ವಿಶ್ವ ಆರೋಗ್ಯ ದಿನ’(World Health Day) ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಹೃದಯ ಕಾಯಿಲೆಗಳನ್ನು(Heart Disease) ಮುಂಚಿತವಾಗಿ ಪತ್ತೆ ಹಚ್ಚುವ ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನ ಬಂದಿದೆ. ನಮ್ಮ ರಾಜ್ಯದಲ್ಲಿ ಎರಡು ಜಿಲ್ಲೆಯಲ್ಲಿ ಈ ವರ್ಷದಿಂದ ಪ್ರಾಯೋಗಿಕವಾಗಿ ಈ ತಂತ್ರಜ್ಞಾನವನ್ನು ಸರ್ಕಾರ ಬಳಸಲಿದೆ ಎಂದು ಹೇಳಿದರು.

Covid Crisis: ಕರ್ನಾಟಕದಲ್ಲೂ ಮಾಸ್ಕ್‌ ಕಡ್ಡಾಯ ನಿಯಮ ರದ್ದು?

ಶ್ವಾಸಕೋಶ ಸೇರಿದಂತೆ ದೇಹದ ಎಲ್ಲ ಭಾಗಗಳು ಉತ್ತಮವಾಗಿ ಕೆಲಸ ಮಾಡಲು ಶುದ್ಧ ಆಮ್ಲಜನಕ, ಶುದ್ಧ ಆಹಾರ ಬೇಕು. ಆದರೆ ವಾಯುಮಾಲಿನ್ಯದಿಂದಾಗಿ ಗಾಳಿ ಕಲುಷಿತವಾಗಿದೆ. ತಂಪು ಪಾನೀಯ, ಜಂಕ್‌ ಆಹಾರ ಸೇವನೆಯಿಂದ ಬೊಜ್ಜು ಅತಿಯಾಗಿ ಹೃದಯ ಸಂಬಂಧಿ ಸಮಸ್ಯೆಗಳು, ಕ್ಯಾನ್ಸರ್‌, ಶ್ವಾಸಕೋಶ ಸಂಬಂಧಿ ಸಮಸ್ಯೆಗಳು ಹೆಚ್ಚಾಗಿವೆ. ಬಹುತೇಕ ಮಂದಿ ರೋಗ ಬಂದ ಬಳಿಕ ಆಸ್ಪತ್ರೆಗೆ(Hospital) ಬರುತ್ತಿದ್ದಾರೆ. ಇದರ ಬದಲು, ರೋಗದ ಸಂಭವನೀಯತೆಯನ್ನು ಹೇಳುವ ಆಧುನಿಕ ತಂತ್ರಜ್ಞಾನಗಳ ಬಳಕೆಯಿಂದ, ರೋಗ ಬರುವ ಮುನ್ನವೇ ಅದರ ಸಾಧ್ಯತೆಯನ್ನು ಹೇಳಲು ಸಾಧ್ಯವಿದೆ ಎಂದರು.

ವೃತ್ತಿ ಬದುಕಿನಲ್ಲಿ ವೈದ್ಯರು ರಾಜಿ ಆಗಬಾರದು. ಜನರ ಮುಂದೆ ತಲೆ ತಗ್ಗಿಸುವಂತಾಗಬಾರದು. ಐಎಎಸ್‌, ಕೆಎಎಸ್‌ ಅಧಿಕಾರಿಗಳು ಎಲ್ಲ ಬಗೆಯ ಆಡಳಿತದ ಕೆಲಸವನ್ನು ಮಾಡುತ್ತಾರೆ. ಹಾಗೆಯೇ ವೈದ್ಯರು ಕೂಡ ಉತ್ತಮವಾಗಿ ಆಡಳಿತ ನಡೆಸಬೇಕು. ಯಾವುದೇ ಆರೋಗ್ಯ ಸಂಸ್ಥೆ, ಆಸ್ಪತ್ರೆಯಲ್ಲಿ ಆಡಳಿತ ಲೋಪ ಉಂಟಾಗುವುದನ್ನು ತಡೆಯಲು ವೈದ್ಯರಿಗೆ ವಿಶೇಷ ತರಬೇತಿ ಅಗತ್ಯವಿದೆ. ನಮ್ಮ ಸರ್ಕಾರ ತರಬೇತಿ ವ್ಯವಸ್ಥೆ ಸೂಕ್ತವಾಗಿ ಮಾಡಲಿದೆ ಎಂದು ತಿಳಿಸಿದರು.

ಸಮಾನ ವೇತನದ ಬಗ್ಗೆ ಅಧ್ಯಯನ:

ಕೇಂದ್ರ ಸರ್ಕಾರಿ ನೌಕರರ ವೇತನಕ್ಕೆ ಸಮನಾಗಿ ರಾಜ್ಯ ನೌಕರರಿಗೆ ವೇತನ ನೀಡಬೇಕು ಎಂಬ ಬೇಡಿಕೆ ಇದೆ. ಈ ಬಗ್ಗೆ ಅಧ್ಯಯನ ನಡೆಸಲು ಸರ್ಕಾರ ಈಗಾಗಲೇ ಸಮಿತಿ ರಚಿಸಿದೆ. ಆರೋಗ್ಯ ಇಲಾಖೆಯ ನೌಕರರಿಗೆ ಈ ರೀತಿ ವೇತನ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಇಲಾಖೆಯ ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು. ಕಣ್ಣಿನ ಆರೋಗ್ಯ ತಪಾಸಣೆಗಾಗಿ ವಿಶೇಷ ಕಾರ್ಯಕ್ರಮ ನಡೆಸಲಾಗುತ್ತಿದೆ. ಬಡವರಿಗಾಗಿ ಉಚಿತ ಡಯಾಲಿಸಿಸ್‌ ಕಾರ್ಯಕ್ರಮವನ್ನು ವಿಸ್ತರಿಸಲಾಗಿದೆ ಎಂದರು.

ಚಿಕ್ಕಬಳ್ಳಾಪುರಕ್ಕೆ ಚುನಾವಣಾ ಚಾಣಕ್ಯ ಅಮಿತಾ ಶಾ ಆಗಮನ: ಬಿಜೆಪಿ ಹವಾ ಎಬ್ಬಿಸಲು ಸುಧಾಕರ್‌ ಕರೆ

ಜಗತ್ತಿನಲ್ಲಿ ಅನೇಕ ವೃತ್ತಿಗಳಿವೆ. ಆದರೆ ವೈದ್ಯ ವೃತ್ತಿಯಲ್ಲಿ ಹೆಚ್ಚು ಧನ್ಯತಾ ಭಾವ ಮೂಡುತ್ತದೆ. ಅನುಕಂಪ, ಪ್ರೀತಿ, ವಿಶ್ವಾಸವನ್ನು ಅಳವಡಿಸಿಕೊಂಡಾಗ ಮಾತ್ರ ಇದು ಸಾಧ್ಯ. ರಾಜ್ಯದಲ್ಲಿ 44 ಸಾವಿರ ಆಶಾ ಕಾರ್ಯಕರ್ತೆಯರು ಗೌರವಧನಕ್ಕಿಂತ ಹತ್ತು ಪಟ್ಟು ಅಧಿಕ ಕೆಲಸ ಮಾಡುತ್ತಿದ್ದಾರೆ. ಅವರ ಗೌರವಧನ ಬಹಳ ಕಡಿಮೆ ಇದೆ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿದ್ದು, ಅದಕ್ಕೆ ಅವರು ಸ್ಪಂದಿಸಿ ಮೊತ್ತ ಹೆಚ್ಚಳ ಮಾಡಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಎರಡು ವರ್ಷಗಳಲ್ಲಿ ಬಾಕಿ ಉಳಿದಿದ್ದ ಪದೋನ್ನತಿಯನ್ನು ಮಾಡಲಾಗಿದೆ. ನೌಕರರು, ಸಿಬ್ಬಂದಿಗೆ ವಿಶೇಷ ತರಬೇತಿ ನೀಡಲಾಗಿದೆ ಎಂದರು.

ಆಶಾ ಕಾರ್ಯಕರ್ತೆಯರ ಬೃಹತ್‌ ಸಮಾವೇಶ:

44 ಸಾವಿರ ಆಶಾ ಕಾರ್ಯಕರ್ತೆಯರನ್ನು ಮಧ್ಯ ಕರ್ನಾಟಕ(Karnataka) ಭಾಗದಲ್ಲಿ ಒಂದೆಡೆ ಸೇರಿಸಿ ಆರೋಗ್ಯ ದಿನಾಚರಣೆಯನ್ನು ಆಚರಿಸುವ ಉದ್ದೇಶವಿದೆ. ಇದಕ್ಕೆ ಕೇಂದ್ರ ಆರೋಗ್ಯ ಸಚಿವರನ್ನೂ ಕರೆತರಲಾಗುವುದು. ಹಾಗೆಯೇ ಅಂಗಾಂಗ ದಾನದ(Organ Donation) ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವ ಅಗತ್ಯವಿದೆ. ಪುನೀತ್‌ ರಾಜ್‌ ಕುಮಾರ್‌(Puneeth Rajjkumar) ಮರಣ ದ ಬಳಿಕ ನೇತ್ರದಾನ(Eye Donate) ಮಾಡಿದ್ದರಿಂದ ಅರಿವು ಹೆಚ್ಚಾಗಿದೆ. ಇದೇ ರೀತಿ ತಾರೆಯರ ಮೂಲಕ ಹೆಚ್ಚು ಜಾಗೃತಿ ಮೂಡಿಸಬೇಕು ಎಂದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ನಮ್ಮನ್ನೇಕೆ ವೈರಿಗಳಂತೆ ನೋಡುತ್ತೀರಿ? ನಾವು ಸಹೋದ್ಯೋಗಿಗಳು: ಡಿಸಿಎಂ ಡಿಕೆ ಶಿವಕುಮಾರ್
ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ