
ಬೆಳಗಾವಿ (ಜೂ.29): ಬೆಳಗಾವಿ ಎಸಿ ಕಚೇರಿಯ ಗ್ರೇಡ್- 2 ತಹಶೀಲ್ದಾರ್ ಹಠಾತ್ ಮೃತಪಟ್ಟಿದ್ದಾರೆ. ಈ ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ್ ಮೊದಲ ಬಾರಿಗೆ ಶಾಸಕರಾಗಿದ್ದಾಗ ಅವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದ ಅಶೋಕ‌್ ಮಣ್ಣಿಕೇರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.
ಇವರ ಸಾವಿನ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಅಶೋಕ್ ಮಣ್ಣಿಕೇರಿ(Ashok mannikeri) ಪತ್ನಿ ಭೂಮಿ ಮತ್ತು ಆಕೆಯ ಸಹೋದರ ಸ್ಯಾಮ್ಯುಯೆಲ್ ವಿರುದ್ಧವೇ ಕೊಲೆ ಆರೋಪ ಕೇಳಿಬಂದಿದೆ. ಮೃತ ಅಶೋಕ್ ಕುಟುಂಬಸ್ಥರು ಈ ಬಗ್ಗೆ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಸಾಗರ: ವಿದ್ಯಾರ್ಥಿನಿ ಸಾವು ಪ್ರಕರಣ, ಶಾಲಾ ಮುಖ್ಯಸ್ಥರಿಗೆ ಷರತ್ತುಬದ್ಧ ಜಾಮೀನು
ಅಶೋಕ್ ಮಣ್ಣಿಕೇರಿ ಕುಟುಂಬ ಬೆಳಗಾವಿಯ ಕಾಳಿ ಅಂಬ್ರಾಯದಲ್ಲಿ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿತ್ತು, ತಡರಾತ್ರಿ ಹೃದಯಾಘಾತವಾಗಿದೆ ಎಂದು ಅಶೋಕ್ ಮಣ್ಣಿಕೇರಿ ಅವರನ್ನು ಪತ್ನಿ ಭೂಮಿ ಹಾಗೂ ಆಕೆಯ ಸಹೋದರ ಸ್ಯಾಮ್ಯುಯೆಲ್ ಅವರು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದ್ರೆ, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯೇ ಅಶೋಕ್ ಮಣ್ಣಿಕೇರಿ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಸೂಕ್ತ ತನಿಖೆಗೆ ನಡೆಸುವಂತೆ ಅಶೋಕ್ ಮಣ್ಣಿಕೇರಿ ಕುಟುಂಬಸ್ಥರು ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇನ್ನು ಭೂಮಿ ಹಾಗೂ ಆಕೆಯ ಸಹೋದರ ಸ್ಯಾಮ್ಯುಯೆಲ್ ಮೇಲೆ ಮೃತ ಅಶೋಕ್ ಕುಟುಂಬಸ್ಥರು ಹಲ್ಲೆಗೆ ಯತ್ನಿಸಿದ್ದಾರೆ. ಆ ವೇಳೆ ಪೊಲೀಸರು ಮಧ್ಯೆ ಪ್ರವೇಶಿಸಿ ಇಬ್ಬರನ್ನು ಕರೆದುಕೊಂಡು ಹೋಗಿದ್ದಾರೆ.
ಎರಡು ಮದ್ವೆಯಾಗಿದ್ದ ಪೊಲೀಸ್ ಪೇದೆ ಅನುಮಾನಾಸ್ಪದ ಸಾವು : ಕೊಲೆ ಶಂಕೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ