ಹುಬ್ಬಳ್ಳಿಯಲ್ಲಿ ಭಾನುವಾರ ನಡೆದ ಸಂಘದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಹೊಸ ಪದಾಧಿಕಾರಿಗಳ ಚುನಾವಣೆ ನಡೆಯಿತು. ಕರ್ನಾಟಕ ರಾಜ್ಯ ಸರ್ಕಾರಿ ರೇಡಿಯಾಲಜಿ ಇಮೇಜಿಂಗ್ ಅಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಅಶೋಕ ವಾಲ್ಮೀಕಿ, ಖಜಾಂಚಿಯಾಗಿ ಪ್ರಮೋದ್ ಹಿರೇಮಠ ಆಯ್ಕೆಯಾಗಿದ್ದಾರೆ.
ಬೆಂಗಳೂರು(ಆ.27): ಕರ್ನಾಟಕ ರಾಜ್ಯ ಸರ್ಕಾರಿ ರೇಡಿಯಾಲಜಿ ಇಮೇಜಿಂಗ್ ಅಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಅಶೋಕ ವಾಲ್ಮೀಕಿ ಆಯ್ಕೆಯಾಗಿದ್ದಾರೆ.
ಹುಬ್ಬಳ್ಳಿಯಲ್ಲಿ ಭಾನುವಾರ ನಡೆದ ಸಂಘದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಹೊಸ ಪದಾಧಿಕಾರಿಗಳ ಚುನಾವಣೆ ನಡೆಯಿತು. ಖಜಾಂಚಿಯಾಗಿ ಪ್ರಮೋದ್ ಹಿರೇಮಠ ಆಯ್ಕೆಯಾಗಿದ್ದಾರೆ.
ಗೃಹ ಲಕ್ಷ್ಮಿ ಹಣ ಕೂಡಿಟ್ಟು ಸೊಸೆಗೆ ಫ್ಯಾನ್ಸಿ ಸ್ಟೋರ್ ಹಾಕಿಸಿಕೊಟ್ಟ ಅತ್ತೆ!
ಚುನಾವಣಾಧಿಕಾರಿಗಳಾಗಿ ಸೊಸೈಟಿ ಆಫ್ ಇಂಡಿಯನ್ ರೇಡಿಯೋಗ್ರಾಫರ್ಸ್ ಅಸೋಸಿಯೇಶನ್ಸ್ ಸಂಸ್ಥಾಪಕರಾದ ಎಸ್.ಎ. ವಾಜಿದ್ ಕಾರ್ಯನಿರ್ವಹಿಸಿದರು. ಸಂಘದ ಇತರ ಪದಾಧಿಕಾರಿಗಳಾದ ವೆಂಕಟರಮಣಪ್ಪ, ಕಿಶೋರ ಕೋಟೂರ, ನಂಜುಂಡಸ್ವಾಮಿ, ಅಶ್ವಥನಾರಾಯಣ ಮುಂತಾದವರು ಉಪಸ್ಥಿತರಿದ್ದರು. ಅಶೋಕ ವಾಲ್ಮೀಕಿ ಅವರು ಹುಬ್ಬಳ್ಳಿಯ ಕರ್ನಾಟಕ ಮೆಡಿಕಲ್ ಕಾಲೇಜ್ ಮತ್ತು ರೀಸರ್ಚ್ ಇನ್ಸ್‌ಟಿಟ್ಯೂಟ್(ಕೆಎಂಸಿಆರ್‌ಐ)ನಲ್ಲಿ ರೇಡಿಯಾಲಜಿ ಇಮೇಜಿಂಗ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.