ತುಮಕೂರು: 4 ಕಿಮೀ ಉದ್ದ, 5 ಸಾವಿರ ಕಾರ್ಯಕರ್ತರು, ಸರ್ಕಾರಕ್ಕೆ ಸವಾಲು ಹಾಕಿ ಆರೆಸ್ಸೆಸ್ ಪಥಸಂಚಲ!

Published : Oct 18, 2025, 06:59 PM ISTUpdated : Oct 18, 2025, 07:04 PM IST
Rashtriya Swayamsevak Sangh Tumkur

ಸಾರಾಂಶ

Rashtriya Swayamsevak Sangh Tumkur:  ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗಳ ನಿಷೇಧದ ಚರ್ಚೆಯ ನಡುವೆಯೇ, ತುಮಕೂರಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರೆಸ್ಸೆಸ್) ಬೃಹತ್ ಪಥಸಂಚಲನ ನಡೆಸಿತು. 4 ಕಿಮೀ ಉದ್ದ, 5 ಸಾವಿರ ಕಾರ್ಯಕರ್ತರು, ಸರ್ಕಾರಕ್ಕೆ ಸವಾಲು ಹಾಕಿ ಆರೆಸ್ಸೆಸ್ ಪಥಸಂಚಲ.

ತುಮಕೂರು,(ಅ.18) ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗಳ ನಿಷೇಧ ಕುರಿತಂತೆ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದು, ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗಳಿಗೆ ನಿಷೇಧಿಸಿರುವ ಸರ್ಕಾರದ ತೀರ್ಮಾನ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ತುಮಕೂರಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ಕಾರ್ಯಕರ್ತರು ಸರ್ಕಾರಕ್ಕೆ ಸವಾಲೆಸೆಯುವಂತೆ ಸುಮಾರು 4 ಕಿಮೀ ಉದ್ದದ ಭವ್ಯ ಪಥಸಂಚಲನ ನಡೆಸಿದರು. ಈ ಕಾರ್ಯಕ್ರಮದಲ್ಲಿ ಸುಮಾರು 5,000 ಕಾರ್ಯಕರ್ತರು ಭಾಗವಹಿಸಿದರು.

ಪಥಸಂಚಲನದ ವಿವರ:

ತುಮಕೂರು ನಗರದ ಪ್ರಮುಖ ರಸ್ತೆಗಳಾದ ಎಂಜಿ ರಸ್ತೆ, ಹೊರಪೇಟೆ ರಸ್ತೆ, ಮತ್ತು ರಾಧಾಕೃಷ್ಣ ರಸ್ತೆಗಳ ಮೂಲಕ ನಡೆದ ಈ ಪಥಸಂಚಲನವು ಗಾಯತ್ರಿ ಥಿಯೇಟರ್‌ನಿಂದ ಆರಂಭಗೊಂಡು ಸರ್ಕಾರಿ ಕಾಲೇಜು ಮೈದಾನದಲ್ಲಿ ಕೊನೆಗೊಂಡಿದೆ. ಸಾರ್ವಜನಿಕರು ಹೂಮಳೆ ಸುರಿಸಿ ಕಾರ್ಯಕರ್ತರನ್ನು ಬರಮಾಡಿಕೊಂಡರು.

ಪೊಲೀಸರಿಂದ ಬಂದೋಬಸ್ತ್:

ಪಥಸಂಚಲನದ ಸಂದರ್ಭದಲ್ಲಿ ಪೊಲೀಸ್ ಇಲಾಖೆಯು ಭದ್ರತೆಗಾಗಿ ಬಿಹೆಚ್ ರಸ್ತೆಯನ್ನು ಸುಮಾರು ಮೂರು ಗಂಟೆಗಳ ಕಾಲ ಬಂದ್ ಮಾಡಿತ್ತು. ತುಮಕೂರು ನಗರವನ್ನು ಸಂಪರ್ಕಿಸುವ ಎಲ್ಲಾ ವಾಹನಗಳನ್ನು ಪೊಲೀಸ್ ಇಲಾಖೆ ಬೇರೆ ಮಾರ್ಗಗಳಿಗೆ ಸಂಚರಿಸಲು ಅನುವು ಮಾಡಿಕೊಟ್ಟರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!