* ತಂತ್ರಜ್ಞಾನದ ಮೂಲಕ ಆರೋಗ್ಯ ಸೇವೆಗಳ ಪೂರೈಕೆ ಸಾಧ್ಯ
* ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿಕೆ
* ಅಂತಾರಾಷ್ಟ್ರೀಯ ವಿಚಾರ ಸಂಕಿರಣ
ಬೆಂಗಳೂರು, (ಡಿ.09): ಸಮರ್ಥ ತಂತ್ರಜ್ಞಾನಗಳನ್ನು (Technology ) ಅಳವಡಿಸಿಕೊಳ್ಳುವ ಮೂಲಕ ಸಾರ್ವಜನಿಕ ಮತ್ತು ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಆಯುಷ್ (AYUSH) ಪದ್ಧತಿಯ ಮುಖಾಂತರ ಜನರಿಗೆ ತಲುಪಿಸಬಹುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
`ಆಯುಷ್ ಪದ್ಧತಿಯ ಮೂಲಕ ಸಾರ್ವಜನಿಕ ಮತ್ತು ಪ್ರಾಥಮಿಕ ಆರೋಗ್ಯ ಸೇವೆಗಳ ಪೂರೈಕೆ’ ಕುರಿತು ಇಂದು (ಡಿ.09) ಏರ್ಪಡಿಸಲಾಗಿದ್ದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ `ಜಿಜ್ಞಾಸಾ’ದಲ್ಲಿ (Jignasa 2021 International Conference) ಭಾಗವಹಿಸಿ ಮಾತನಾಡಿದರು.
ಕೋವಿಡ್ 9Covid) ನಂತರದ ಪರಿಸ್ಥಿತಿಯು ಜಗತ್ತನ್ನು ಭೌತಿಕವಾಗಿ ದೂರವಿಟ್ಟಿದ್ದು, ಎಲ್ಲವೂ ವರ್ಚುಯಲ್ ಆಗಿವೆ. ಆದರೆ, ಈ ರೂಪವು ಹೆಚ್ಚು ಪರಿಣಾಮಕಾರಿ ಎನ್ನುವುದು ಕೂಡ ಈಗ ಸಾಬೀತಾಗಿದೆ. ಸಮಸ್ಯೆಗಳಿಗೆ ಹೆದರದೆ ನಾವು ಅವುಗಳನ್ನು ಎದುರಿಸಿ, ಸರಿಯಾದ ಪರಿಹಾರಗಳನ್ನು ಕಂಡುಹಿಡಿಯಬೇಕು ಎಂದು ಹೇಳಿದರು.
Karnataka Sign MoU With NSE Academy: ಹಣಕಾಸು ಶಿಕ್ಷಣಕ್ಕೆ ಹೊಸ ಕಿಂಡಿ
ಆಯುಷ್ ಪದ್ಧತಿಯಲ್ಲಿನ ಚಿಕಿತ್ಸೆಗಳ ಮೂಲಕ ಮನುಷ್ಯನ ಆರೋಗ್ಯವನ್ನು ಹೇಗೆ ಪರಿಪೂರ್ಣವಾಗಿ ಕಾಪಾಡಬಹುದು ಎನ್ನುವುದು ನಮ್ಮ ಪ್ರಾಚೀನ ವಿಜ್ಞಾನದಲ್ಲಿ ಇದೆ. ಈಗ ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಂಡು, ಸಮಗ್ರ ಬೆಳವಣಿಗೆಯ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.
ತಂತ್ರಜ್ಞಾನದ ಮೂಲಕ ನಾವು ಇಡೀ ಜಗತ್ತನ್ನು ತಲುಪಬಹುದು. ಇದರಲ್ಲಿ ಮುಂಚೂಣಿಯಲ್ಲಿರುವುದೇ ಕರ್ನಾಟಕ ರಾಜ್ಯದ ಮತ್ತು ಬೆಂಗಳೂರಿನ ಶಕ್ತಿಯಾಗಿದೆ. ಆಯುಷ್ ಪದ್ಧತಿಯ ಮೂಲಕ ಇಡೀ ಜಗತ್ತು ಭಾರತದ ಕಡೆಗೆ ನೋಡುವಂತೆ ಮಾಡಬೇಕು ಎಂದು ಸಚಿವರು ನುಡಿದರು.
Grand inauguration of Jignasa 2021 International Conference at Bengaluru, Karnataka.
A virtual conference managed completely by the student community across India.
"Upcoming era is of AYUSH industries."
- Dr. Ashwath Narayan ji, Science & Technology Minister, Karnataka. pic.twitter.com/kfZWF2knV0
ಕಾರ್ಯಕ್ರಮದಲ್ಲಿ ಹೆಸರಾಂತ ವೈದ್ಯ ಡಾ.ಗಂಗಾಧರ್, ಡಾ.ಸಿ.ಎನ್. ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು
ಆಯುರ್ವೇದ ಉತ್ಪನ್ನಗಳು ಮತ್ತು ಚಿಕಿತ್ಸಾ ಪದ್ಧತಿಗೆ ಜಾಗತಿಕ ಹಿತಾಸಕ್ತಿ ದಿನೇದಿನೆ ಹೆಚ್ಚಾಗುತ್ತಿದೆ. ವಿಶ್ವಾದ್ಯಂತ ಆಯುರ್ವೇದ ಉತ್ಪನ್ನಗಳನ್ನು ಜನಪ್ರಿಯಗೊಳಿಸಲು ನಡೆಸುತ್ತಿರುವ ಎಲ್ಲಾ ಪ್ರಯತ್ನಗಳು ಶ್ಲಾಘನೀಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಕಾಲಘಟ್ಟದಲ್ಲಿ ಆಯುರ್ವೇದ ಉತ್ಪನ್ನಗಳಿಗೆ ಜಗತ್ತಿನಾದ್ಯಂತ ಸ್ಥಿತವಾಗಿ ಬೇಡಿಕೆ ಹೆಚ್ಚುತ್ತಿದೆ. ಸಮಕಾಲೀನ ಪರಿಸ್ಥಿತಿಯು ಆಯುರ್ವೇದ ಉತ್ಪನ್ನಗಳು ಮತ್ತು ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿ ಜಾಗತಿಕವಾಗಿ ಹೆಚ್ಚು ಜನಪ್ರಿಯವಾಗಲು ಇದು ಸಕಾಲವಾಗಿದೆ. ಇದರ ಬಗ್ಗೆ ಜನರ ಆಸಕ್ತಿ ಹೆಚ್ಚಾಗುತ್ತಿದೆ. ಯೋಗಕ್ಷೇಮ ಸುಧಾರಿಸಿಕೊಳ್ಳಲು ಇಡೀ ವಿಶ್ವದ ಜನರು ಆಧುನಿಕ ಮತ್ತು ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳನ್ನು ಕಾತರದಿಂದ ನೋಡುತ್ತಿದ್ದಾರೆ. ಆಯುರ್ವೇದದಲ್ಲಿ ಸಿಗುತ್ತಿರುವ ನಾನಾ ಪ್ರಯೋಜನಗಳು ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಳದಲ್ಲಿ ಅದರ ಪಾತ್ರವನ್ನು ಜನರು ಮನಗಾಣುತ್ತಿದ್ದಾರೆ ಎಂದು ಹೇಳಿದ್ದರು.
ಆಧುನಿಕ ಮತ್ತು ಸಾಂಪ್ರದಾಯಿಕ ಚಿಕಿತ್ಸಾ ವಿಧಾನಗಳ ಸಂಯೋಜನೆಯಿಂದ ಲಭ್ಯವಾಗಿರುವ ವಿಫುಲ ಅವಕಾಶಗಳನ್ನು ಬಳಸಿಕೊಳ್ಳಿ. ನಮ್ಮ ಯುವ ಸಮುದಾಯ ವಿವಿಧ ಆಯುರ್ವೇದ ಉತ್ಪನ್ನಗಳನ್ನು ಬಳಸುತ್ತಿದ್ದಾರೆ ಎಂದು ಉಲ್ಲೇಖಿಸಿದ ಅವರು, ಸಾಕ್ಷ್ಯಾಧರಿತ ವೈದ್ಯಕೀಯ ವಿಜ್ಞಾನದ ಜತೆ ಆಯುರ್ವೇದವನ್ನು ಸಂಯೋಜಿಸುವ ಪ್ರಜ್ಞಾವಂತಿಕೆ ಹೆಚ್ಚಾಗಿ ಬೆಳೆಯುತ್ತಿದೆ. ಈ ನಿಟ್ಟಿನಲ್ಲಿ ಶಿಕ್ಷಣ ವಲಯದ ತಜ್ಞರು ಮತ್ತು ಸಂಶೋಧಕರು ಆಯುರ್ವೇದ ಮತ್ತು ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿ ಬಗ್ಗೆ ಆಳ ಸಂಶೋಧನೆ ನಡೆಸಬೇಕು. ನವೋದ್ಯಮಗಳು ಆಯುರ್ವೇದ ಉತ್ಪನ್ನಗಳನ್ನು ತಯಾರಿಸಲು ವಿಶೇಷ ಗಮನ ಹರಿಸಬೇಕು ಎಂದು ನೀಡಿದ್ದರು.