ರಾಯರ ಸನ್ನಿಧಿಯಲ್ಲಿ ಕಾಂಗ್ರೆಸ್ ವಿರುದ್ಧ ಅಶ್ವತ್ಥ್ ನಾರಾಯಣ ಕಿಡಿ: ದೇಶದಲ್ಲೇ ನಂಬರ್ 1 ಭ್ರಷ್ಟ ಸರ್ಕಾರ ಎಂದು ವಾಗ್ದಾಳಿ!

Published : Feb 24, 2026, 10:28 PM IST
Ashwath Narayan Slams Congress at Mantralayam Karnataka Country s No1 Corrupt Govt

ಸಾರಾಂಶ

ಮಂತ್ರಾಲಯದ ಗುರು ವೈಭವೋತ್ಸವದಲ್ಲಿ ಭಾಗವಹಿಸಿದ ಮಾಜಿ ಸಚಿವ ಅಶ್ವತ್ಥ್ ನಾರಾಯಣ, ರಾಯರ ದರ್ಶನ ಪಡೆದರು. ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕರ್ನಾಟಕವನ್ನು ದೇಶದಲ್ಲೇ ನಂಬರ್ ಒನ್ ಭ್ರಷ್ಟ ರಾಜ್ಯವನ್ನಾಗಿ ಮಾಡಿದ್ದಾರೆ ಎಂದು ಆರೋಪಿಸಿದರು.

ರಾಯಚೂರು (ಫೆ.24): ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನಡೆಯುತ್ತಿರುವ ಗುರು ವೈಭವೋತ್ಸವದ ಸಂಭ್ರಮದಲ್ಲಿ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಭಾಗಿಯಾಗಿದರು. ರಾಯರ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಮಂತ್ರಾಲಯವು ಲಕ್ಷಾಂತರ ಭಕ್ತರ ಆತ್ಮಕ್ಕೆ ಶಕ್ತಿ ನೀಡುವ ಪುಣ್ಯಭೂಮಿ, ಮಹಾನ್ ಆಧ್ಯಾತ್ಮಿಕ ಕೇಂದ್ರವಾಗಿದೆ. ಬೇಡಿದ ವರ ನೀಡುವ ಗುರುಗಳ ಆಶೀರ್ವಾದ ಪಡೆಯಲು ನಾನು ಆಗಮಿಸಿದ್ದು, ರಾಯರ ಕೃಪೆ ಎಲ್ಲರ ಮೇಲಿರಲಿ' ಎಂದು ಭಕ್ತಿಪೂರ್ವಕವಾಗಿ ನುಡಿದರು.

ಕಾಂಗ್ರೆಸ್ಸಿಗರಿಗೆ ಅಧಿಕಾರದ ಆಸೆ, ಜನರ ಕಾಳಜಿ ಇಲ್ಲ

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಅಶ್ವತ್ಥ್ ನಾರಾಯಣ, ಕಾಂಗ್ರೆಸ್ ನಾಯಕರಿಗೆ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಟೀಕಿಸಿದರು. ಅಧಿಕಾರಕ್ಕೆ ಬಂದ ಉದ್ದೇಶವನ್ನೇ ಮರೆತು ನಾಯಕರು ತಮ್ಮ ತಮ್ಮ ಸ್ಥಾನಗಳಿಗಾಗಿ ಕಿತ್ತಾಟ ನಡೆಸುತ್ತಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿ ಕುಳಿತವರು ಬರೀ ಕುರ್ಚಿ ಕಾಳಗದಲ್ಲಿ ತೊಡಗಿದ್ದಾರೆ ಎಂದು ಮಂತ್ರಾಲಯದಲ್ಲಿ ವಾಗ್ದಾಳಿ ನಡೆಸಿದರು.

ಭ್ರಷ್ಟಾಚಾರದಲ್ಲಿ ದೇಶದಲ್ಲಿ ನಂ.1 ರಾಜ್ಯ ಸರ್ಕಾರ

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ಕಿಡಿಕಾರಿದ ಅವರು, ಇಡೀ ರಾಜ್ಯದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಯಾವುದೇ ಕ್ಷೇತ್ರದಲ್ಲಿ ಪ್ರಗತಿ ಕಾಣುತ್ತಿಲ್ಲ, ಬದಲಾಗಿ ಭ್ರಷ್ಟಾಚಾರ ಮಿತಿಮೀರಿದೆ. ಇಂದು ಇಡೀ ದೇಶದಲ್ಲೇ ಕರ್ನಾಟಕವನ್ನು ನಂಬರ್ ಒನ್ ಭ್ರಷ್ಟ ರಾಜ್ಯವನ್ನಾಗಿ ಕಾಂಗ್ರೆಸ್ ಮಾಡಿದೆ. ಜನಸಾಮಾನ್ಯರ ಸಂಕಷ್ಟ ಕೇಳುವವರಿಲ್ಲದಂತಾಗಿದೆ ಎಂದು ಭ್ರಷ್ಟ ಆಡಳಿತದ ವಿರುದ್ಧ ರಾಯರ ಸನ್ನಿಧಿಯಲ್ಲಿ ಗುಡುಗಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka Rains: ಬಂಗಾಳಕೊಲ್ಲಿ ವಾಯುಭಾರ ಕುಸಿತ; ಉತ್ತರಕನ್ನಡದಲ್ಲಿ ಗುಡುಗು ಸಹಿತ ಮಳೆ, ಕಾಫಿನಾಡಲ್ಲೂ ವರ್ಷಧಾರೆ!
ರೈಲ್ವೆ ರಕ್ಷಣೆ ತರಬೇತಿ ಕಲಿಯಲು ಬೆಂಗಳೂರಿನ ಭಾರತೀಯ ರೈಲ್ವೆ ವಿಭಾಗಕ್ಕೆ ಬಂದ ತಾಂಜೇನಿಯಾ ಸಿಬ್ಬಂದಿಗಳು