Coronavirus ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ಸ್ಫೋಟ, ಅಶ್ವಥ್ ನಾರಾಯಣ ಆತಂಕ

By Suvarna NewsFirst Published Jan 19, 2022, 3:50 PM IST
Highlights

* ಮುಂದಿನ ದಿನಗಳಲ್ಲಿ ಕೋವಿಡ್ ಕೇಸ್ ಸ್ಫೋಟಿಸುವ ಆತಂಕ
* ಆತಂಕ‌ ವ್ಯಕ್ತಪಡಿಸಿದ ಸಚಿವ ಡಾ.ಅಶ್ವತ್ಥನಾರಾಯಣ 
* ರಾಜ್ಯದಲ್ಲಿ ಕೇಸ್ ಹೆಚ್ವಳವಾಗುವ ನಿರೀಕ್ಷೆ ಇದೆ ಎಂದ ಸಚಿವರು

ಬೆಂಗಳೂರು, (ಜ.19) : ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ (Covid-19 ಕೇಸ್ ಸ್ಫೋಟಿಸುವ ಆತಂಕ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ (Dr CN Ashwath Narayan) ಆತಂಕ‌ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಜನವರಿ 26ರ ಸುಮಾರಿಗೆ ರಾಜ್ಯದಲ್ಲಿ ಕೇಸ್ ಹೆಚ್ವಳವಾಗುವ ನಿರೀಕ್ಷೆ ಇದೆ. ಇದನ್ನೇ ತಜ್ಞರು ಅಂದಾಜಿಸಿದ್ದಾರೆ ಎಂದು ಹೇಳಿದರು.

HD Kumaraswamy ಶಾಲಾ-ಕಾಲೇಜು ಬಂದ್ ಸೇರಿದಂತೆ ಸರ್ಕಾರಕ್ಕೆ ಕೆಲ ಸಲಹೆ ಕೊಟ್ಟ ಕುಮಾರಸ್ವಾಮಿ

ಕರ್ಫ್ಯೂ, ವೀಕ್ ಎಂಡ್ ಕರ್ಫ್ಯೂ ಕುರಿತು ಕುರಿತು ಶುಕ್ರವಾರ ಸಭೆ ನಡೆಯಲಿದೆ.ಕಿವಿ ಕಣ್ಣು ತೆರೆದು ನಿರ್ಧಾರ ಕೈಗೊಳ್ಳಲು ಸರ್ಕಾರ ಚಿಂತಿಸಿದೆ.ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲದಕ್ಕೂ ಆದ್ಯತೆ ನೀಡಲು ಸಿಎಂ‌ ನಿರ್ಧರಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಎಲ್ಲಾ ಕಡೆ ಟೆಸ್ಟ್ ಜಾಸ್ತಿ ಮಾಡಿ ಅಂತಾನೇ ಹೇಳುತ್ತಿರೋದು. ಟೆಸ್ಟ್ ಮಾಡಿಸಿಕೊಳ್ಳಿ ಅಂತಾ ನಾವು ಯಾರಿಗೂ ಫೋರ್ಸ್ ಮಾಡಲ್ಲ. ಟೆಸ್ಟ್ ಮಾಡಿ ಟ್ರೀಟ್ ಮಾಡಿ ಅಂತಾನೇ ಇವತ್ತಿಗೂ ನಿರ್ದೇಶನ ಇದೆ. ಬಿಯು ನಂಬರ್ ಸಮಸ್ಯೆ ಆಗುತ್ತಿರುವುದರ ಬಗ್ಗೆ ಗಮನ ಹರಿಸಲಾಗುತ್ತದೆ.ಬೇರೆ ದೇಶದಲ್ಲಿ ನಿರ್ವಹಣೆ ಮಾಡಲು ತತ್ತರಿಸಿ ಹೋಗಿದ್ದಾರೆ. ಸರ್ಕಾರ ಎಲ್ಲವನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲವನ್ನೂ ಆದ್ಯತೆ ಕೊಟ್ಟು ಕೆಲಸ ಮಾಡುತ್ತದೆ ಎಂದರು.

ವಿದ್ಯಾರ್ಥಿಗಳಿಗೆ ಲಸಿಕೆ ಕೊಟ್ಟಿರುವ ಕಾರಣ ಯಾವುದೇ ಸಮಸ್ಯೆ ಇಲ್ಲದೆ ಮುಂದೆ ಸಾಗಲು ಸಾಧ್ಯವಾಗುತ್ತಿದೆ. ವಾಹನದಲ್ಲಿ ಹೇಗೆ ಬಂದು‌ ಲಸಿಕೆ ಪಡೆಯುತ್ತಾರೋ ಹಾಗೆ ಇದೀಗ ಟೆಸ್ಟ್ ಕೂಡ ಮಾಡಿಸಬಹುದು. ಮನೆಗಳ ಮುಂದೆ ಬಂದು‌ ಕೂಡ ಟೆಸ್ಟ್ ಮಾಡಿಸಿಕೊಳ್ಳಬಹುದು ತಿಳಿಸಿದರು.

 ಪ್ರತಿದಿನದ ಸೋಂಕು ಪ್ರಕರಣಗಳು 1 ಲಕ್ಷ ದಾಟಬಹುದು
ಕರ್ನಾಟಕದಲ್ಲಿ ಕೊರೊನಾ ಸೋಂಕಿನ 3ನೇ ಅಲೆಯು ಉತ್ತುಂಗಕ್ಕೆ ಹೋದಾಗ ಪ್ರತಿದಿನ ಸರಾಸರಿ 80 ಸಾವಿರದಿಂದ 1.20 ಲಕ್ಷ ಮಂದಿಯಲ್ಲಿ ಸೋಂಕು ಕಾಣಿಸಿಕೊಳ್ಳಬಹುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ ಹೇಳಿದ್ದಾರೆ.

 ಈ ವಿಷಯವನ್ನು ತಜ್ಞರ‌ ವರದಿ ತಿಳಿಸಿದೆ. ವರದಿಯಲ್ಲಿ ಉಲ್ಲೇಖಿಸಿರುವಂತೆಯೇ ಪ್ರಸ್ತುತ ಸೋಂಕು ಪ್ರಕರಣಗಳು ವರದಿಯಾಗುತ್ತಿವೆ. ಏರಿದಷ್ಟೇ ವೇಗವಾಗಿ ಸೋಂಕು ಪ್ರಕರಣಗಳು ಇಳಿಯಬಹುದು. ಫೆಬ್ರುವರಿ 2 ಅಥವಾ 3ನೇ ವಾರದಲ್ಲಿ ಸೋಂಕು ಪ್ರಕರಣಗಳು ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದರು.

ದೇಶದಲ್ಲಿಯೇ ಕರ್ನಾಟಕ ರಾಜ್ಯದಲ್ಲಿ ಅತಿಹೆಚ್ಚು ಕೊರೊನಾ ಟೆಸ್ಟ್​ ಮಾಡಲಾಗುತ್ತಿದೆ. ಪ್ರತಿದಿನ 2ರಿಂದ 2.50 ಲಕ್ಷ ಟೆಸ್ಟ್ ಆಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕೊವಿಡ್ ಕೇಸ್ ಹೆಚ್ಚಾಗುತ್ತಿದೆ. ಇಂದು ಪಾಸಿಟಿವಿಟಿ ಪ್ರಮಾಣ ಹೆಚ್ಚಾಗಿದ್ದು, ಸಾವಿನ ಪ್ರಮಾಣ ಕಡಿಮೆಯಾಗಿದೆ. ವೀಕೆಂಡ್​ ಕರ್ಫ್ಯೂ ಬಗ್ಗೆ ಶುಕ್ರವಾರದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು. ತಾಂತ್ರಿಕ ಸಲಹಾ ಸಮಿತಿ ಸಲಹೆ ಪಡೆದು ಮುಂದಿನ ಕ್ರಮಗಳ ಬಗ್ಗೆ ತೀರ್ಮಾಣ ತೆಗೆದುಕೊಳ್ಳುತ್ತೇವೆ ಎಂದು ಅವರು ವಿವರಿಸಿದರು. ಮಾಸ್ಕ್ ಬೇಡ ಎಂಬ ಸಚಿವ ಉಮೇಶ್ ಕತ್ತಿ ಹೇಳಿಕೆ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಅವರು, ಅವರೇ ಮತ್ತೆ ಸ್ಪಷ್ಟೀಕರಣವನ್ನೂ ಕೊಟ್ಟಿದ್ದಾರೆ ಎಂದರು.

ಕೊವಿಡ್​ ಕೇರ್​ ಸೆಂಟರ್​ ಸ್ಥಾಪನೆ ಹಾಗೂ ನಿರ್ವಹಣೆ ಕುರಿತು 18 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚಿಸಿದ್ದಾರೆ. ಒಂದೆರಡು ವಾರಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾದರೂ ಅದನ್ನು ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅವರು ಸೂಚಿಸಿದರು. ಆರೋಗ್ಯ ಇಲಾಖೆ ಸಿಬ್ಬಂದಿ ಬೂಸ್ಟರ್​ ಡೋಸ್​ ಪಡೆಯಬೇಕು. ಫ್ರಂಟ್​ಲೈನ್ ವಾರಿಯರ್ಸ್​​ ಇರುವುದರಿಂದ ಲಸಿಕೆ ಪಡೆಯಿರಿ ಎಂದು ಅವರು ಸೂಚಿಸಿದರು. 15-17 ವರ್ಷದ ಶೇ 60ರಷ್ಟು ಮಕ್ಕಳಿಗೆ ಲಸಿಕೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಲಸಿಕಾರಣವನ್ನು ಪೂರ್ಣಗೊಳಿಸಲಾಗುವುದು ಎಂದರು.

ಬೆಂಗಳೂರು ನಗರದಲ್ಲಿ ಇಂದು 25,595 ಕೊರೊನಾ ಪ್ರಕರಣ​ ಪತ್ತೆಯಾಗಿವೆ. ಬೆಂಗಳೂರು ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ 16 ಸಾವಿರ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದ ಜನರು ಕೊರೊನಾ ನಿಯಮಗಳನ್ನು ಪಾಲಿಸಿಬೇಕು. ರಾಜ್ಯದಲ್ಲಿ ಇಂದು ಒಟ್ಟು 41,457 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ 22.03ರಷ್ಟಿದೆ. ಲಸಿಕೆ ಪಡೆಯದವರ ಮೇಲೆ ಈ ಬಾರಿ ವೈರಸ್​ ಪ್ರಭಾವ ಹೆಚ್ಚು ಎಂದು ಹೇಳಿದರು.

click me!