ಏಷ್ಯಾನೆಟ್‌ ಇಂಡಿಯಾ @75 ಯಾತ್ರೆ ರಾಜ್ಯದಲ್ಲಿ ಸಂಪನ್ನ

Published : Aug 03, 2022, 11:27 AM IST
ಏಷ್ಯಾನೆಟ್‌ ಇಂಡಿಯಾ @75 ಯಾತ್ರೆ ರಾಜ್ಯದಲ್ಲಿ ಸಂಪನ್ನ

ಸಾರಾಂಶ

ದೇಶಕ್ಕೆ ಸ್ವಾತಂತ್ರ್ಯ ದೊರಕಿ 75 ವರ್ಷ ಆಗುತ್ತಿರುವ ಹಿನ್ನೆಲೆಯಲ್ಲಿ ಏಷ್ಯಾನೆಟ್‌ ನ್ಯೂಸ್‌ ನೆಟ್‌ವರ್ಕ್ ವತಿಯಿಂದ ‘ಇಂಡಿಯಾ-75’ ಹೆಸರಲ್ಲಿ ಹಮ್ಮಿಕೊಂಡಿರುವ ಸ್ವಾತಂತ್ರ್ಯದ ಅಮೃತ ಮಹೋತ್ಸವ ಯಾತ್ರೆಯ ಕರ್ನಾಟಕ ಚರಣ ಮಂಗಳವಾರ ಮುಕ್ತಾಯಗೊಂಡಿದ್ದು, ಮುಂದಿನ ಚರಣಗಳಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಎದುರು ಚಾಲನೆ ನೀಡಲಾಯಿತು.

ಬೆಂಗಳೂರು (ಆ.3} : ದೇಶಕ್ಕೆ ಸ್ವಾತಂತ್ರ್ಯ ದೊರಕಿ 75 ವರ್ಷ ಆಗುತ್ತಿರುವ ಹಿನ್ನೆಲೆಯಲ್ಲಿ ಏಷ್ಯಾನೆಟ್‌ ನ್ಯೂಸ್‌ ನೆಟ್‌ವರ್ಕ್(Asianet News Network) ವತಿಯಿಂದ ‘ಇಂಡಿಯಾ-75’ ಹೆಸರಲ್ಲಿ ಹಮ್ಮಿಕೊಂಡಿರುವ ಸ್ವಾತಂತ್ರ್ಯದ ಅಮೃತ ಮಹೋತ್ಸವ ಯಾತ್ರೆಯ ಕರ್ನಾಟಕ ಚರಣ ಮಂಗಳವಾರ ಮುಕ್ತಾಯಗೊಂಡಿದ್ದು, ಮುಂದಿನ ಚರಣಗಳಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಎದುರು ಚಾಲನೆ ನೀಡಲಾಗಿದೆ.

ಕೇರಳದ(Kerala)ಲ್ಲಿ ಅಲ್ಲಿನ ರಾಜ್ಯಪಾಲ ಆರಿಫ್‌ ಮೊಹಮ್ಮದ್‌(Arif Mohmed) ಅವರು ಚಾಲನೆ ನೀಡಿದ್ದರು. ಅಲ್ಲಿಂದ ಆರಂಭಗೊಂಡ ಯಾತ್ರೆ ಜು.21ರಂದು ಕರ್ನಾಟಕ(Karnataka)ಕ್ಕೆ ಆಗಮಿಸಿತು. ಇಲ್ಲಿನ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌(Thawar Chand Gehlot), ಯಾತ್ರೆಯ ಧ್ವಜವನ್ನು ಸ್ವೀಕರಿಸಿ ಎನ್‌ಸಿಸಿ ಕೆಡೆಟ್‌(National Cadet)ಗಳಿಗೆ ಹಸ್ತಾಂತರಿಸುವ ಮೂಲಕ ರಾಜ್ಯದ ಪ್ರಮುಖ ಸ್ಥಳಗಳಿಗೆ ಭೇಟಿ ನೀಡುವ ಯಾತ್ರೆಗೆ ಶುಭ ಕೋರಿದ್ದರು. ರಾಜಭವನ, ರಾಷ್ಟ್ರೀಯ ಸೈನಿಕ ಸ್ಮಾರಕ, ಭಾರತೀಯ ವಿಜ್ಞಾನ ಸಂಸ್ಥೆ, ಇಸ್ರೋ ಸೇರಿದಂತೆ ಇತರೆ ಸ್ಥಳಗಳಿಗೆ ಎನ್‌ಸಿಸಿ ಕೆಡೆಟ್‌ಗಳು ಯಾತ್ರೆ ನಡೆಸಿದ್ದರು.

ಏಷ್ಯಾನೆಟ್ ಗ್ರೂಪ್‌ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಯಾತ್ರೆ ಕರ್ನಾಟಕ ಸಂಚಾರ ಅಂತ್ಯ

ಮಂಗಳವಾರ ವಿಧಾನಸೌಧದೆದುರು ನಡೆದ ಸಮಾರಂಭದಲ್ಲಿ ಕಂದಾಯ ಸಚಿವ ಆರ್‌.ಅಶೋಕ್‌(R.Ashok), ಎನ್‌ಸಿಸಿ ಕೆಡೆಟ್‌ಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಈ ಮೂಲಕ ರಾಜ್ಯದಲ್ಲಿ ಯಾತ್ರೆ ಸಂಪನ್ನವಾಗಿದ್ದು, ಉಳಿದ ಭಾಗದಲ್ಲಿ ಸಾಫ್‌್ಟವೇರ್‌ ಎಂಜಿನಿಯರ್‌ ಅನಂತ್‌ ರಾಮ್‌ಪ್ರಸಾದ್‌ ಜೀಪ್‌ನಲ್ಲಿ ಯಾತ್ರೆ ಮುಂದುವರಿಸಲಿದ್ದಾರೆ. ಅವರಿಗೆ ಸಚಿವ ಅಶೋಕ್‌ ಹಾಗೂ ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಅವರು ಧ್ವಜ ಹಸ್ತಾಂತರಿಸಿದರು. ಯಾತ್ರೆಯು ಆಂಧ್ರ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರಪ್ರದೇಶ, ದೆಹಲಿ, ಹರ್ಯಾಣ, ಚಂಡೀಘಡ, ಹಿಮಾಚಲ ಪ್ರದೇಶ ಮೂಲಕ ಲಡಾಖ್‌ಗೆ ತೆರಳಲಿದ್ದು, ಅಲ್ಲಿನ ಹಿಮಾಲಯನ್‌ ಸಂಚಾರದ ಬಳಿಕ ಸಮಾರೋಪಗೊಳ್ಳಲಿದೆ.

ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಸಚಿವ ಅಶೋಕ್‌, ದೇಶದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಾವೆಲ್ಲರೂ ಇದ್ದೇವೆ ಎಂಬುದೇ ನಮ್ಮೆಗೆಲ್ಲಾ ಹೆಮ್ಮೆಯ ಸಂಗತಿ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟವರಲ್ಲಿ ಬಹಳಷ್ಟುಮಂದಿ ಇದ್ದಾರೆ. ಅವರನ್ನು ಗರ್ವದಿಂದ ನೆನಪಿಸಿಕೊಳ್ಳುವುದು ಮೊದಲ ಕರ್ತವ್ಯ. ಅವರ ತ್ಯಾಗ, ಬಲಿದಾನದಿಂದ ಸ್ವಾತಂತ್ರ್ಯ ದೊರಕಿದೆ. ಅವರ ನೆನಪಿಗಾಗಿ ಸ್ವಾತಂತ್ರ್ಯೋತ್ಸವವನ್ನು ಆಚರಣೆ ಮಾಡಲಾಗುತ್ತಿದೆ. ಪ್ರತಿ ವರ್ಷವೂ ಆಚರಣೆ ಮಾಡಲಾಗುತ್ತದೆ. ಆದರೆ, ಈ ಬಾರಿ ನಾವುಗಳು ಅಮೃತ ಮಹೋತ್ಸವದಲ್ಲಿ ಇದ್ದೇವೆ ಎಂದು ಹೇಳಿದರು.

ಆಗಸ್ಟ್ 2 ರಿಂದ 15ರವರೆಗೆ ತಿರಂಗ ಬಾವುಟವನ್ನು ನಿಮ್ಮ ಪ್ರೊಫೈಲ್‌ ಫೋಟೋ ಮಾಡಿಕೊಳ್ಳಬಹುದು: ಮೋದಿ

ಈ ವೇಳೆ ಏಷ್ಯಾನೆಟ್‌ ಸುವರ್ಣನ್ಯೂಸ್‌ ಮತ್ತು ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ, ಇಂಡಸ್‌ 555-ಡಿ ಟಿಎಂಟಿ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಎಸ್‌.ಎಸ್‌.ಶ್ರಿಕಾಂತ್‌, ಆಟ್ರಿಮೆಡ್‌ ಫಾರ್ಮಾಸ್ಯುಟಿಕಲ್ಸ್‌ ಸಂಸ್ಥಾಪಕ ಡಾ ಹೃಷಿಕೇಶ ದಾಮ್ಲೆ, ಎಸ್‌ಪಿಎಸ್‌ ಆಗ್ರೋನಿಕ್ಸ್‌ ವ್ಯವಸ್ಥಾಪಕ ನಿರ್ದೇಶಕ ಸಾವಿತ್ರಿ ಶ್ರೀಕರ್‌ ನಾಗ್‌ ಇತರರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉ.ಕ. ಚರ್ಚೆ ವೇಳೆ ವಿಪಕ್ಷಕ್ಕೆ ತಿರುಗೇಟು: ಸಿಎಲ್‌ಪಿ ನಿರ್ಧಾರ
ಅಧಿವೇಶನದಲ್ಲಿ ಉತ್ತರ ಕರ್ನಾಟಕ ಬಗ್ಗೆ ಚರ್ಚೆ ಶುರು