75 ವರ್ಷದ ಕಾಯುವಿಕೆಗೆ ಕೊನೆಗೂ ಸಿಕ್ತು ಮುಕ್ತಿ; ಕಗ್ಗತ್ತಲ್ಲಲ್ಲಿದ್ದ ಪಾಲಾರ್ ಹಾಡಿಗೆ ಬಂತೂ ಕರೆಂಟ್!

Published : Mar 02, 2025, 10:23 PM ISTUpdated : Mar 02, 2025, 11:09 PM IST
75 ವರ್ಷದ ಕಾಯುವಿಕೆಗೆ ಕೊನೆಗೂ ಸಿಕ್ತು ಮುಕ್ತಿ; ಕಗ್ಗತ್ತಲ್ಲಲ್ಲಿದ್ದ ಪಾಲಾರ್ ಹಾಡಿಗೆ ಬಂತೂ ಕರೆಂಟ್!

ಸಾರಾಂಶ

ಚಾಮರಾಜನಗರ ಜಿಲ್ಲೆಯ ಪಾಲಾರ್ ಸೋಲಿಗರ ಹಾಡಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಏಷಿಯಾನೆಟ್ ಸುವರ್ಣ ನ್ಯೂಸ್ ವರದಿಯಿಂದಾಗಿ 75 ವರ್ಷಗಳ ಕಾಯುವಿಕೆ ಕೊನೆಗೊಂಡಿದೆ, ಗ್ರಾಮಸ್ಥರಲ್ಲಿ ಸಂತಸ ಮೂಡಿದೆ.

-ವರದಿ - ಪುಟ್ಟರಾಜು, ಚಾಮರಾಜನಗರ.

ಚಾಮರಾಜನಗರ (ಮಾ.2): ಅವರೆಲ್ಲಾ ಕಾಡಿನ ಮಕ್ಕಳು, ರಾತ್ರಿಯಾಗ್ತಿದ್ದಂತೆ ಮನೆ ಸೇರಿಕೊಳ್ಳಬೇಕಿತ್ತು. ರಾತ್ರಿ ಅಡುಗೆ, ಊಟ , ಮಕ್ಕಳ ಓದು ಎಲ್ಲವು ಬೆಂಕಿಯ ಬೆಳಕಲ್ಲೇ ನಡೆಸಬೇಕಿತ್ತು. ಹೊರಗೆ ಬಂದರೆ ಕಾಡು ಪ್ರಾಣಿಗಳ ಕಾಟ ಬೇರೆಯಿತ್ತು. ಇದೀಗಾ ಈ ಎಲ್ಲ ಸಮಸ್ಯೆಗಳಿಗೆ ಮುಕ್ತಿ ಸಿಕ್ಕಿದೆ. ಏಷಿಯಾನೆಟ್ ಸುವರ್ಣ ನ್ಯೂಸ್ ವರದಿ ಫಲ ಕೊಟ್ಟಿದ್ದು, ಹಾಡಿ ಜನರ ಬದುಕಲ್ಲಿ ಬೆಳಕು ಹರಿದಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ ನೋಡಿ..

ಹೌದು  ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಕಟ್ಟ ಕಡೆಯ ಕುಗ್ರಾಮ ಪಾಲಾರ್. ಈ ಸೋಲಿಗರ ಹಾಡಿಗೆ ಈವರೆಗೂ ವಿದ್ಯುತ್ ಸಂಪರ್ಕ ಇಲ್ಲದೆ ಅಂಧಕಾರದಲ್ಲಿ ಮುಳುಗಿತ್ತು. ಮಹದೇಶ್ವರ ಬೆಟ್ಟದ ಅರಣ್ಯದೊಳಗೆ  75 ಕ್ಕು ಹೆಚ್ಚು ಸೋಲಿಗರು ಇರುವ ಈ ಹಾಡಿಗೆ ವಿದ್ಯುತ್ ಸೌಲಭ್ಯ ಕಲ್ಪಿಸಲು ಅರಣ್ಯ ಇಲಾಖೆಯ ನಿಯಮಾವಳಿ ಆಡ್ಡಿಯಾಗಿತ್ತು. 

ಇದನ್ನೂ ಓದಿ:  Chamarajanagar elephant: ಕಾಡಾನೆಗಳ ಉಪಟಳಕ್ಕೆ ಸಿಸಿ ಕ್ಯಾಮೆರಾ ಅಸ್ತ್ರ ಪ್ರಯೋಗಿಸಿದ ಗ್ರಾಮಸ್ಥರು! Suvarna News

 

ಸ್ವಾತಂತ್ರ್ಯ ಬಂದು 75 ವರ್ಷ ಕಳೆದರು ವಿದ್ಯುತ್ ಸಂಪರ್ಕ ಇಲ್ಲದೆ ಗ್ರಾಮಸ್ಥರ ಪಾಡು ಹೇಳತೀರದಾಗಿತ್ತು. ಸಂಜೆಯಾಗುತ್ತಿದಂತೆ ಮನೆ ಸೇರಿಕೊಳ್ಳಬೇಕಿತ್ತು. ರಾತ್ರಿ ಅಡುಗೆ ಊಟ ಬೆಂಕಿಯ ಬೆಳಕಲ್ಲೇ ಮಾಡಬೇಕಿತ್ತು. ಮಕ್ಕಳಂತು ಬೆಂಕಿಯ ಬೆಳಕಲ್ಲೇ ಓದಿಕೊಳ್ಳಬೇಕಿತ್ತು. ಕಾಡು ಪ್ರಾಣಿಗಳ ಕಾಟ ಇರುವುದರಿಂದ ರಾತ್ರಿ ವೇಳೆ ಶೌಚಕ್ಕು ಹೊರಬರಲು ಸಾಧ್ಯವಾಗುತ್ತಿರಲಿಲ್ಲ. ಜೋಳ ಅಥವಾ ರಾಗಿ ಹಿಟ್ಟು ಮಾಡಿಸಲು ಗಡಿಯಂಚಿನಲ್ಲಿರುವ ತಮಿಳುನಾಡಿನ ಕೊಳತ್ತೂರು ಗ್ರಾಮಕ್ಕೆ ಹೋಗಬೇಕಿತ್ತು. ಹೀಗೆ ಹತ್ತಾರು ಸಮಸ್ಯೆಗಳಿಂದ ಅಂಧಕಾರದಲ್ಲಿ ಮುಳುಗಿದ್ದ ಪಾಲಾರ್ ಗ್ರಾಮಕ್ಕೆ ಇದೀಗ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. 

ಮಹದೇಶ್ವರ ಬೆಟ್ಟಕ್ಕೆ ಕಾವೇರಿ ನದಿಯಿಂದ ನೀರು ಪೂರೈಸಲು ಅಳವಡಿಸಲಾಗಿದ್ದ ವಿದ್ಯುತ್ ಮಾರ್ಗದಿಂದ ಪ್ರತ್ಯೇಕ ಟಿ ಸಿ ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್,ಮಹದೇವಪ್ಪ ಶಾಸಕರಾದ ಮಂಜುನಾಥ್, ಕೃಷ್ಣಮೂರ್ತಿ ವಿದ್ಯುತ್ ಸಂಪರ್ಕಕ್ಕೆ ಚಾಲನೆ ನೀಡುವ ಮೂಲಕ ಗ್ರಾಮಕ್ಕೆ ವಿದ್ಯುತ್ ಬೆಳಕು ಹರಿದಿದೆ.

ಇನ್ನೂ ವಿದ್ಯುತ್ ಸಂಪರ್ಕ ಇಲ್ಲದೆ ಹತ್ತಾರು ಸಮಸ್ಯೆ ಎದುರಿಸುತ್ತಿದ್ದ ಬುಡಕಟ್ಟು ಸೋಲಿಗರ ಮೊಗದಲ್ಲಿ ಮಂದಹಾಸ ಮೂಡಿದೆ. ಈವರೆಗೂ ವಿದ್ಯುತ್ ಬೆಳಕನ್ನೇ ಕಾಣದ ಪಾಲಾರ್ ಗ್ರಾಮದಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದೆ. ವಿದ್ಯುತ್ ಸಂಪರ್ಕ ಸಿಕ್ಕಿರುವುದು ನಮಗೆ ಕಣ್ಣು ಬಂದಷ್ಟೆ ಸಂತೋಷವಾಗಿದೆ, ನಮ್ಮ ಹಾಡಿಯ ವಿದ್ಯಾರ್ಥಿಗಳು ಚೆನ್ನಾಗಿ ಓದಿ ಮುಂದೆ ಬರ್ತಾರೆ, ನಮ್ಮ ಬಾಳಿನ ಕತ್ತಲೆಯನ್ನು ಹೋಗಲಾಡಿಸಿದ ಏಷಿಯಾನೆಟ್ ಸುವರ್ಣ ನ್ಯೂಸ್  ಪಾಲಾರ್ ಗ್ರಾಮದ ವ್ಯವಸ್ಥೆ ಹಾಗೂ ಮಲೆ ಮಹದೇಶ್ವರ ಬೆಟ್ಟದ ಹಾಡಿಗಳಲ್ಲಿದ್ದ ಕಗ್ಗತ್ತಲ ಬಗ್ಗೆ ವಿಸ್ತ್ರತ ವರದಿ ಕೂಡ ಪ್ರಸಾರ ಮಾಡಿತ್ತು. ಈ ಹಿನ್ನಲೆ ಜನರು ಕೂಡ ಏಷಿಯಾನೆಟ್ ಸುವರ್ಣ ನ್ಯೂಸ್ ಗೆ ಧನ್ಯವಾದ ಹೇಳಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ..

ಇದನ್ನೂ ಓದಿ: Chamarajanagar Oxygen Tragedy | ಕೊಟ್ಟ ಮಾತಿಗೆ ತಪ್ಪಿದ ಸರ್ಕಾರ, ಜಿಲ್ಲಾಡಳಿತ ಭವನದ ಮುಂದೆ ಧರಣಿ| Suvarna News

ಒಟ್ನಲ್ಲಿ ಮೊದಲ ಹಂತದಲ್ಲಿ ಪಾಲಾರ್ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ನೀಡಲಾಗಿದ್ದು ಮುಂದೆ 48 ಕೋಟಿ ವೆಚ್ಚದಲ್ಲಿ ಚಾಮರಾಜನಗರ ಜಿಲ್ಲೆಯ 22 ಸೋಲಿಗ ಹಾಡಿಗಳಿಗೆ  ವಿದ್ಯುತ್ ಸಂಪರ್ಕ ಕಲ್ಪಿಸಲು ಜಿಲ್ಲಾಡಳಿತ ಕ್ರಮ ವಹಿಸಿದೆ. ಏಷಿಯಾನೆಟ್ ಸುವರ್ಣ ನ್ಯೂಸ್ ವರದಿಯಿಂದ ವಿದ್ಯುತ್ ಸಿಕ್ಕಿದೆ ಎಂದು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ..

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌