ಹಲ್ಲೆ, ಜಾತಿ ನಿಂದನೆ: ಸಚಿವ ಡಿ.ಸುಧಾಕರ್‌ ಸೇರಿ ಮೂವರ ವಿರುದ್ಧ ಕೇಸ್‌

Published : Sep 11, 2023, 06:29 AM IST
ಹಲ್ಲೆ, ಜಾತಿ ನಿಂದನೆ: ಸಚಿವ ಡಿ.ಸುಧಾಕರ್‌ ಸೇರಿ ಮೂವರ ವಿರುದ್ಧ ಕೇಸ್‌

ಸಾರಾಂಶ

ದೌರ್ಜನ್ಯ, ವಂಚನೆ, ಹಲ್ಲೆ ಮತ್ತು ಜಾತಿ ನಿಂದನೆ ಆರೋಪದಡಿ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್‌ ಸೇರಿ ಮೂವರ ವಿರುದ್ಧ ಯಲಹಂಕ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಬೆಂಗಳೂರು (ಸೆ.11):  ದೌರ್ಜನ್ಯ, ವಂಚನೆ, ಹಲ್ಲೆ ಮತ್ತು ಜಾತಿ ನಿಂದನೆ ಆರೋಪದಡಿ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್‌ ಸೇರಿ ಮೂವರ ವಿರುದ್ಧ ಯಲಹಂಕ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಯಲಹಂಕ ನಿವಾಸಿ ಸುಬ್ಬಮ್ಮ ಎಂಬುವವರು ನೀಡಿದ ದೂರಿನ ಮೇರೆಗೆ ಸೆವೆನ್‌ ಹಿಲ್ಸ್‌ ಡೆವಲಪರ್ಸ್‌ ಮತ್ತು ಟ್ರೇಡ​ರ್‍ಸ್ ಪಾಲುದಾರರಾದ ಸಚಿವ ಡಿ.ಸುಧಾಕರ್‌, ಶ್ರೀನಿವಾಸ್‌, ಭಾಗ್ಯಮ್ಮ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರು: ಸ್ಕ್ಯಾನಿಂಗ್‌ಗೆ ಬಂದಿದ್ದ ಯುವತಿ ಜತೆ ಅಸಭ್ಯ ವರ್ತನೆ: ಟೆಕ್ನಿಶಿಯನ್‌ ಜೈಲಿಗೆ

ಸೆವೆನ್‌ ಹಿಲ್ಸ್‌ ಡೆವಲಪರ್ಸ್‌ ಮತ್ತು ಟ್ರೇಡ​ರ್‍ಸ್ನವರು(Seven Hills Developers and Traders) ಯಲಹಂಕ ಗ್ರಾಮದ ಸರ್ವೆ ನಂಬರ್‌ 108/1ರ 1.30 ಎಕರೆ ಜಮೀನನ್ನು ಮೋಸದಿಂದ ಕಬಳಿಕೆ ಮಾಡಿದ್ದಾರೆ. ಈ ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಗುಂಪು ಕಟ್ಟಿಕೊಂಡು ಬಂದು ದೌರ್ಜನ್ಯ ಎಸೆಗಿದ್ದಾರೆ. ಮಹಿಳೆಯರನ್ನು ಕರೆದುಕೊಂಡು ಬಂದು ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ ಎಂದು ತಿಳಿದು ಬಂದಿದೆ.

ಸಚಿವರ ಪುತ್ರನಿಂದ ದೂರು:

ಸೆವೆನ್‌ ಹಿಲ್ಸ್‌ ಡೆವಲಪರ್ಸ್‌ ಮತ್ತು ಟ್ರೇಡರ್ಸ್‌ಗೆ ಸೇರಿದ ಆಸ್ತಿಗೆ ಅತಿಕ್ರಮ ಪ್ರವೇಶ ಮಾಡಿದ ಆರೋಪದಡಿ ಯಲಹಂಕ ಪೊಲೀಸ್‌ ಠಾಣೆಯಲ್ಲಿ 11 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸಚಿವ ಡಿ.ಸುಧಾಕರ್‌ ಪುತ್ರ, ಸೆವೆನ್‌ ಹಿಲ್ಸ್‌ ಡೆವಲಪರ್ಸ್‌ ಮತ್ತು ಟ್ರೇಡರ್ಸ್‌ ಕಂಪನಿಯ ನಿರ್ದೇಶಕ ಸುಹಾಸ್‌ ಸುಧಾಕರ್‌ ಶನಿವಾರ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಖತರ್ನಾಕ್ ಗ್ಯಾಂಗ್ ಫೀಲ್ಡಿಗಿಳಿದರೆ ಮನೆ, ಪಿಜಿ ಮುಂದೆ ಬಿಟ್ಟಿರೋ ಶೂ ಚಪ್ಪಲಿಗಳು ಮಾಯಾ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಿಳೆ ಬಲಿ ಪಡೆದ ಚಿರತೆ ಕೊನೆಗೂ ಸೆರೆ, ದಾಳಿ ಮಾಡಿದ ಅದೇ ಸ್ಥಳದಲ್ಲೇ ಕಾರ್ಯಾಚರಣೆ
ಕೊಂಕಣ ರೈಲ್ವೆ ಭಾರತೀಯ ರೈಲ್ವೇ ವಿಲೀನಕ್ಕೆ ರಾಜ್ಯ ಸರ್ಕಾರಗಳ ಸಹಕಾರ ಬೇಕು: ಸಚಿವ ಅಶ್ವಿನಿ ವೈಷ್ಣವ್