
ಬೀದರ್ (ಫೆ.23): ಸರಕಾರದ ಐದು ಗ್ಯಾರಂಟಿಗಾಗಿ ಹಣ ಕ್ರೋಢಿಕರಿಸಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿ ಅಭಿವೃದ್ಧಿಗಾಗಿ ಅನುದಾನ ನೀಡಲು ನೀರಾಕರಿಸುತ್ತಿದ್ದಾರೆ ಹೀಗಾಗಿ ಅಭಿವೃದ್ಧಿ ಕುಂಟಿತಗೊಂಡು ರಾಜ್ಯದ ಎಲ್ಲಾ ಶಾಸಕರು ಸಮಸ್ಯೆ ಎದುರಿಸುವಂತಾಗಿದೆ ಎಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಬಜೆಟ್ ನ ಕುರಿತು ನಡೆದ ಚರ್ಚೆ ವೇಳೆ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಶೈಲೆಂದ್ರ ಬೆಲ್ದಾಳ ಮಾತನಾಡಿದರು.
ಗೋದಾವರಿ ಜಲಾನಯನದ ನೀರಿನ ಸದ್ಬಳಕೆ ಮಾಡಿಕೊಂಡು ರೈತರಿಗೆ ಅನುಕೂಲ ಕಲ್ಪಿಸುವ ರೈತರ ಬೇಡಿಕೆಗೆ ಮನ್ನಣೆ ನೀಡಿಲ್ಲ. ಸುಮಾರು ವರ್ಷದಿಂದ ನಮ್ಮ ಭಾಗದ ರೈತರು ಭೂಮಿ ಕಳೆದುಕೊಂಡು ಹೋರಾಟ ನಡೆಸುತ್ತಿರುವ ಕಾರಂಜಾ ಸಂತ್ರಸ್ತರ ಸಮಸ್ಯೆಗೆ ಸ್ಪಂದಿಸುವ ಗೋಜಿಗೆ ಹೋಗಿಲ್ಲ. ಕಾರಂಜಾ ಸಂತ್ರಸ್ತರ ರೈತರ ಸಮಸ್ಯೆ ಕುರಿತು ಉಪ ಮುಖ್ಯಮಂತ್ರಿಗಳು ಸಭೆ ನಡೆಸಿದರು ಈ ಬಜೆಟ್‌ನಲ್ಲಿ ಸಮಸ್ಯೆ ಕುರಿತು ಸ್ಪಷ್ಟತೆ ದೊರೆತ್ತಿಲ್ಲ ಈ ಬಜೆಟ್‌ನಲ್ಲಿ ಪ್ರಸ್ತಾವನೆ ಸಹ ಆಗಿಲ್ಲ. ಶತಮಾನದ ಬರ ನಮ್ಮ ರಾಜ್ಯಕ್ಕೆ ಕಾಡುತ್ತಿದೆ ಇಲ್ಲಿವರೆಗಿ ರೈತರಿಗೆ ಸೂಕ್ತ ಪರಿಹಾರ ದೊರೆತಿಲ್ಲ ತೀವ್ರ ಬರ ಇರುವ ಹಿನ್ನೆಲೆಯಲ್ಲಿ ಎಕರೆಗೆ ೨೫ ಸಾವಿರ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಬೆಲ್ದಾಳೆ ಮನವಿ ಮಾಡಿಕೊಂಡಿದರು,
ಕಲ್ಯಾಣ ಕರ್ನಾಟಕದ ಜನರು ಕಾಂಗ್ರೆಸ್, ಖರ್ಗೆರನ್ನು ಮರೆಯದಿರಲಿ: ಸಚಿವ ಈಶ್ವರ ಖಂಡ್ರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ