ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿಗೆ ಸಮಸ್ಯೆಯಿಲ್ಲ: ಲಕ್ಷ್ಮಣ್ ಸವದಿ

Published : Apr 10, 2025, 11:45 PM ISTUpdated : Apr 10, 2025, 11:48 PM IST
ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿಗೆ  ಸಮಸ್ಯೆಯಿಲ್ಲ: ಲಕ್ಷ್ಮಣ್ ಸವದಿ

ಸಾರಾಂಶ

ಗ್ಯಾರಂಟಿ ಯೋಜನೆಗಳಿಂದ ಮತಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಅನುದಾನ ಬರುತ್ತಿಲ್ಲ ಎನ್ನುವ ವಿರೋಧಿಗಳ ಮಾತನ್ನು ನಾನು ಒಪ್ಪುವುದಿಲ್ಲ. ಗ್ಯಾರಂಟಿಗಳ ಮಧ್ಯೆ ಅಥಣಿ ಮತಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರುವ ಮೂಲಕ ಪೂರ್ವ ಭಾಗದ ರೈತರ ಬಹುದಿನಗಳ ಕನಸಿನ ನೀರಾವರಿ ಯೋಜನೆಯಿಂದ 75 ಸಾವಿರ ಎಕರೆ ಪ್ರದೇಶಕ್ಕೆ ಬರುವ ಜನವರಿ ಒಳಗಾಗಿ ನೀರು ಒದಗಿಸಲಾಗುವುದು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಅಥಣಿ (ಏ.10): ಗ್ಯಾರಂಟಿ ಯೋಜನೆಗಳಿಂದ ಮತಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಅನುದಾನ ಬರುತ್ತಿಲ್ಲ ಎನ್ನುವ ವಿರೋಧಿಗಳ ಮಾತನ್ನು ನಾನು ಒಪ್ಪುವುದಿಲ್ಲ. ಗ್ಯಾರಂಟಿಗಳ ಮಧ್ಯೆ ಅಥಣಿ ಮತಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರುವ ಮೂಲಕ ಪೂರ್ವ ಭಾಗದ ರೈತರ ಬಹುದಿನಗಳ ಕನಸಿನ ನೀರಾವರಿ ಯೋಜನೆಯಿಂದ 75 ಸಾವಿರ ಎಕರೆ ಪ್ರದೇಶಕ್ಕೆ ಬರುವ ಜನವರಿ ಒಳಗಾಗಿ ನೀರು ಒದಗಿಸಲಾಗುವುದು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ತಾಲೂಕಿನ ಝಂಜರವಾಡ ಗ್ರಾಮದಲ್ಲಿ ಕೊಟ್ಟಲಗಿ- ಅಮ್ಮಾಜೇಶ್ವರಿ ಏತ ನೀರಾವರಿ- ಯೋಜನೆಯ ಜಾಕ್‌ವೆಲ್ ಕಮ್ ಪಂಪ್‌ಹೌಸ್ ಕಾಮಗಾರಿ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ ಪಶು ವೈದ್ಯಕೀಯ ಮಹಾವಿದ್ಯಾಲಯದ ಉದ್ಘಾಟನೆಗೆ ಆಗಮಿಸಿದ ಸಂದರ್ಭದಲ್ಲಿ ರೈತರ ಪರವಾಗಿ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ದೆ. ನಾನು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ನಂತರ ಯಾವುದೇ ಅಧಿಕಾರ, ಮಂತ್ರಿ ಸ್ಥಾನಕ್ಕಾಗಿ ಕರಾರು ಮಾಡದೆ, ನನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಮತ್ತು ಪ್ರಮುಖ ನೀರಾವರಿ ಯೋಜನೆ ಅನುಷ್ಠಾನಗೊಳಿಸುವಂತೆ ಮನವಿ ಮಾಡಿದ್ದೆ. ನನ್ನ ಮನವಿಗೆ ಸಿಎಂ, ಡಿಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿ ಹೆಚ್ಚಿನ ಅನುದಾನ ನೀಡಿದ್ದಾರೆ. ಮೊದಲ ಹಂತವಾಗಿ ಬಂದಿರುವ ಅನುದಾನದಿಂದ ಈಗ ಕಾಮಗಾರಿ ಪ್ರಗತಿ ಹಂತದಲ್ಲಿವೆ. ಈ ಕಾಮಗಾರಿ ಪೂರ್ಣಗೊಂಡ ನಂತರ ಸುಮಾರು 75 ಸಾವಿರ ಎಕರೆ ಪ್ರದೇಶ ನೀರಾವರಿ ಸೌಲಭ್ಯ ಹೊಂದುವ ಮೂಲಕ ರೈತರ ಜಮೀನುಗಳು ಹಸಿರಾಗಲಿದೆ ಎಂದರು.

ಇದನ್ನೂ ಓದಿ: 10 ವರ್ಷದಲ್ಲಿ 143 ವಸ್ತುಗಳ ಬೆಲೆ ಏರಿಕೆ; ಕೇಂದ್ರದ ವಿರುದ್ಧ ಎಂ ಲಕ್ಶ್ಮಣ್ ಕಿಡಿ

ಕಳೆದ ಬಜೆಟ್‌ನಲ್ಲಿ ಕೃಷಿ ಮಹಾವಿದ್ಯಾಲಯ ಮಂಜೂರು ಮಾಡಿದ್ದಾರೆ. ಶೀಘ್ರದಲ್ಲಿಯೇ ಕೃಷ್ಣಾನದಿ ತೀರದ ಅನೇಕ ಗ್ರಾಮಗಳ ರೈತರ ಬಹುದಿನಗಳ ಬೇಡಿಕೆಯಾಗಿರುವ ಸವಳು-ಜವಳು ಭೂಮಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರೈತರ ಸಮಸ್ಯೆಗೆ ಸರ್ಕಾರ ಅನುದಾನ ಒದಗಿಸಲಿದೆ. ತಾಲೂಕಿನ ಪೂರ್ವ ಭಾಗದ 9 ಕೆರೆ ತುಂಬುವ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ 2 ಕೆರೆ ತುಂಬುವ ಕಾಮಗಾರಿ ಪ್ರಗತಿಯಲ್ಲಿದೆ. ಇದರಿಂದ ಅಂತರ್ಜಲಮಟ್ಟ ಹೆಚ್ಚಾಗಲಿದೆ. ನಮ್ಮ ರೈತರ ಬಾವಿ ಮತ್ತು ಬೋರ್ವೆಲ್‌ಗಳಿಗೆ ನಿರಂತರ ನೀರಿನ ಸೌಲಭ್ಯ ದೊರಕಲಿದೆಂದರು. ಇದಲ್ಲದೆ ರೈತರ ಜಮೀನುಗಳಲ್ಲಿ ಪ್ರತಿ 1 ಕಿ.ಮೀ. ವ್ಯಾಪ್ತಿಯಲ್ಲಿ ಒಂದರಂತೆ ಬೋರ್‌ವೆಲ್ ಕೊರೆಸುವ ಪೈಲೆಟ್ ನೀರಾವರಿ ಯೋಜನೆಯನ್ನು ಕೇಂದ್ರ ಸರ್ಕಾರದ ಶೇ.60 ಮತ್ತು ರಾಜ್ಯ ಸರ್ಕಾರದ ಶೇ.40ರಷ್ಟು ಅನುದಾನದಲ್ಲಿ ತಾಲೂಕಿನ 2.25ಲಕ್ಷ ಎಕರೆ ಪ್ರದೇಶದಲ್ಲಿ ಬೋರ್‌ವೆಲ್ ಕೊರೆಸುವ ಯೋಜನೆ ಅನುಷ್ಠಾನಗೊಳಿಸಲಾಗುವುದು. ಇದರಿಂದ ಅಂತರ್ಜಲಮಟ್ಟ ಹೆಚ್ಚಾಗಲಿದೆ ಎಂದರು.

ಇದೇ ಸಂದರ್ಭದಲ್ಲಿ ಜಾಕ್ ವೆಲ್ ಮತ್ತು ಪಂಪ ಹೌಸ್ ನಿರ್ಮಾಣಕ್ಕೆ ಜಮೀನು ಒದಗಿಸಿದ ಫಲಾನುಭವಿಗಳಿಗೆ ಪರಿಹಾರ ಚೆಕ್ ವಿತರಿಸಿದರು. ಯುವ ಮುಖಂಡ ಚಿದಾನಂದ ಸವದಿ, ಅಮೋಘ ಕೊಬ್ರಿ, ಸಿ.ಎಸ್.ನೇಮಗೌಡ, ಸಿದ್ರಾಯ ಯಲಡಗಿ, ಶಾಂತಿನಾಥ ನಂದೇಶ್ವರ, ಶಿವು ಗುಡ್ಡಾಪುರ, ಗುರಪ್ಪ ದಾಶ್ಯಾಳ, ಮಲ್ಲು ಡಂಗಿ, ಕುಮಾರ ನೇಮಗೌಡ, ಶ್ರೀಶೈಲ ಶೆಲೇಪ್ಪಗೋಳ, ಶಾಮರಾವ ಪುಜಾರಿ, ನೀರಾವರಿ ಯೋಜನಾಧಿಕಾರಿ ಎ.ನಾಗರಾಜ, ಪ್ರವೀಣ ಹುಣಶಿಕಟ್ಟಿ, ಭರತೇಶ ಮಹಿಷವಾಡಗಿ, ಗುತ್ತಿಗೆದಾರ ಸುರೇಶ ಪನ್ನೀಕರ, ರವೀಂದ್ರ ಮುರಗಾಲಿ, ವಿರಣ್ಣಾ ವಾಲಿ ಅನೇಕರಿದ್ದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌