
ಬೆಂಗಳೂರು, (ಮೇ.19): ರಾಜ್ಯದಲ್ಲಿ ಇಂದಿನಿಂದ (ಮಂಗಳವಾರ) ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭವಾಗಿದೆ. ಮೊದಲನೇ ದಿನ ನಿಗಮದ ವ್ಯಾಪ್ತಿಯ ವಿಭಾಗಗಳಿಂದ ಒಟ್ಟು 1606 ಬಸ್‌ಗಳು ಸಂಚರಿಸಿದ್ದು, 53506 ಪ್ರಯಾಣಿಕರು ಪ್ರಯಾಣಿಸಿದ್ದಾರೆ.
ಇದೀಗ ಈ ಕೆಎಸ್ಆರ್‌ಟಿಸಿ ಬಸ್ ಸಂಚಾರದ ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆ ಮಾಡಲಾದೆ. ನಾಳೆ ಅಂದ್ರೆ ಬುಧವಾರದಿಂದ ಬಸ್ಸುಗಳ ಕಾರ್ಯಚರಣೆಯ ಸಮಯವನ್ನು ಸಂಜೆ 7 ಗಂಟೆಯವರೆಗೆ ವಿಸ್ತರಿಸಲಾಗಿದೆ.
KSRTC ಬಸ್ ಸಂಚಾರ ಆರಂಭ: ಆನ್‌ಲೈನ್ ಬುಕ್ಕಿಂಗ್ ಶುರು...!
ಅಂದರೆ ಕೊನೆಯ ಬಸ್ಸು ಸಂಜೆ 7 ಗಂಟೆಗೆ ಬೆಂಗಳೂರು ಬಿಡಲಿದೆ. ಉದಾಹರಣೆಗೆ ಕಲುಬುರುಗಿ , ಬೀದರ್ ಸಂಜೆ 7 ಕ್ಕೆ ಬೆಂಗಳೂರಿನಿಂದ ಹೊರಟು ಮಾರನೇ ದಿನ ಬೆಳಗ್ಗೆ ಕಲುಬುರಗಿ , ಬೀದರ್ ಗೆ ತಲುಪುತ್ತದೆ.
ಇದು ಎಲ್ಲಾ ಸ್ಥಳಗಳಿಗೆ ಕಾರ್ಯಾಚರಣೆಯಾಗುವ ಬಸ್ಸುಗಳಿಗೆ ಅನ್ವಯಿಸುತ್ತದೆ. ಬೆಂಗಳೂರು ಹಾಗೂ ಇತರೆ ಜಿಲ್ಲೆಗಳಿಂದ ಕಾರ್ಯಚರಣೆಯಾಗುವ ಬಸ್ಸುಗಳು ಸೇರಿದಂತೆ.
ಇದೇ ಮಾದರಿಯ ಬಸ್ಸುಗಳ ಕಾರ್ಯಚರಣೆಯನ್ನು ಮುಂದಿನ ಆದೇಶದವರೆಗೂ ಮುಂದುವರೆಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಮೊದಲು ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಉತ್ತರ ಕರ್ನಾಟಕ ಭಾಗದ ದೂರದ ಊರುಗಳಿಗೆ ಹೋಗಲು ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಈ ನಿರ್ಧಾರ ಕೈಗೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ