ಬ್ಲ್ಯಾಕ್‌ ಫಂಗಸ್‌ ಸಾವಿನ ಬಗ್ಗೆ ಆಡಿಟ್‌: ಸುಧಾಕರ್‌

By Kannadaprabha NewsFirst Published May 31, 2021, 7:11 AM IST
Highlights

* ರಾಜ್ಯದಲ್ಲಿ ಬ್ಲ್ಯಾಕ್‌ ಫಂಗಸ್‌ನಿಂದಾದ ಸಾವಿನ ಸಂಖ್ಯೆ ಬಗ್ಗೆ ಗೊಂದಲ
* ಈವರೆಗೆ ಸುಮಾರು 30-35 ಸಾವು
* ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ ಎರಡೂ ಕಡೆ ಬ್ಲ್ಯಾಕ್‌ ಫಂಗಸ್‌ಗೆ ಚಿಕಿತ್ಸೆ 

ಬೆಂಗಳೂರು(ಮೇ.31): ಬ್ಲ್ಯಾಕ್‌ ಫಂಗಸ್‌ ಸೋಂಕಿನಿಂದ ಉಂಟಾದ ಸಾವಿನ ಬಗ್ಗೆ ಆಡಿಟ್‌ ಮಾಡಿ ವರದಿ ನೀಡಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ನಮ್ಮಲ್ಲಿ 1,250 ಮಂದಿಗೆ ಬ್ಲ್ಯಾಕ್‌ ಫಂಗಸ್‌ ಸೋಂಕು ವರದಿಯಾಗಿದೆ. ಇದರಿಂದ ಉಂಟಾದ ಸಾವಿನ ಸಂಖ್ಯೆಯ ಬಗ್ಗೆ ಗೊಂದಲವಿದೆ. 30ರಿಂದ 35 ಸಾವು ಸಂಭವಿಸಿದೆ ಎಂದು ಹೇಳಲಾಗಿದೆ. ಹೀಗಾಗಿ ಆಡಿಟ್‌ ಮಾಡಿ ವರದಿ ನೀಡಲು ತಿಳಿಸಿದ್ದೇನೆ ಎಂದರು.

ಬ್ಲ್ಯಾಕ್‌ ಫಂಗಸ್‌ ಔಷಧಿ ಆಮದಿಗೆ ತೆರಿಗೆ ವಿನಾಯ್ತಿ!

ಸೋಂಕಿಗೆ ಔಷಧ ಕೊರತೆ ನೀಗಿಸಲು ಪ್ರಯತ್ನಿಸುತ್ತಿದ್ದೇವೆ. ಕೇಂದ್ರ ಸಚಿವ ಸದಾನಂದಗೌಡರು ಸಹ ಔಷಧ ಕೊಡಿಸಲು ಬಹಳ ಪ್ರಯತ್ನ ಮಾಡುತ್ತಿದ್ದಾರೆ. 8ಕ್ಕೂ ಹೆಚ್ಚು ಕಂಪನಿಗಳ ಜತೆ ಮಾತನಾಡಿ ತಯಾರಿ ಮಾಡಿಕೊಂಡಿದ್ದಾರೆ. ದೇಶಾದ್ಯಂತ 80 ಸಾವಿರ ವಯಲ್ಸ್‌ ಮಾರುಕಟ್ಟೆಗೆ ಬಂದಿದೆ. ನಮಗೂ 8-10 ಸಾವಿರ ವಯಲ್ಸ್‌ ಪೂರೈಸಿದ್ದಾರೆ ಎಂದು ಹೇಳಿದರು.

ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ ಎರಡೂ ಕಡೆ ಬ್ಲ್ಯಾಕ್‌ ಫಂಗಸ್‌ಗೆ ಚಿಕಿತ್ಸೆ ನೀಡುತ್ತಿದ್ದೇವೆ. ಖಾಸಗಿ ಆಸ್ಪತ್ರೆಗಳಲ್ಲಿ ದರ ನಿಗದಿಯಾಗಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡುತ್ತಿದ್ದೇವೆ ಎಂದರು.
 

click me!