Mh Krishnaiah Passed Away: ಹಿರಿಯ ಸಾಹಿತಿ, ವಿಮರ್ಶಕ ಎಂ.ಎಚ್‌.ಕೃಷ್ಣಯ್ಯ ನಿಧನ

By Govindaraj SFirst Published Aug 13, 2022, 4:30 AM IST
Highlights

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ವಿಮರ್ಶಕ ಪ್ರೊ.ಎಂ.ಎಚ್‌.ಕೃಷ್ಣಯ್ಯ(85) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಸುತ್ತಿದ್ದ ಅವರು ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ. 

ಬೆಂಗಳೂರು (ಆ.13): ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ವಿಮರ್ಶಕ ಪ್ರೊ.ಎಂ.ಎಚ್‌.ಕೃಷ್ಣಯ್ಯ(85) ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಸುತ್ತಿದ್ದ ಅವರು ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರ ಗಾಯತ್ರಿನಗರದ ಹರಿಶ್ಚಂದ್ರಘಾಟ್‌ನಲ್ಲಿ ಶನಿವಾರ ಬೆಳಗ್ಗೆ 11ಕ್ಕೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ.

ಕನ್ನಡ ಸೇವೆ: 1937 ಜುಲೈ 21ರಂದು ಮೈಸೂರಿನಲ್ಲಿ ಜನಿಸಿದ್ದ ಎಂ.ಎಚ್‌.ಕೃಷ್ಣಯ್ಯ ಅವರು, ಪ್ರಾಧ್ಯಾಪಕರಾಗಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ, ಬಿ.ಎಂ.ಶ್ರೀ ಸ್ಮಾರಕ ಪ್ರತಿಷ್ಠಾನದ ಗೌರವಾಧ್ಯಕ್ಷ, ವಿ.ಸೀ.ಸಂಪದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಸಾಹಿತ್ಯ ಮತ್ತು ಕಲಾ ವಿಮರ್ಶೆ ಕ್ಷೇತ್ರದಲ್ಲಿ ಅತ್ಯಂತ ಶಿಸ್ತಿನ ಕಾರ್ಯನಿರ್ವಹಣೆಗೆ ಕೃಷ್ಣಯ್ಯ ಹೆಸರಾಗಿದ್ದರು. 

Shivamogga Subbanna Passed Away: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

ಕನ್ನಡದ ಮಹತ್ವದ ಕೃತಿಗಳನ್ನು ರಚಿಸಿದವರು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕನ್ನಡದ ಸಾವಿರಾರು ಅಭ್ಯರ್ಥಿಗಳನ್ನು ಸಜ್ಜುಗೊಳಿಸಿದ ಹೆಗ್ಗಳಿಕೆ ಅವರದು. ಕೋಲಾರ, ಮಂಗಳೂರು, ಬೆಂಗಳೂರು, ಇತರ ಸರಕಾರಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದರು. ನಿವೃತ್ತಿಯ ನಂತರವೂ ಸಾಹಿತ್ಯ ಮತ್ತು ಕಲಾ ಸೇವೆಯಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಕನ್ನಡ ವಿಶ್ವವಿದ್ಯಾಲಯ ಕಾರ್ಯಕಾರಿ ಸಮಿತಿ (ಸಿಂಡಿಕೇಟ್), ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ತಂಜಾವೂರಿನ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ, ಉದಯಭಾನು ಕಲಾ ಸಂಘದಲ್ಲಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಅವರು ತಮ್ಮ ಕಾರ್ಯದಕ್ಷತೆ, ಸರಳತೆಯಿಂದ ಹೆಸರಾಗಿದ್ದಾರೆ.

ಕೃಷ್ಣಯ್ಯನವರ 30ಕ್ಕೂ ಹೆಚ್ಚು ಕೃತಿಗಳು ಪ್ರಕಟವಾಗಿವೆ. ಸಂಕ್ಷಿಪ್ತ ಕನ್ನಡ ಭಾಷೆಯ ಚರಿತ್ರೆ, ಆರ್.ಎಮ್.ಹಡಪದ್, ರೂಪಶಿಲ್ಪಿ ಬಸವಯ್ಯ, ಶೃಂಗಾರ ಲಹರಿ, ಕಲಾ ದರ್ಶನ, ರಂಗಭೂಮಿ ಮತ್ತು ಸೌಂದರ್ಯ ಪ್ರಜ್ಞೆ ಮುಂತಾದ ಬರಹಗಳು ಹಾಗೂ ಕುವೆಂಪು ಸಾಹಿತ್ಯ: ಚಿತ್ರ ಸಂಪುಟದಂತಹ ಸಂಪಾದನೆಗಳು ಈ ಕೃತಿಗಳಲ್ಲಿ ಸೇರಿವೆ. ಉದಯ ಭಾನು ಕಲಾ ಸಂಘವು ತನ್ನ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಹೊರತಂದ ಸುಮಾರು 3000 ಪುಟಗಳ 'ಬೆಂಗಳೂರು ದರ್ಶನ' ಬೃಹತ್ ಸಂಪುಟಗಳ ಸಂಪಾದಕರಾಗಿ ಕೊಡುಗೆ ನೀಡಿದ್ದಾರೆ. 

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ-ವಿತರಕ ನರ್ಗಿಸ್ ಬಾಬು ನಿಧನ

ಸಂತಾಪ: ಪ್ರೊ.ಎಂ.ಎಚ್‌.ಕೃಷ್ಣಯ್ಯ ಅವರ ನಿಧನಕ್ಕೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕಸಾಪ ಅಧ್ಯಕ್ಷ ಡಾ. ಮಹೇಶ್‌ ಜೋಶಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌.ನಾಗಾಭರಣ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.

click me!