ಕೆಪಿಸಿಸಿ ವಕ್ತಾರರಾಗಿ ಅಯನೂರು ಮಂಜುನಾಥ್ ನೇಮಕ

Published : Oct 12, 2023, 06:37 PM IST
ಕೆಪಿಸಿಸಿ ವಕ್ತಾರರಾಗಿ ಅಯನೂರು ಮಂಜುನಾಥ್ ನೇಮಕ

ಸಾರಾಂಶ

ಆಯನೂರು  ಮಂಜುನಾಥ್ಕಾಂಗ್ರೆಸ್ ಮುಖಂಡ ಆಯನೂರು ಮಂಜುನಾಥ ಅವರನ್ನು ಮಾಧ್ಯಮ ವಕ್ತರರನ್ನಾಗಿ ನೇಮಕ ಮಾಡಿ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು (ಅ.12): ಮಾಜಿ ಎಂಎಲ್ಸಿ ಶಿವಮೊಗ್ಗ ಕಾಂಗ್ರೆಸ್ ಮುಖಂಡ ಆಯನೂರು  ಮಂಜುನಾಥ್ಕಾಂಗ್ರೆಸ್ ಮುಖಂಡ ಆಯನೂರು ಮಂಜುನಾಥ ಅವರನ್ನು ಮಾಧ್ಯಮ ವಕ್ತರರನ್ನಾಗಿ ನೇಮಕ ಮಾಡಿ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ ಆದೇಶ ಹೊರಡಿಸಿದ್ದಾರೆ.

 ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ರಾಜಕೀಯ ಹಾಗೂ ಸಾಮಾಜಿಕ ವಿಷಯಗಳ ಬಗ್ಗೆ ಚರ್ಚೆಯಲ್ಲಿ ಹೆಚ್ಚು ಪ್ರಚಾರದಲ್ಲಿರುವುದನ್ನು ಗಮನಿಸಿ, ಕಾಂಗ್ರೆಸ್‌ ಪಕ್ಷದ ವಿಚಾರಧಾರೆಗಳನ್ನು ಹಾಗೂ ಸರ್ಕಾರದ ಯೋಜನೆಗಳನ್ನು ಮಾಧ್ಯಮಗಳಲ್ಲಿ ಪರಿಣಾಮಕಾರಿಯಾಗಿ ಬಿಂಬಿಸಲಿರುವ ಕೆಪಿಸಿಸಿ ವಕ್ತರರನ್ನಾಗಿ ಆಯ್ಕೆ ಮಾಡಲಾಗಿದೆ.

ನಿಮ್ಮ ಮೈಯಲ್ಲಿ ಹರೀತಿರೋದು ಹಸಿರೋ, ಹಿಂದು ರಕ್ತವೋ? ಸಿಎಂ ವಿರುದ್ಧ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಈಶ್ವರಪ್ಪ!

ತಮಗೆ ನೀಡಿರುವ ಈ ಜವಾಬ್ದಾರಿಯನ್ನು ವಹಿಸಿಕೊಂಡು ಕೆಪಿಸಿಸಿಯ ಸಂವಹನ ಮತ್ತು ಮಾಧ್ಯಮ ಮುಖ್ಯಸ್ಥರು ನೀಡುವ ಸಲಹ ಹಾಗೂ ಮಾರ್ಗದರ್ಶನಗಳ ಅನ್ವಯ ಕಾರ್ಯಪ್ರವೃತರಾಗಿ ಪಕ್ಷ ಬಲವರ್ದನೆಗೆ ಸಹಕಾರಿಯಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ ಸಮೀಪಿಸಿದ ಹೊತ್ತಿನಲ್ಲೇ ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವ ಶಿವಮೊಗ್ಗದ ಮಾಜಿ ರಾಜ್ಯ ಸಭಾ ಸದಸ್ಯ, ಮಾಜಿ ಶಾಸಕ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯ ಅಯನೂರು ಮಂಜುನಾಥ್, ನೇರ ಮತ್ತು ನಿರ್ಭಿಡೆ ಮಾತುಗಳಿಗೆ ಹೆಸರುವಾಸಿ ಈ ಹಿಂದೆ ಆಯನೂರು ಮಂಜುನಾಥ ಕಾಂಗ್ರೆಸ್‌ಗೆ ಹಿಗ್ಗಾಮುಗ್ಗಾ ಝಾಡಿಸುವುದರಲ್ಲಿ ಸುದ್ದಿಯಾಗಿದ್ದರು. ಇದೀಗ ಕಾಂಗ್ರೆಸ್ ಸೇರ್ಪಡೆಗೊಂಡು ಕೆಪಿಸಿಸಿ ವಕ್ತರರಾಗಿ ನೇಮಕವಾಗಿರುವುದು ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಮಿತ್ರರಲ್ಲ ಅನ್ನೋ ಮಾತು ನಿಜವಾಗಿದೆ.

ವಿಶ್ವಕಪ್‌ ಭಾರತ- ಪಾಕಿಸ್ತಾನ ಪಂದ್ಯಕ್ಕೆ ಭಾರತೀಯರಿಗೆ ವಿಶ್‌ ಮಾಡದ ಸಿಎಂ, ಡಿಸಿಎಂ: ಓಟ್‌ ಬ್ಯಾಂಕ್‌ ಮುಲಾಜು ನೋಡಿದ್ರಾ?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪಬ್ಬಲ್ಲಿ ಮೊಬೈಲ್‌ ತರಲುಹೋದ ಕನ್ನಡಿಗ ಬಲಿ, ಗೋವಾ ಪಬ್ ದುರಂತಕ್ಕೆ ಕಾರಣವೇನು?
ಮೆಕ್ಕೆಜೋಳ ಖರೀದಿಯ ಮಿತಿ 50 ಕ್ವಿಂಟಲ್‌ಗೇರಿಕೆ