ಅಯೋಧ್ಯೆಯಲ್ಲೇ ಬಿಜೆಪಿಗೆ ಹೀನಾಯ ಸೋಲು; ಕಾರಣ ಬಿಚ್ಚಿಟ್ಟ ಪೇಜಾವರಶ್ರೀ!

By Kannadaprabha News  |  First Published Jun 8, 2024, 7:52 AM IST

ಉತ್ತರ ಪ್ರದೇಶ ರಾಜ್ಯದ ಅಯೋಧ್ಯೆ ಲೋಕಸಭಾ ಕ್ಷೇತ್ರದಲ್ಲಿ ತಪ್ಪು ಅಭ್ಯರ್ಥಿ ಆಯ್ಕೆಯೇ ಬಿಜೆಪಿ ಸೋಲಿಗೆ ಕಾರಣವಾಗಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು.


ಬೆಳಗಾವಿ (ಜೂ.8): ಉತ್ತರ ಪ್ರದೇಶ ರಾಜ್ಯದ ಅಯೋಧ್ಯೆ ಲೋಕಸಭಾ ಕ್ಷೇತ್ರದಲ್ಲಿ ತಪ್ಪು ಅಭ್ಯರ್ಥಿ ಆಯ್ಕೆಯೇ ಬಿಜೆಪಿ ಸೋಲಿಗೆ ಕಾರಣವಾಗಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ಲೋಕಸಭಾ ಕ್ಷೇತ್ರ(Ayodhya Lok sabha constituency)ದಲ್ಲಿ ಬಿಜೆಪಿ ಅಭ್ಯರ್ಥಿ(BJP Candidate) ಆಯ್ಕೆಯೇ ತಪ್ಪಾಗಿದೆ. ಇದೇ ಕಾರಣಕ್ಕಾಗಿ ಸೋಲು ಅನುಭವಿಸಿದೆ. ಈ ಚುನಾವಣೆಯಲ್ಲಿ ಮತದಾರರು ಅರ್ಹ ಅಭ್ಯರ್ಥಿ ಆಯ್ಕೆ ಮಾಡಿದ್ದಾರೆ. ಮತದಾನ ಮಾಡುವುದು, ಅಭ್ಯರ್ಥಿ ಆಯ್ಕೆ ಅವರವರ ವೈಯಕ್ತಿಕ ವಿಚಾರ. ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸರಿಯಾಗಿರಲಿಲ್ಲ. ಹಾಗಾಗಿಯೇ ಬಿಜೆಪಿ ಸೋತಿರಬಹುದು ಎಂಬುವುದು ನಮ್ಮ ಗಮನಕ್ಕೆ ಬಂದಿದೆ ಎಂದು ತಿಳಿಸಿದರು.

Tap to resize

Latest Videos

undefined

ಕುಮಾರಸ್ವಾಮಿ ಗೆಲ್ತಿದ್ದಂತೆ ಮಂಡ್ಯದಲ್ಲಿ ಮತ್ತೆ ಶುರುವಾಯ್ತು ಕೈ-ದಳ ಫೈಟ್!

ಅಯೋಧ್ಯೆಯಲ್ಲಿ ರಾಮಮಂದಿರ(Ayodhya ramMandir) ಬಳಿಕ ಕಾಶಿ ವಿಶ್ವನಾಥ ದೇವಸ್ಥಾನ(Kashi vishwanath) ಮಥುರಾದ ಶ್ರೀಕೃಷ್ಣ ಜನ್ಮಸ್ಥಳದ ಮೂಲ ನಿವೇಶಗಳನ್ನು ಕಾನೂನು ಮತ್ತು ಸಂವಿಧಾನದ ಮೂಲಕ ಹಿಂಪಡೆಯುವ ಪ್ರಕ್ರಿಯೆ ಪ್ರಗತಿ ಹಂತದಲ್ಲಿದೆ. ಎಲ್ಲವೂ ಕಾನೂನು ಪ್ರಕಾರವೇ ನಡೆಸಲಾಗುತ್ತಿದೆ ಎಂದರು.

ತಾಯಿಗೆ ಎಳನೀರು ತರಲು ಹೋಗಿದ್ದ ಮಗ ತೆಂಗಿನಮರದಿಂದ ಬಿದ್ದು ಸಾವು!

ರಾಜ್ಯ ಸರ್ಕಾರ ಹಿಂದೂ ಧಾರ್ಮಿಕ ಕೇಂದ್ರ, ಮಠ, ಮಂದಿರಗಳನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತೆಗೆದುಕೊಳ್ಳಲು ಮುಂದಾಗಿರುವ ಕ್ರಮ ಸರಿಯಲ್ಲ. ಎಲ್ಲರನ್ನೂ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

click me!