ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಈ ನಡುವಲ್ಲೇ ಕೊಪ್ಪಳದ ಗಂಗಾವತಿ ತಾಲೂಕಿನ ಪ್ರಸಿದ್ಧ ಅಂಜನಾದ್ರಿ ಬೆಟ್ಟದಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.
ಕೊಪ್ಪಳ (ಜ.11): ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಈ ನಡುವಲ್ಲೇ ಕೊಪ್ಪಳದ ಗಂಗಾವತಿ ತಾಲೂಕಿನ ಪ್ರಸಿದ್ಧ ಅಂಜನಾದ್ರಿ ಬೆಟ್ಟದಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ.
ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ರಾಮಧೂತ ಹನುಮಂತನ ಜನ್ಮಸ್ಥಳ ಅಂಜನಾದ್ರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡುವ ಸಾಧ್ಯತೆಗಳಿವ ಹಿನ್ನೆಲೆಯಲ್ಲಿ ಅಂಜನಾದ್ರಿಯಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗುತ್ತಿದೆ.
undefined
ಭದ್ರತೆಗಾಗಿ ಕೆಎಸ್‌ಆರ್‌ಪಿ ಜೊತೆಗೆ, 250 ಪೊಲೀಸ್ ಕಾನ್‌ಸ್ಟೆಬಲ್‌ಗಳು ಮತ್ತು 15 ಹಿರಿಯ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗುತ್ತಿದೆ. ಸಿಸಿಟಿವಿ ಕ್ಯಾಮೆರಾಗಳನ್ನೂ ಕೂಡ ಸ್ಥಾಪಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.
ರಾಮಮಂದಿರದ ವಿಷಯದಲ್ಲಿ ಕಾಂಗ್ರೆಸ್ ಮೂರ್ಖತನ : ನಾನಂತೂ ಅಯೋಧ್ಯೆಗೆ ಹೋಗ್ತೇನೆ: ಸಂಸದ ಪ್ರಜ್ವಲ್ ರೇವಣ್ಣ
ಹಂಪಿಯ ಸಮೀಪದಲ್ಲಿರುವ ಅಂಜನಾದ್ರಿ ಹನುಮಂತನ ಜನ್ಮಸ್ಥಳವೆಂದು ನಂಬಲಾಗಿದೆ, ಹೀಗಾಗಿ ಈ ಪ್ರದೇಶ ದೇಶಾದ್ಯಂತ ಪ್ರವಾಸಿಗರನ್ನು ಆಕರ್ಷಿಸುತ್ತಿದೆ.
ಈ ನಡುವೆ ರಾಮಮಂದಿರ ಶಂಕುಸ್ಥಾಪನೆಯ ದಿನದಂದೇ ಅಂಜನಾದ್ರಿ ಬೆಟ್ಟದ ತಳದಲ್ಲಿ ಹನುಮಾನ್ ಮಂದಿರ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಕಿಷ್ಕಿಂದಾ ಹನುಮದ್ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಮಠಾಧೀಶ ಗೋವಿಂದಾನಂದ ಸರಸ್ವತಿ ತಿಳಿಸಿದ್ದಾರೆ.
ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲು 3-4 ವರ್ಷಗಳು ಬೇಕಾಗುತ್ತದೆ, ನಂತರ ಅಯೋಧ್ಯೆ ಮತ್ತು ಅಂಜನಾದ್ರಿ ಎರಡೂ ದೇವಾಲಯಗಳಿಗೂ ಭಕ್ತರು ಭೇಟಿ ನೀಡಬಹುದು. ಹನುಮಂತನ ಜನ್ಮಸ್ಥಳವಾದ ಅಂಜನಾದ್ರಿಯನ್ನು ಜನರಿಗೆ ತಿಳಿಸುವ ಅಗತ್ಯತೆಯ ಬಗ್ಗೆ ಕೇಂದ್ರ ಸರ್ಕಾರವೂ ವಿವರಿಸಿದೆ ಎಂದು ಹೇಳಿದ್ದಾರೆ.
ನಾವೂ ಶ್ರೀರಾಮಚಂದ್ರನ ಭಕ್ತರು: ಅಯೋಧ್ಯಾ ಮಂದಿರ ಉದ್ಘಾಟನೆಗೆ ನಮ್ಮ ವಿರೋಧ ಇಲ್ಲ: ಸಿಎಂ
ಸರ್ಕಾರದ ನೆರವಿನೊಂದಿಗೆ ಪ್ರವಾಸಿಗರಿಗೆ ವಸತಿ ಸೌಕರ್ಯಗಳ ನೀಡಲು ಹಾಗೂ ಕೊಪ್ಪಳ ಜಿಲ್ಲೆಯ ಹೆಸರನ್ನು ಕಿಷ್ಕಿಂದೆ ಎಂದು ಬದಲಾಯಿಸುವಂತೆ ಸರ್ಕಾರವನ್ನು ಕಿಷ್ಕಿಂದಾ ಟ್ರಸ್ಟ್ ಒತ್ತಾಯಿಸಿದೆ.
ಈ ನಡುವೆ ಕಿಷ್ಕಿಂದಾ ಹನುಮದ್ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಪೀಠಾಧಿಪತಿ ಗೋವಿಂದಾನಂದ ಸರಸ್ವತಿ ಅವರಿಗೆ ಜನವರಿ 22 ರಂದು ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಅಯೋಧ್ಯೆ ದೇವಸ್ಥಾನದ ಅಧಿಕಾರಿಗಳಿಂದ ಆಹ್ವಾನ ನೀಡಿದ್ದಾರೆ.