ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನ ಹಿನ್ನೆಲೆ ಜೈ ಶ್ರೀರಾಮ ಘೋಷಣೆ ಕೂಗುತ್ತಾ ಹೊರಟಿದ್ದ ಯುವಕರ ಗುಂಪಿನ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬೆಳಗಾವಿಯ ಪಾಟೀಲ್ ಗಲ್ಲಿಯಲ್ಲಿ ನಡೆದಿದೆ.
ಬೆಳಗಾವಿ (ಜ.23): ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನ ಹಿನ್ನೆಲೆ ಜೈ ಶ್ರೀರಾಮ ಘೋಷಣೆ ಕೂಗುತ್ತಾ ಹೊರಟಿದ್ದ ಯುವಕರ ಗುಂಪಿನ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬೆಳಗಾವಿಯ ಪಾಟೀಲ್ ಗಲ್ಲಿಯಲ್ಲಿ ನಡೆದಿದೆ.
ಶಾಂತವಾಗಿ ಘೋಷಣೆ ಕೂಗುತ್ತಾ ಹೊರಟಿದ್ದ ಯುವಕರ ಗುಂಪಿನ ಮೇಲೆ ಅನ್ಯಕೋಮಿನ ಯುವಕರ ಗುಂಪು ಕಲ್ಲು ತೂರಾಟ ನಡೆಸಿದೆ. ಇದರಿಂದ ರೊಚ್ಚಿಗೆದ್ದ ಯುವಕರ ಗುಂಪು ಸಹ ಪ್ರತಿಯಾಗಿ ಕಲ್ಲು ತೂರಾಟ ನಡೆಸಿ ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ನಮ್ಮ ಗ್ಯಾರಂಟಿ ಯೋಜನೆಗಳಿಂದ ರಾಮರಾಜ್ಯದ ಕನಸು ನನಸಾಗಿದೆ: ಡಿಕೆ ಶಿವಕುಮಾರ
ಘಟನೆ ನಡೆದ ತಕ್ಷಣವೇ ಸ್ಥಳದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿ ಯುವಕರ ಗುಂಪು ಚದುರಿಸಿದ್ದಾರೆ. ಪೊಲೀಸರು ಬರುತ್ತಿದ್ದಂತೆ ತಕ್ಷಣವೇ ಸ್ಥಳದಿಂದ ಕಾಲ್ಕಿತ್ತು ಪರಾರಿಯಾದ ಎರಡು ಗುಂಪಿನ ಯುವಕರುಕ. ಸ್ಥಳಕ್ಕೆ ಮಾರ್ಕೆಟ್ ಠಾಣೆ ಪೊಲೀಸರ ಭೇಟಿ, ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಎರಡು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ.
ನುಡಿದಂತೆ ನಡೆಯದ ಪ್ರಧಾನಿ ಮೋದಿ ಯಾವ ಸೀಮೆ ರಾಮಭಕ್ತ? ಟ್ವೀಟ್ ಮೂಲಕ ಸಿಎಂ ವಾಗ್ದಾಳಿ