ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ಒನ್-ಮ್ಯಾನ್ ಶೋ; ನನಗೆ ಆಹ್ವಾನ ನೀಡಿದ್ರೂ ಹೋಗೊಲ್ಲ: ಸತೀಶ್ ಜಾರಕಿಹೊಳಿ

By Ravi Janekal  |  First Published Jan 5, 2024, 12:19 PM IST

ಆಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಎಲ್ಲ ರಾಜಕೀಯ ಪಕ್ಷದ ಮುಖಂಡರನ್ನು ಆಹ್ವಾನಿಸಬೇಕಿತ್ತು. ಆದರೆ ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನು ಹೊರತುಪಡಿಸಿ ಯಾರಿಗೂ ಆಹ್ವಾನ ನೀಡಿಲ್ಲ ಅದ್ಯಾಗೂ ನಮಗೆ ಆಹ್ವಾನ ಬಂದರೆ ನಾವು ಭಾಗವಹಿಸುವುದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದರು.


ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಒನ್-ಮ್ಯಾನ್ ಶೋ ಆಗಿದೆ: ಸತೀಶ್ ಜಾರಕಿಹೊಳಿ

ಬೆಂಗಳೂರು (ಜ.5): ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ಒನ್‌ಮ್ಯಾನ್ ಶೋ ಆಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದರು.

Tap to resize

Latest Videos

ಆಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡುವಲ್ಲಿ ತಾರತಮ್ಯ ಮಾಡಿರುವ ವಿಚಾರ ಪ್ರಸ್ತಾಪಿಸಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಆಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಎಲ್ಲ ರಾಜಕೀಯ ಪಕ್ಷದ ಮುಖಂಡರನ್ನು ಆಹ್ವಾನಿಸಬೇಕಿತ್ತು. ಆದರೆ ಉತ್ತರ ಪ್ರದೇಶದ ಮುಖ್ಯಮಂತ್ರಿಯನ್ನು ಹೊರತುಪಡಿಸಿ ಯಾರಿಗೂ ಆಹ್ವಾನ ನೀಡಿಲ್ಲ ಅದ್ಯಾಗೂ ನಮಗೆ ಆಹ್ವಾನ ಬಂದರೆ ನಾವು ಭಾಗವಹಿಸುವುದಿಲ್ಲ ಎಂದ ಸ್ಪಷ್ಟಪಡಿಸಿದರು. 

ರಾಮಜ್ಯೋತಿ ಬೆಳಗಿಸಲು ವಿರೋಧ ಮಾಡುವ ಪ್ರಶ್ನೆ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ನಾನು ಬೇರೆ ಸಮಯದಲ್ಲಿ ಆಯೋಧ್ಯೆಗೆ ಭೇಟಿ ನೀಡ್ತೇನೆ:

ಆಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಲೇ ನನಗೆ ಆಹ್ವಾನ ನೀಡಿದರೂ ಹೋಗುವುದಿಲ್ಲ. ಜನಸಂದಣಿಯಲ್ಲಿ ಹೋಗುವ ಬದಲು ಬೇರೆ ಸಮಯದಲ್ಲಿ ಆಯೋಧ್ಯೆಗೆ ಭೇಟಿ ನೀಡುತ್ತೇನೆ. ನಾನು ನನ್ನ ಜನ್ಮಸ್ಥಳದಲ್ಲಿರುವ ರಾಮ ಮಂದಿರಕ್ಕೆ ಭೇಟಿ ನೀಡುತ್ತೇನೆ ಎಂದರು. ಇದೇ ವೇಳೆ ಕರಸೇವಕರ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಸಚಿವರು, ಜನರ ಸಂಕಷ್ಟಗಳನ್ನು ಪರಿಹರಿಸಲು ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಬೇಕು. ಹಿಂದಿನ ಪ್ರಕರಣಗಳ ಆಧಾರದ ಮೇಲೆ ಪೊಲೀಸರು ಅವರನ್ನು ಬಂಧಿಸಿದ್ದಾರೆ ಮತ್ತು ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ. ಇವರು ಒಂದೆರಡು ದಿನ ಪ್ರತಿಭಟನೆ ಮಾಡ್ತಾರೆ ಅಷ್ಟೆ. ನಾವೇನು ಯಾವುದನ್ನು ಸಮರ್ಥನೆ ಮಾಡುತ್ತಿಲ್ಲ. ನ್ಯಾಯಾಲಯ ಇದೆ ಅಲ್ಲಿ ತೀರ್ಮಾನ ಆಗಬೇಕು. ಪೊಲೀಸರು ಆರೋಪಿಯನ್ನು ಬಂಧನ ಮಾಡಿದರೆ, ಅದಕ್ಕೂ ಕಾಂಗ್ರೆಸ್‌ಗೂ ಏನೂ ಸಂಬಂಧ ಇಲ್ಲ ಎಂದು ಪ್ರಶ್ನಿಸಿದರು.

ವೈಚಾರಿಕ ಪ್ರಜ್ಞೆ ಮೂಡಿಸುವುದೆ ನಮ್ಮ ಉದ್ದೇಶ: ಸಚಿವ ಸತೀಶ್‌ ಜಾರಕಿಹೊಳಿ

click me!