
ಬೆಂಗಳೂರು (ಸೆ.30) : ಅಲ್ವಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಜೀಂ ಪ್ರೇಮ್ ಜೀ ಫೌಂಡೇಶನ್ ಆಯ್ಕೆ ಮಾಡಿರುವ ಮದರಾಸಗಳಲ್ಲಿ ಔಪಾಚಾರಿಕ ಶಿಕ್ಷಣ ವಿಷಯಗಳಾದ ಕನ್ನಡ , ಇಂಗ್ಲೀಷ್, ವಿಜ್ಞಾನ ಮತ್ತು ಗಣಿತ ವಿಷಯಗಳನ್ನು ಬೋಧಿಸಲು ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಅಕ್ಟೋಬರ್ 04, 2025 ರಂದು ಕೊನೆಯದಿನವಾಗಿರುತ್ತದೆ. ಅಕ್ಟೋಬರ್ 10.2025 ರಂದು ಸಾಮಾನ್ಯ ಪ್ರವೇಶ ಪರೀಕ್ಷಾ ನಡೆಯಲಿದ್ದು, ಅಕ್ಟೋಬರ್ 13, 2025 ರಂದು ಫಲಿತಾಂಶ ಬಿಡುಗಡೆ, ಅಕ್ಟೋಬರ್ 15, 2025 ರಂದು ಬೋಧನಾ ಪ್ರತಾಕ್ಷಿಕೆ ನಡೆಯಲಿದೆ.
ಅರ್ಹ ಅಭ್ಯರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಯಲದ ಅಧಿಕೃತ ಜಾಲತಾಣ https://dom.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯೋಂ ಬ್ಲಾಕ್, ವಿ.ವಿ. ಗೋಪುರ, ಡಾ. ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು-01 ಅಥವಾ ದೂರವಾಣಿ ಸಂಖ್ಯೆ 080-22866718 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ