32 ಲಕ್ಷ ಅನಧಿಕೃತ ನಿವೇಶನಗಳಿಗೆ ಬಿ-ಖಾತಾ: ಸಚಿವ ಕೃಷ್ಣ ಬೈರೇಗೌಡ

Published : Jan 28, 2025, 07:52 AM IST
32 ಲಕ್ಷ ಅನಧಿಕೃತ ನಿವೇಶನಗಳಿಗೆ ಬಿ-ಖಾತಾ: ಸಚಿವ ಕೃಷ್ಣ ಬೈರೇಗೌಡ

ಸಾರಾಂಶ

ಫೆ.10ರ ಒಳಗಾಗಿ ಈ ಬಗ್ಗೆ ಸುತ್ತೋಲೆ ಹೊರಡಿಸಲಿದ್ದು, ಮೂರು ತಿಂಗಳಲ್ಲಿ ಅಭಿ ಯಾನ ರೂಪದಲ್ಲಿ ಖಾತಾ ವಿತರಣೆ ಮಾಡಬೇಕು. ನಗರಸಭೆ, ಪುರಸಭೆ ಅಧಿಕಾರಿಗಳೇ ಮನೆ-ಮನೆಗೂ ಹೋಗಿ ಬಿ ಖಾತಾ ನೀಡಬೇಕು. ಇದೆಲ್ಲದರ ಜವಾಬ್ದಾರಿ ಜಿಲ್ಲಾಧಿಕಾರಿಗಳಿಗೆ ನೀಡಿದ್ದೇವೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು(ಜ.28): ಬಿಬಿಎಂಪಿ ವ್ಯಾಪ್ತಿ ಹೊರತುಪಡಿಸಿ ರಾಜ್ಯದ ಇತರೆ ನಗರ ಪ್ರದೇಶ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 30 ರಿಂದ 32 ಲಕ್ಷ ನಿವೇಶನ- ಅಸ್ತಿಗಳಿಗೆ ಯಾವುದೇ ಎಲೆಕ್ಟ್ರಾನಿಕ್ ದಾಖಲೆ (ಇ-ದಾಖಲೆ) ಇಲ್ಲ. ಈ ಎಲ್ಲಾ ಆಸ್ತಿಗಳಿಗೂ ಒಂದು ಬಾರಿಯ ಪರಿಹಾರವಾಗಿ ಎಲೆಕ್ಟ್ರಾನಿಕ್ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. 

ಸೋಮವಾರ ವಿಧಾನಸೌಧದಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆಗೆ ಸಭೆ ನಡೆಸಿದ ಸಭೆ ನಡೆಸಿರ ಅವರು, ಫೆ.10ರ ಒಳಗಾಗಿ ಈ ಬಗ್ಗೆ ಸುತ್ತೋಲೆ ಹೊರಡಿಸಲಿದ್ದು, ಮೂರು ತಿಂಗಳಲ್ಲಿ ಅಭಿ ಯಾನ ರೂಪದಲ್ಲಿ ಖಾತಾ ವಿತರಣೆ ಮಾಡಬೇಕು. ನಗರಸಭೆ, ಪುರಸಭೆ ಅಧಿಕಾರಿಗಳೇ ಮನೆ-ಮನೆಗೂ ಹೋಗಿ ಬಿ ಖಾತಾ ನೀಡಬೇಕು. ಇದೆಲ್ಲದರ ಜವಾಬ್ದಾರಿ ಜಿಲ್ಲಾಧಿಕಾರಿಗಳಿಗೆ ನೀಡಿದ್ದೇವೆ ಎಂದು ಹೇಳಿದರು. 

ಜಮೀನು ದಾಖಲೆ ರಕ್ಷಣೆಗೆ ಭೂ ಸುರಕ್ಷಾ ಯೋಜನೆ ಸಹಕಾರಿ: ಸಚಿವ ಕೃಷ್ಣ ಬೈರೇಗೌಡ

ಬಳಿಕ ಸುದ್ದಿಗೋಷ್ಠಿ ನಡೆಸಿದ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.7ರಂದು ಸಭೆ ನಡೆಸಿ ಫೆ.10 ರಿಂದದಾಖಲೆ ಇಲ್ಲದನಿವೇಶನಗಳ ಮಾಲೀಕರಿಗೆ ಒಮ್ಮೆ ಇ-ಆಸ್ತಿ ನಮೂದಿಸಿ ಬಿ-ಖಾತಾ ಅಥವಾ ಸಮಾನಾಂತರ ದಾಖಲೆ ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಹೀಗಾಗಿ ಸೋಮವಾರ ಜಿಲ್ಲಾಧಿಕಾರಿಗಳ ಸಭೆನಡೆಸಿ ಸರ್ಕಾರ ಮುಖ್ಯಕಾರ್ಯದರ್ಶಿಗಳ ಸಮ್ಮುಖದಲ್ಲಿ ಫೆ.10ರೊಳಗೆ ಸುತ್ತೋಲೆ ಹೊರಡಿಸಿ ಗರಿಷ್ಠ ಮೂರು ತಿಂಗಳೊಳಗೆ ಅಭಿಯಾನ ಮಾದರಿಯಲ್ಲಿ ಬಾಕಿ ಇರುವ ಎಲ್ಲಾ ಆಸ್ತಿಗಳಿಗೆ ಬಿ-ಖಾತಾ ಮಾಡಿಕೊಡಬೇಕು ಎಂದು ಸೂಚಿಸಲಾಗಿದೆ ಎಂದು ಹೇಳಿದರು. 

ರಾಜ್ಯದಲ್ಲಿ ಬಿ-ಖಾತಾ ಇರುವುದಿಲ್ಲ: 

ಅನಧಿಕೃತ ನಿವೇಶನಗಳ ಬಗ್ಗೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಹೀಗಾಗಿ ನಾವು ಅದನ್ನು ಪಾಲಿಸಲೇಕಾದ ತುರ್ತು ಎದುರಾಗಿದೆ. ಹೀಗಾಗಿ ಎಷ್ಟು ನಿವೇಶನ ಇವೆ ಎಂದು ಗುರುತಿಸಿ ಸರ್ಕಾರವೇ ಬಿ-ಖಾತಾ ಮಾಡಿಕೊಡಲಿದೆ. ಬಳಿಕ ರಾಜ್ಯದಲ್ಲಿ ಬಿ-ಖಾತಾ ಇರುವುದಿಲ್ಲ. ಎ-ಖಾತಾ ಮಾತ್ರ ಇರಲಿದ್ದು, ಮುಂದಿನ ದಿನಗಳಲ್ಲಿ ಅನಧಿಕೃತ ನಿವೇಶನಗಳಿಗೆ ಅವಕಾಶವೇ ಇಲ್ಲ. ನಗರ ವ್ಯಾಪ್ತಿಯಲ್ಲಿ ಈ ಅಭಿಯಾನ ಮುಗಿಯುತ್ತಿ ದ್ದಂತೆ ಗ್ರಾಪಂ ವ್ಯಾಪ್ತಿಯಲ್ಲೂ ಇದೇ ಮಾದರಿ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು. 

ಬಿಬಿಎಂಪಿ ವ್ಯಾಪ್ತಿಯಲ್ಲಿ ಸದ್ಯಕ್ಕಿಲ್ಲ: 

ಬಿಬಿಎಂಪಿ ವ್ಯಾಪ್ತಿಯಲ್ಲಿ ಸದ್ಯಕ್ಕೆ ಕಂದಾಯ ನಿವೇಶನಗಳಿಗೆ ಇ-ಖಾತಾ (ಬಿ ನಮೂನೆ) ನೀಡಲಾಗುವುದಿಲ್ಲ. ನಗರ ಪ್ರದೇಶ, ಗ್ರಾಪಂ ಮಟ್ಟದಲ್ಲಿನ ಅಭಿಯಾನ ಪೂರ್ಣಗೊಂಡ ಬಳಿಕ ಬಿಬಿಎಂಪಿಯಲ್ಲಿ ಯಾವ ರೀತಿಯಲ್ಲಿ ಮಾಡಬೇಕೆಂಬ ಬಗ್ಗೆ ಚರ್ಚಿಸಲಾಗುವುದು. ಸದ್ಯಕ್ಕೆ ಈ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ದರ್ಖಾಸ್ತು ಪೋಡಿ ಅಭಿಯಾನ

ದಶಕಗಳ ಹಿಂದೆ ಜಮೀನು ಮಂಜೂರು ಆಗಿದ್ದರೂ ಸರಿಯಾದ ದಾಖಲೆ ಇಲ್ಲದವರಿಗಾಗಿ ಡಿಸೆಂಬರ್‌ಮೊದಲವಾರದಿಂದಲೇದರ್ಖಾಸ್ತು ಪೋಡಿ ಅಭಿಯಾನ ಶುರುವಾಗಿದ್ದು, 26 ಸಾವಿರ ಮಂಜೂರಿದಾರರ ಜಮೀನುಗಳನ್ನು ಸರ್ವೇಗೆ ಅನುಮತಿ ನೀಡಲಾಗಿದೆ. ಈ ಪೈಕಿ 5 ಸಾವಿರ ಜನರಿಗೆ ಈಗಾಗಲೇ ಸರ್ವೇ ಮುಗಿಸಿದ್ದೇವೆ. ಈ ಎಲ್ಲರಿಗೂ ಹೊಸ ಪಹಣಿ ಹಾಗೂ ನಕ್ಷೆ ನೀಡಲಾಗುವುದು. ಇದು ಜಮೀನಿನ ಮಾಲೀಕತ್ವದ ಗ್ಯಾರಂಟಿಯಾಗಿದ್ದು, ಈ ಅಭಿಯಾನಕ್ಕೆ ನನ್ನ ಭೂಮಿ ಎಂದು ಹೆಸರಿಡಲಾಗಿದೆ ಎಂದು ಮಾಹಿತಿ ನೀಡಿದರು.

ಬೆಳಗಾವಿ ವಿಭಜನೆ ಸದ್ಯಕ್ಕಿಲ್ಲ: ಸಚಿವ ಕೃಷ್ಣ ಬೈರೇಗೌಡ

4.5 ಕೋಟಿ ರು. ಪ್ರೋತ್ಸಾಹ ಧನ: 

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಆಧಾರ್ ಸೀಡಿಂಗ್ ಕಾರ್ಯಕ್ರಮದ ಆಡಿ ರಾಜ್ಯದಲ್ಲಿ 2.12 ಕೋಟಿ ಜಮೀನುಗಳನ್ನು ಆರ್‌ಟಿಸಿ ಜೊತೆಗೆ ಆಧಾರ್ ಜೋಡಿಸಲಾಗಿದೆ. ಇದನ್ನೆಲ್ಲಾ ಮಾಡಿದ್ದು ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರು. ಹೀಗಾಗಿ ಗ್ರಾಮ ಸಹಾಯಕರು ಹಾಗೂ ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೊತ್ಸಾಹ ಧನ ನೀಡಬೇಕು ಎಂದು ತೀರ್ಮಾನಿಸಲಾಗಿದೆ ಎಂದರು. ಸಭೆಯಲ್ಲಿ ಮುಖ್ಯ ಕಾವ್ಯದರ್ಶಿ ಶಾಲಿನಿ ರಜನೀಶ್, ಕಂದಾಯ ಇಲಾಖೆ ಪ್ರಧಾನ ಕಾವ್ಯದರ್ಶಿ ರಾಜೇಂದ್ರ ಕಟಾರಿಯಾ ಇದ್ದರು.

ಡಿಸಿಗಳ ಬಗ್ಗೆ ಸಚಿವ ಬೇಸರ 

ವಿವಿಧ ಯೋಜನೆಗಳ ಅನುಷ್ಠಾನ ಕುರಿತ ನಿಧಾನಗತಿಗೆ ಬೇಸರ ವ್ಯಕ್ತಪಡಿಸಿದ ಸಚಿವ ಕೃಷ್ಣ ಬೈರೇಗೌಡ, ಕಂದಾಯ ಇಲಾಖೆ ಕೆಲಸಗಳನ್ನು ಜಿಲ್ಲಾಧಿಕಾರಿಗಳೇ ನಿರ್ವಹಿಸದಿದ್ದರೆ ಯಾರನ್ನು ಕೇಳಬೇಕು. ನನ್ನನ್ನು ಕೇರ್ ಮಾಡದಿದ್ದರೂ ಪರವಾಗಿಲ್ಲ, ಬಡ ಜನರ ಕೆಲಸ ಮಾಡಿ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!