ನಾಗೇಂದ್ರ ಅವರು ಹೊಣೆ ಹೊತ್ತಿದ್ದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವ್ಯಾಪ್ತಿ ಅಡಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಬರುವುದರಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸುವ ಅಗತ್ಯ ಇದೆ. ಈ ಹಿನ್ನೆಲೆಯಲ್ಲಿ ಅವರನ್ನೂ ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು(ಜು.04): ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರು. ಆಕ್ರಮ ಹಣ ವರ್ಗಾವಣೆ ಪ್ರಕರಣ ಕುರಿತು ಸಿಬಿಐ ಅಧಿಕಾರಿ ಗಳು ತನಿಖೆ ಮುಂದುವರಿಸಿದ್ದು, ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಕೂಡ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪೂರ್ವ ವಲಯದ ಉಪಪ್ರಧಾನ ವ್ಯವಸ್ಥಾಪಕ ಜೆ.ಮಹೇಶ್ ದೂರು ನೀಡಿದ್ದರು.
ಈ ದೂರಿನನ್ವಯ ಎಂ.ಜಿ.ರಸ್ತೆ ಶಾಖೆಯ ಮುಖ್ಯ ವ್ಯವಸ್ಥಾಪಕಿ ಸುಚಿಸ್ಮಿತಾ ರಾವಲ್, ಉಪ ವ್ಯವಸ್ಥಾಪಕಿ ಡಿ.ದೀಪಾ, ಅಧಿಕಾರಿ ವಿ.ಕೃಷ್ಣಮೂರ್ತಿ ಹಾಗೂ ಇಬ್ಬರು ಖಾಸಗಿ ವ್ಯಕ್ತಿಗಳ ವಿರುದ್ಧ ಸಿಬಿಐ ಈಗಾಗಲೇ ಎಫ್‌ಐಆರ್ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದೆ. ಆರೋಪಿಗಳ ವಿರುದ್ಧ ವಂಚನೆ, ಒಳಸಂಚು, ನಕಲಿ ದಾಖಲೆ ಸೃಷ್ಟಿ, ಅವ್ಯವಹಾರ ಆರೋಪಗಳ ಅನ್ವಯ ತನಿಖೆ ನಡೆಸಲಾಗುತ್ತಿದೆ. ನಾಗೇಂದ್ರ ಅವರು ಹೊಣೆ ಹೊತ್ತಿದ್ದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವ್ಯಾಪ್ತಿ ಅಡಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಬರುವುದರಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸುವ ಅಗತ್ಯ ಇದೆ. ಈ ಹಿನ್ನೆಲೆಯಲ್ಲಿ ಅವರನ್ನೂ ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ವಾಲ್ಮೀಕಿ ನಿಗಮದ 187 ಕೋಟಿ ರೂ. ಬ್ರಹ್ಮಾಂಡ ಭ್ರಷ್ಟಾಚಾರದ ಹಿಂದಿದೆ 'ನಾಗ'ರಹಸ್ಯ; ಹಣ ನುಂಗಿದವರ ಅಸಲಿ ಮುಖ ಬಯಲು!
ಸದ್ಯಕ್ಕೆ ಪ್ರಕರಣಕ್ಕೆ ಸಂಬಂಧಪಟ್ಟವರ ವಿಚಾರಣೆ ನಡೆಸಿ ಹೆಚ್ಚಿನ ಮಾಹಿತಿ ಸಂಗ್ರ ಹಿಸಲಾಗುತ್ತಿದೆ. ಮತ್ತಷ್ಟು ಮಾಹಿತಿ ಪಡೆದ ಬಳಿಕ ನಾಗೇಂದ್ರ ಅವರನ್ನು ವಿಚಾ ರಣೆಗೊಳಪಡಿಸಲಾಗುತ್ತದೆ. ಅಲ್ಲದೇ, ನಿಗಮದ ಅಧ್ಯಕ್ಷರಾಗಿರುವ ಶಾಸಕ ಬಸನ ಗೌಡ ದದ್ದಲ್ ಅವರನ್ನು ಸಹ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ನಿಗಮದ ಅಧಿಕಾರಿ ಚಂದ್ರಶೇಖರನ್ ಮೇ 26ರಂದು ಶಿವಮೊಗ್ಗದ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದಡೆತ್ ನೋಟ್‌ನಲ್ಲಿ ಬ್ಯಾಂಕ್‌ನ ಅಧಿಕಾರಿಗಳ ಹೆಸರು ಮತ್ತು ಸಚಿವರು ಎಂದು ಉಲ್ಲೇಖಿಸಿದ್ದರು. ಚಂದ್ರಶೇಖರನ್ ಆತ್ಮಹತ್ಯೆ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು. ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾದ ಬಳಿಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾಗಿದ್ದ ಬಿ.ನಾಗೇಂದ್ರ ಜೂ.6 ರಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.