
ಬೆಂಗಳೂರು: ಪಕ್ಷದ ಶಾಸಕರು, ಹಿರಿಯರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಇದೇ 17ರಂದು ಭಾನುವಾರ ಭೇಟಿ ನೀಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅಂದು ಮಂಜುನಾಥೇಶ್ವರನ ದರ್ಶನ ಪಡೆದು ಬರಲಿದ್ದೇವೆ. ನಾವು ಬಿಜೆಪಿ ಕಾರ್ಯಕರ್ತರು ಎಂಬುದಕ್ಕಿಂತ ಹೆಚ್ಚಾಗಿ ಧರ್ಮಸ್ಥಳ ಮಂಜುನಾಥೇಶ್ವರನ ಭಕ್ತರಾಗಿ ಅಲ್ಲಿಗೆ ತೆರಳುತ್ತೇವೆ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಬಿಜೆಪಿ ನಿಲುವು ಸ್ಪಷ್ಟವಿದೆ. ಎಸ್ಐಟಿ ತನಿಖೆ ಶೀಘ್ರದಲ್ಲಿ ಮುಗಿಯಬೇಕು. ಇದನ್ನು ಹೀಗೇ ಎಳೆದುಕೊಂಡು ಹೋಗಲು ಸಾಧ್ಯವಿಲ್ಲ. ಸತ್ಯಾಸತ್ಯತೆ ಬಹಿರಂಗ ಆಗಬೇಕು. ಗೊಂದಲಗಳಿಗೆ ಅತಿ ಶೀಘ್ರವೇ ತೆರೆ ಬೀಳಬೇಕಿದೆ ಎಂದು ಹೇಳಿದರು.
ಈ ತನಿಖೆಯ ಹಿಂದೆ ಕೆಲವು ಸಮಾಜಘಾತುಕ ಶಕ್ತಿಗಳು, ಎಸ್‌ಡಿಪಿಐ, ಬೇರೆ ಬೇರೆ ಕುತಂತ್ರಗಳು ನಡೆಯುತ್ತಿವೆ ಎಂಬ ಚರ್ಚೆಗಳು ಜನಸಾಮಾನ್ಯರಲ್ಲಿ ನಡೆಯುತ್ತಿವೆ. ನಾವು ಮಂಜುನಾಥೇಶ್ವರನ ಹಾಗೂ ಅಣ್ಣಪ್ಪ ಸ್ವಾಮಿಯ ದರ್ಶನ ಪಡೆಯಲು ಹೋಗಲಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಟಾರ್ಗೆಟ್ ಧರ್ಮಸ್ಥಳವಿರುದ್ಧ 14 ಜಿಲ್ಲೆಗಳಲ್ಲಿಭಕ್ತರಿಂದ ಪ್ರತಿಭಟನೆ
ಬೆಂಗಳೂರು: ಧರ್ಮಸ್ಥಳ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೆಸರಿಗೆ ಕಳಂಕ ಮತ್ತು ಕೋಟ್ಯಂತರ ಭಕ್ತರ ಭಾವನೆಗೆ ಧಕ್ಕೆ ತರುವ ಕಾರ್ಯ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಭಕ್ತರು ಬುಧವಾರ ರಾಜ್ಯದ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಬೆಳಗಾವಿ, ಹಾಸನ, ಚಿಕ್ಕೋಡಿ ಸೇರಿ ಹಲವು ಕಡೆಗಳಲ್ಲಿ ಪ್ರತಿಭಟನೆಗಳು ನಡೆದಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ