
ಚಿಕ್ಕಬಳ್ಳಾಪುರ (ನ.14): ಅಮೆರಿಕದ ವಾಯುಸೇನೆಯ ಬಿ-1ಬಿ ಲ್ಯಾನ್ಸರ್ ಬಾಂಬರ್ ಯುದ್ಧ ವಿಮಾನ ಹಾರಾಟದ ವೇಳೆ ಸೃಷ್ಟಿಸಿದ ಶಬ್ಧದಿಂದಾಗಿ ಚಿಕ್ಕಬಳ್ಳಾಪುರ ಜನತೆ ಬೆಚ್ಚಿಬಿದ್ದ ಘಟನೆ ಗುರುವಾರ ನಡೆದಿದೆ. ತಾಲೂಕಿನ ಆರೂರು, ಸರ್ಕಾರಿ ನಂದಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರ, ಆವಲನಾಗೇನಹಳ್ಳಿ, ದೊಡ್ಡಪೈಲಗುರ್ಕಿ, ಚಿಕ್ಕಪೈಲಗುರ್ಕಿ ಸೇರಿದಂತೆ ತುಮಕಲಹಳ್ಳಿ ವ್ಯಾಪ್ತಿಯ ಹತ್ತಾರು ಗ್ರಾಮಗಳ ಮೇಲೆ ಅಮೆರಿಕದ ಬಿ-1ಬಿ ಲ್ಯಾನ್ಸರ್ ಬಾಂಬರ್ ಸೂಪರ್‌ಸಾನಿಕ್ ಯುದ್ಧ ವಿಮಾನ (ವಾರ್ ಜೆಟ್) ಗುರುವಾರ ಬೆಳಗ್ಗೆ ಸುಮಾರು 10.30ರ ಸಮಯದಲ್ಲಿ ಪರೀಕ್ಷಾರ್ಥ ಹಾರಾಟ ನಡೆಸಿತು. ಇದನ್ನು ಕಂಡ ಜನ ಆತಂಕಕ್ಕೆ ಒಳಗಾದರು.
ವಿಮಾನದ ಸದ್ದು ಕೇಳಿ ಜನ ಇದ್ಯಾವುದೋ ಹೆಲಿಕಾಪ್ಟರ್ ಇರಬೇಕು. ಇಷ್ಟು ಸೌಂಡ್ ಬರ್ತಿದೆ ಅಂದ್ರೆ ಕೆಟ್ಟು ಹೋಗಿರಬೇಕು, ಎಲ್ಲೋ ಬಿದ್ದು ಹೋಗಿದೆ ಅಂತ ಭಾವಿಸಿದರು. ಈ ವದಂತಿ ಕಾಡ್ಗಿಚ್ಚಿನಂತೆ ಹಬ್ಬಿ ಪೇರೇಸಂದ್ರ ಪೊಲೀಸರ ಗಮನಕ್ಕೂ ಹೋಗಿದೆ. ತಕ್ಷಣ ಠಾಣೆಯ ಪೊಲೀಸರು ಬೀಟ್ ವ್ಯಾಪ್ತಿಗಳಲ್ಲಿ ಕರೆ ಮಾಡಿ ಮಾಹಿತಿ ಕಲೆ ಹಾಕಿ ಬೆಟ್ಟ-ಗುಡ್ಡಗಳ ಕಡೆ ಹೋಗಿ ಹೆಲಿಕಾಪ್ಟರ್ ಪತನವಾಗಿದೆಯಾ ಎಂದು ಹುಡುಕಾಟ ಸಹ ನಡೆಸಿದರು.
ಕೊನೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್‌ನಿಂದ ಜಿಲ್ಲಾ ಪೊಲೀಸ್ ಇಲಾಖೆಗೆ, ಇದು ಬಿ1ಬಿ ಬಾಂಬರ್‌ನ ಸದ್ದು, ಈಗಾಗಲೇ ಬಿ1ಬಿ ಬಾಂಬರ್ ವಿಮಾನ ಏರ್ ಪೋರ್ಟ್‍ನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಭಾರತ-ಅಮೆರಿಕ ಜಂಟಿ ಸಮರಾಭ್ಯಾಸದ ಭಾಗವಾಗಿ ಅಮೆರಿಕದ ಬಿ-1ಬಿ ಲ್ಯಾನ್ಸರ್ ಬಾಂಬರ್ ವಿಮಾನ ಭಾರತಕ್ಕೆ ಆಗಮಿಸಿದೆ ಎಂದು ತಿಳಿಸಿದ್ದಾರೆ. ಇದರೊಂದಿಗೆ ಪೊಲೀಸರು ಮತ್ತು ಜಿಲ್ಲೆಯ ಜನತೆ ನಿಟ್ಟುಸಿರು ಬಿಟ್ಟರು.
ದೆಹಲಿ ಸ್ಫೋಟ ಕೇಸಲ್ಲಿ ಬಂಧಿತ ಉಗ್ರರು, ಕಾಶ್ಮೀರದಲ್ಲಿ ಮತ್ತೊಂದು ಪುಲ್ವಾಮಾ ಮಾದರಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಭಧ್ರತಾ ಪಡೆಗಳು ಕಾಶ್ಮೀರದಲ್ಲಿ ತಪಾಸಣೆ ತೀವ್ರಗೊಳಿಸಿದ್ದ ಕಾರಣ ಮತ್ತು ತಮ್ಮ ತಂಡದ ಸದಸ್ಯನೊಬ್ಬ ಸಿಕ್ಕಿಬಿದ್ದ ಕಾರಣ ಅವರು ಕಾಶ್ಮೀರದಲ್ಲಿನ ತಮ್ಮ ಯೋಜನೆ ರದ್ದುಪಡಿಸಿ, ಅದನ್ನು ದೆಹಲಿಗೆ ವರ್ಗಾಯಿಸಿದ್ದರು ಎಂಬ ವಿಷಯ ತನಿಖೆ ವೇಳೆ ಬೆಳಕಿಗೆ ಬಂದಿದೆ. 2019ರ ಫೆ.14ರಂದು ಭದ್ರತಾ ಸಿಬ್ಬಂದಿಗಳಿದ್ದ ವಾಹನಕ್ಕೆ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೇಥ್ಪೊರದಲ್ಲಿ ಆತ್ಮಹತ್ಯಾ ಬಾಂಬರ್ ಇದ್ದ ವಾಹನದಿಂದ ದಾಳಿ ಮಾಡಲಾಯಿತು. ಈ ದಾಳಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ 40 ಮಂದಿ ಹುತಾತ್ಮರಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ