ನಾನೂ ಮೋದಿ ಇದ್ದಂಗೆ, ಆದ್ರೆ ಅವರಿಗೆ ಹೆಂಡ್ತಿ ಇಲ್ಲ: ಚಿಂಚನಸೂರ್!

Published : Mar 16, 2019, 07:48 PM ISTUpdated : Mar 16, 2019, 10:05 PM IST
ನಾನೂ ಮೋದಿ ಇದ್ದಂಗೆ, ಆದ್ರೆ ಅವರಿಗೆ ಹೆಂಡ್ತಿ ಇಲ್ಲ: ಚಿಂಚನಸೂರ್!

ಸಾರಾಂಶ

ಪ್ರಧಾನಿ ಮೋದಿ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಬಾಬೂರಾವ್ ಚಿಂಚನಸೂರ್‌| ಗುರುಮಠಕಲ್‍ನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆ| ನಾನೂ ಕೂಡ ಪ್ರಧಾನಿ ನರೇಂದ್ರ ಮೋದಿ ಇದ್ದಂತೆ ಎಂದ ಚಿಂಚನಸೂರ್| ನನಗೆ ಪತ್ನಿ ಇದ್ದು, ಮೋದಿ ಅವರಿಗೆ ಇಲ್ಲ ಎಂದ ಚಿಂಚನಸೂರ್| ಮಲ್ಲಿಕಾರ್ಜುನ ಖರ್ಗೆ ಒಂದು ಹಳೆಯ ಪರ್ವತದಂತೆ ಎಂದ ಬಿಜೆಪಿ ಮುಖಂಡ|

ಯಾದಗಿರಿ(ಮಾ.16): ಬಿಜೆಪಿ ಮುಖಂಡ, ಮಾಜಿ ಸಚಿವ ಬಾಬೂರಾವ್ ಚಿಂಚನಸೂರ್‌ ಪ್ರಧಾನಿ ನರೇಂದ್ರ ಮೋದಿ ಕುರಿತಾಗಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಯಾದಗಿರಿ ಜಿಲ್ಲೆ ಗುರುಮಠಕಲ್‍ನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಬಾಬೂರಾವ್ ಚಿಂಚನಸೂರ್‌, ‘ನಾನೂ ಕೂಡ ಪ್ರಧಾನಿ ನರೇಂದ್ರ ಮೋದಿ ಇದ್ದಂತೆ. ಆದರೆ ನನಗೆ ಪತ್ನಿ ಇದ್ದಾರೆ. ಅವರಿಗಿಲ್ಲ ಎಂಬುದಷ್ಟೇ ವ್ಯತ್ಯಾಸ..’ಎಂದು ಹೇಳಿದ್ದಾರೆ.

"

ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಚಿಂಚನಸೂರ್‌, ಡಾ. ಉಮೇಶ್ ಜಾಧವ್ ಗೆದ್ದರೆ ಕೇಂದ್ರ ಸಚಿವರಾಗುತ್ತಾರೆ. ಹಾಗಾದರೆ ಇಲ್ಲಿನ ಪ್ರತಿಯೊಬ್ಬರೂ ಮಂತ್ರಿಯಾದಂತೆ. ಹೀಗಾಗಿ ನೀವೆಲ್ಲರೂ ಅವರನ್ನು ಬಹುಮತದಿಂದ ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಮುಖಂಡ, ಲೋಕಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಒಂದು ಹಳೆಯ ಪರ್ವತದಂತೆ, ಅದೀಗ ನಿಧಾನವಾಗಿ ಕುಸಿಯಲು ಪ್ರಾರಂಭಿಸಿದೆ ಎಂದು ಚಿಂಚನಸೂರ್ ವ್ಯಂಗ್ಯವಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!