ಹತ್ತು ವರ್ಷಗಳ ಬಳಿಕ ಜಾತಿ ಗಣತಿ: ಮನೆಗಳ ಮ್ಯಾಪಿಂಗ್ ಪ್ರಾರಂಭ

Published : Aug 24, 2025, 12:07 PM IST
Caste Census Report

ಸಾರಾಂಶ

ಮೊದಲ ಹಂತದಲ್ಲಿ ಸಮೀಕ್ಷೆಗೆ ಪೂರ್ವಭಾವಿಯಾಗಿ ಮನೆ ಪಟ್ಟಿ ಮತ್ತು ಅವುಗಳ ನಕ್ಷೆ (ಮ್ಯಾಪಿಂಗ್) ಸಿದ್ಧಪಡಿಸಲಾಗುವುದು. ರಾಜ್ಯಾದ್ಯಂತ ಎಲ್ಲ ಮನೆಗಳ ಸಂಪೂರ್ಣ ಎಣಿಕೆ, ಅನುಕ್ರಮ ಸಂಖ್ಯೆಗಳನ್ನು ನೀಡುವುದು ಮತ್ತು ಮ್ಯಾಪಿಂಗ್ ಕೆಲಸ ಮಾಡಲಾಗುವುದು.

ಬೆಂಗಳೂರು (ಆ.24): ರಾಜ್ಯ ಸರ್ಕಾರದ ನಿರ್ಧಾರದಂತೆ ಹತ್ತು ವರ್ಷಗಳ ಬಳಿಕ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಲು ಉದ್ದೇಶಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ)ಗೆ ಪೂರ್ವಭಾವಿಯಾಗಿ ಮೊದಲ ಹಂತದಲ್ಲಿ ಮನೆಗಳ ವಿದ್ಯುತ್‌ ಮೀಟರ್‌ಗಳಿಗೆ ಜಿಯೋ ಟ್ಯಾಗಿಂಗ್‌ ಕಾರ್ಯ ಶನಿವಾರದಿಂದ ಆರಂಭವಾಗಿದೆ.

ವಿದ್ಯುತ್‌ ಮೀಟರ್ ರೀಡರ್‌ಗಳು ತಮ್ಮ 'ಬಿಲ್ಲಿಂಗ್ ಸೈಕಲ್' ನಲ್ಲಿ ಮೀಟ‌ರ್ ರೀಡರ್ ಜಿಯೋ ಟ್ಯಾಗಿಂಗ್‌ ಕೆಲಸ ಆರಂಭಿಸಿ ಅಭಿವೃದ್ಧಿಪಡಿಸಲಾದ ಆ್ಯಪ್‌ನಲ್ಲಿ ದಾಖಲಿಸಲಿದ್ದು, ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ರಾಜ್ಯದ ಜನತೆ ಸಹಕರಿಸಬೇಕು ಎಂದು ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯಕ್‌ ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಸಮೀಕ್ಷೆಗೆ ಪೂರ್ವಭಾವಿಯಾಗಿ ಮನೆ ಪಟ್ಟಿ ಮತ್ತು ಅವುಗಳ ನಕ್ಷೆ (ಮ್ಯಾಪಿಂಗ್) ಸಿದ್ಧಪಡಿಸಲಾಗುವುದು. ರಾಜ್ಯಾದ್ಯಂತ ಎಲ್ಲ ಮನೆಗಳ ಸಂಪೂರ್ಣ ಎಣಿಕೆ, ಅನುಕ್ರಮ ಸಂಖ್ಯೆಗಳನ್ನು ನೀಡುವುದು ಮತ್ತು ಮ್ಯಾಪಿಂಗ್ ಕೆಲಸ ಮಾಡಲಾಗುವುದು. ರಾಜ್ಯದಲ್ಲಿರುವ ಎಲ್ಲ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವುದರಿಂದ ವಾಸದ ಮನೆಗಳ ಆರ್.ಆರ್.ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಮೀಕ್ಷೆ ಮಾಡಲಾಗುವುದು. ಎರಡನೇ ಹಂತದ ಸಮೀಕ್ಷೆ ಕಾರ್ಯವನ್ನು ಸೆಪ್ಟೆಂಬರ್‌ 22ರಿಂದ ಅಕ್ಟೋಬರ್ 7ರವರೆಗೆ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶಿಷ್ಟ ಆ್ಯಪ್‌ ವಿನ್ಯಾಸ: ಇ-ಆಡಳಿತ ಮತ್ತು ಇಂಧನ ಇಲಾಖೆಗಳು ವಿದ್ಯುಚ್ಛಕ್ತಿ ಮೀಟರ್ ಸಂಪರ್ಕದ (ಆ‌ರ್.ಆ‌ರ್.ನಂಬರ್) ಆಧಾರದ ಮೇಲೆ 'ಆ್ಯಪ್' ಅಭಿವೃದ್ಧಿಪಡಿಸಿದೆ. ಇದು ಎಲ್ಲ ಎಸ್ಕಾಂಗಳ ಮೀಟರ್ ರೀಡರ್‌ಗಳನ್ನು ಒಳಗೊಂಡಿರುತ್ತದೆ. ಎಸ್ಕಾಂಗಳ ಮೀಟರ್ ರೀಡರ್ ಗಳು, ಬಿಲ್ಲಿಂಗ್ ಮಾಡುವ ಜತೆಗೆ ಮನೆಗಳನ್ನು 'ಜಿಯೋ ಟ್ಯಾಗ್' ಮಾಡಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವ್ಯಾಪ್ತಿಗೆ ಒಳಪಡಿಸುತ್ತಾರೆ ಎಂದು ಮಧುಸೂಧನ ನಾಯಕ್‌ ವಿವರಿಸಿದ್ದಾರೆ.

ಪ್ರತಿ ಮನೆಗೂ ಸ್ಟಿಕ್ಕರ್‌: ಮೀಟರ್ ರೀಡಡ್‌ಗಳು ಸೆರೆಹಿಡಿದ ಮನೆ ಪಟ್ಟಿ ಡೇಟಾವನ್ನುನಾಗರಿಕ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ ಸರ್ವರ್‌ಗಳಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. ನಂತರ ದ್ವಿತೀಯ ದತ್ತಾಂಶಗಳನ್ನು ಆಧರಿಸಿ, 'ಮನೆ ಪಟ್ಟಿ' ಸಮೀಕ್ಷೆ ಉದ್ದೇಶಕ್ಕಾಗಿ 'ಮ್ಯಾಪಿಂಗ್'' ಮಾಡಲಾಗುತ್ತದೆ. ಅಭಿವೃದ್ಧಿಪಡಿಸಲಾದ ಅಪ್ಲಿಕೇಶನ್‌ನಲ್ಲಿ ಮನೆ ''ಸ್ಥಳ'''' ಸೆರೆಹಿಡಿಯಲಾಗುತ್ತದೆ ಮತ್ತು ಪ್ರತಿ ಮನೆಗಳಿಗೆ 'ವಿಶಿಷ್ಟ್ಯ ಸಂಖ್ಯೆ' ನೀಡಲಾಗುತ್ತದೆ. (ಅಪಾರ್ಟ್‌ಮೆಂಟ್‌ಗಳು/ವಾಸಸ್ಥಳಗಳ ಕ್ಲಸ್ಟರ್ ಸೇರಿ) ಇದಾದ ನಂತರ ಪ್ರತಿ ಮನೆಗೂ ಸ್ಟಿಕ್ಕರ್ ಅಂಟಿಸಿ ಸಮೀಕ್ಷೆದಾರರಿಗೆ ಮನೆ ಗುರುತಿಸುವಿಕೆ ಸುಲಭವಾಗುವಂತೆ ಮಾಡುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಮನೆಪಟ್ಟಿ ಕಾರ್ಯಾಚರಣೆಗಳ ಈ ಮೊದಲ ಹಂತವು ತುಂಬಾ ಸವಾಲಿನದ್ದಾಗಿದ್ದರೂ ವ್ಯವಸ್ಥಿತವಾಗಿ ಸಮೀಕ್ಷೆ ನಡೆಸಲಾಗುವುದು. ಆದ್ದರಿಂದ, ಸಾರ್ವಜನಿಕರು ಮತ್ತು ಪ್ರತಿಯೊಂದು ಕುಟುಂಬದ ಸದಸ್ಯರು (ವಿಶೇಷವಾಗಿ ಅಪಾರ್ಟ್‌ಮೆಂಟ್‌ ಮತ್ತು ಕ್ಲಸ್ಟರ್ ವಾಸಸ್ಥಳಗಳಲ್ಲಿ ವಾಸಿಸುವವರು) ಮೀಟರ್ ರೀಡರ್‌ಗಳಿಗೆ ವಹಿಸಲಾಗಿರುವ ಮನೆ ಪಟ್ಟಿ ಕೆಲಸವನ್ನು ಸುಗಮವಾಗಿ ಪೂರ್ಣಗೊಳಿಸುವ ದಿಸೆಯಲ್ಲಿ ಸಹಕರಿಸುವಂತೆ ಆಯೋಗದ ಅಧ್ಯಕ್ಷರು ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್