ಪಂಚಮಸಾಲಿಗೆ 2A ಮೀಸಲಾತಿ: ಸ್ವಾಮೀಜಿಗಳಿಗೆ ಪತ್ರ ಬರೆದ ಹಿಂದುಳಿದ ವರ್ಗಗಳ ಆಯೋಗ

By Suvarna NewsFirst Published Mar 12, 2021, 10:17 PM IST
Highlights

ಬಸವ ಮೃತ್ಯುಂಜಯ ಶ್ರೀ ಗಳು ಹಾಗೂ ವಚನನಂದಾ ಶ್ರೀಗಳಿಗೆ ಹಿಂದುಳಿದ ವರ್ಗಗಳ ಆಯೋಗ ಪತ್ರ ಬರೆದಿದೆ. ಆಯೋಗದ ಈ ಕ್ರಮಕ್ಕೆ ಸಚಿವರಾದ ನಿರಾಣಿ  ಹಾಗೂ ಸಿ.ಸಿ ಪಾಟೀಲ್ ಸಂತಸ  ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, (ಮಾ.12): ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ 2 ಎ ಗೆ ಸೇರ್ಪಡೆ ಮಾಡುವ ಕುರಿತಾಗಿ, ಬಸವ ಮೃತ್ಯುಂಜಯ ಮಹಾಸ್ವಾಮಿಗಳು ಹಾಗೂ ವಚನನಂದಾ ಶ್ರೀಗಳಿಗೆ ದಾಖಲೆಗಳನ್ನು ನೀಡುವಂತೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಪತ್ರ ಬರೆದಿರುವುದಕ್ಕೆ ಸಚಿವರಾದ ಮುರುಗೇಶ್ ನಿರಾಣಿ ಹಾಗೂ ಸಿ.ಸಿ.ಪಾಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.

ಮಾಚ್೯ 22 ರಂದು (ಸೋಮವಾರ) ಸೂಕ್ತ ಸಾಕ್ಷ್ಯಾಧಾರಗಳನ್ನು ಆಯೋಗಕ್ಕೆ ನೀಡಬೇಕೆಂದು ಕೂಡಲಸಂಗಮ ಮಠದ ಶ್ರೀಗಳು ಹಾಗೂ ಹರಿಹರ ಪೀಠದ ವಚನನಂದಾ ಸ್ವಾಮೀಜಿಗಳಿಗೆ ಪತ್ರ ಬರೆದಿರುವುದು 'ಸಕಾರಾತ್ಮಕ' ಬೆಳವಣಿಗೆ ಎಂದು ಬಣ್ಣಿಸಿದ್ದಾರೆ.

ಮೀಸಲಾತಿ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಸರ್ಕಾರ

ಹಿಂದುಳಿದ ವರ್ಗಗಳ ಆಯೋಗದ ಕಾರ್ಯದರ್ಶಿ ಅವರು, ಪತ್ರ ಬರೆದು ಲಿಂಗಾಯತ ಪಂಚಮಸಾಲಿ ಸಮುದಾಯವನ್ನು 2 ಗೆ ಸೇರ್ಪಡೆ ಮಾಡುವ ಬಗ್ಗೆ ತಮ್ಮಲ್ಲಿ ಯಾವುದೇ ರೀತಿಯ ದಾಖಲೆಗಳು ಇದ್ದರೆ, ಖುದ್ದು ಹಾಜರಾಗಿ ಇಲ್ಲವೇ ಸಂಬಂಧಿಪಟ್ಟವರ ಮೂಲಕ ಮಾಹಿತಿಯನ್ನು ನೀಡಬಹುದು ಎಂದು ಉಭಯ ಶ್ರೀಗಳಿಗೆ ಪತ್ರ ಮೂಲಕ ಮನವಿ ಮಾಡಲಾಗಿದೆ.

ಆಯೋಗವು ಸಮುದಾಯದ ಬೇಡಿಕೆಗೆ ಸ್ಪಂದಿಸಿ ಇಂತಹ ದಿಟ್ಟ ನಿರ್ಧಾರ ತೆಗೆದುಕೊಂಡಿರುವುದು ಸರಿಯಾದ ಕ್ರಮವಾಗಿದೆ. ಖಂಡಿತವಾಗಿಯೂ ನಮಗೆ ನ್ಯಾಯ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸವನ್ನು ಸಚಿವರುಗಳು ವ್ಯಕ್ತಪಡಿಸಿದ್ದಾರೆ. ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತು ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ನಂತರ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

click me!