
ತುಮಕೂರು (ಜ.3): ಬಳ್ಳಾರಿ ಗಲಾಟೆ ವಿಚಾರದಲ್ಲಿ ಕರ್ತವ್ಯಲೋಪದ ಮೇಲೆ ಅಮಾನತುಗೊಂಡ ಎಸ್ಪಿ ಪವನ್ ನೆಜ್ಜೂರ್ ಅವರು ಆತ್ಮ೧ಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿಯನ್ನು ಗೃಹ ಸಚಿವ ಪರಮೇಶ್ವರ್ ಅವರು ಅಲ್ಲಗಳೆದಿದ್ದಾರೆ. ತುಮಕೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರಿಯ ಆರೋಗ್ಯ ಸ್ಥಿತಿಯ ಬಗ್ಗೆ ಸ್ಪಷ್ಟನೆ ನೀಡಿದರು.
ಎಸ್ಪಿ ಆತ್ಮ೧ಹತ್ಯೆಗೆ ಯತ್ನಿಸಿದ್ದಾರೆ ಎಂಬ ಸುದ್ದಿಯ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, 'ನಿಮಗೆ ಯಾರು ಈ ಮಾಹಿತಿ ನೀಡಿದರು? ನಾನು ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ, ಪವನ್ ನೆಜ್ಜೂರ್ ಆರೋಗ್ಯವಾಗಿದ್ದಾರೆ. ಐ ವಾಸ್ ಟೋಲ್ಡ್ ಧಟ್ ಈ ಇಸ್ ಪರ್ಪೆಕ್ಟ್ಲಿ ಅಲ್ ರೈಟ್. ದಟ್ಸ್ ಅಲ್ ಐ ನೋ. ಅವರು ಬಳ್ಳಾರಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾರೆ ಎಂದು ನನಗೆ ಮಾಹಿತಿ ಬಂದಿದೆ. ಎಂದು ತಿಳಿಸಿದರು.
ಅಧಿಕಾರಿ ಮಾತ್ರೆ ಸೇವಿಸಿ ಆತ್ಮ೧ಹತ್ಯೆಗೆ ಯತ್ನಿಸಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, 'ಸಸ್ಪೆಂಡ್ ಆಗಿರುವುದರಿಂದ ಸಹಜವಾಗಿ ಅವರಿಗೆ ಸ್ವಲ್ಪ ಬೇಸರ ಅಥವಾ ಡಿಪ್ರೆಷನ್ ಆಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಮಾತ್ರೆ ಸೇವಿಸಿದ್ದಾರೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಆ ಬಗ್ಗೆ ನಾನು ವಿಚಾರಿಸುತ್ತೇನೆ. ಅವರು ನಾರ್ಮಲ್ ಆಗಿದ್ದಾರೆ ಮತ್ತು ಬೆಂಗಳೂರಿಗೆ ಹೋಗಬೇಕು ಎಂದು ತಮ್ಮ ಸ್ನೇಹಿತರಿಗೆ ತಿಳಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು.
ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರ ಆರೋಪಗಳ ಕುರಿತು ಮಾತನಾಡಿದ ಪರಮೇಶ್ವರ್, ಅಶೋಕ್ ಅವರು ಈಗ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಅವರು ಒಂದು ವೇಳೆ ಸರ್ಕಾರದಲ್ಲಿ ಇದ್ದಿದ್ದರೆ ಅವರಿಗೆ ಎಲ್ಲಾ ನಿಖರ ಮಾಹಿತಿ ಲಭ್ಯವಿರುತ್ತಿತ್ತು. ಈಗ ಅವರು ಅಧಿಕಾರದಲ್ಲಿ ಇಲ್ಲದಿರುವುದರಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ' ಎಂದು ಟಾಂಗ್ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ