ಬಳ್ಳಾರಿಯಲ್ಲಿ ಮಾಜಿ ಸಚಿವ ಶ್ರೀರಾಮುಲು ಅವರನ್ನು ಬಂಧಿಸಲಾಗಿದೆ.
ಬಳ್ಳಾರಿ (ಜೂ.29): ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕೆಂದು ಮಾಜಿ ಸಚಿವ ಶ್ರೀರಾಮುಲು ಅವರನ್ನು ಬಂಧಿಸಲಾಗಿದೆ. ನಿನ್ನೆಯಿಂದ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಶ್ರೀರಾಮುಲು ನೇತೃತ್ವದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಯುತ್ತಿತ್ತು. ಈ ಸಂಬಂಧ ಇಂದು ಶ್ರೀರಾಮುಲು ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಬಂಧನದ ವೇಳೆ ಭಾರಿ ಹೈಡ್ರಾಮ ನಡೆದಿದೆ. ಬಂಧನಕ್ಕೆ ಕಾರಣ ನೀಡಿ ಎಂದು ಆಕ್ರೋಶ ವ್ಯಕ್ತವಾಯ್ತು. ಈ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನವಾಗೋವರೆಗೂ ಪ್ರತಿಭಟನೆ ನಿಲ್ಲಿಸಲ್ಲ ಎಂದು ಶ್ರೀರಾಮುಲು ಮತ್ತು ಬಿಜೆಪಿ ಕಾರ್ಯಕರ್ತರು ಒಟ್ಟು ಹಿಡಿದಿದ್ದರು.
undefined
ಹನಿಟ್ರ್ಯಾಪ್ ಬಲೆಗೆ ಬಿದ್ದು ಅಕ್ರಮಕ್ಕೆ ಒಪ್ಪಿದ್ರಾ ಸಚಿವರು, ಶಾಸಕರು? ಆರೋಪಿ ಸತ್ಯನಿಗೂ ಬೋಸರಾಜುಗೂ ಸಂಬಂಧವೇನು?
ಪ್ರತಿಭಟನೆಗೆ ಒಂದು ದಿನ ಮಾತ್ರ ಅನುಮತಿ ಪಡೆದಿದ್ದರು. ಅಹೋರಾತ್ರಿ ಸೇರಿದಂತೆ ಇಂದು ಪ್ರತಿಭಟನೆ ಮುಂದುವರೆಸಿದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಬಳಿ ಶ್ರೀರಾಮುಲು ಅವರ ಬಂಧನ ಮಾಡಲಾಗಿದೆ.
ಜೂನ್ 28ರಂದು ನಡೆದ ಪ್ರತಿಭಟನೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರು. ಮೊತ್ತದ ದೊಡ್ಡ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಆಗ್ರಹಿಸಿದ್ದರು.
ಈ ಹಗರಣ ಸಂಬಂಧ ಮುಂಬರುವ ದಿನಗಳಲ್ಲಿ ಬಿಜೆಪಿಯಿಂದ ರಾಜ್ಯಾದ್ಯಂತ ಹೋರಾಟ ಮಾಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅದರಂತೆ ಜೂ.28ರಂದು ರಾಜ್ಯದ ಎಲ್ಲಾ ಜಿಲ್ಲೆಗಳು, ತಾಲೂಕುಗಳ ಮಟ್ಟದಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ದಲಿತರ 187 ಕೋಟಿ ರೂಪಾಯಿ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡಿದೆ: ಆರ್.ಅಶೋಕ್
ಹಣಕಾಸು ಸಚಿವರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ 14ಕ್ಕೂ ಅಧಿಕ ಬಾರಿ ಬಜೆಟ್ ಮಂಡಿಸಿದ್ದಾರೆ. ಹಾಲಿ ಹಣಕಾಸು ಸಚಿವರೂ ಆಗಿರುವ ಅವರ ಗಮನಕ್ಕೆ ಬಾರದೆ ಇಷ್ಟು ದೊಡ್ಡ ಮೊತ್ತ ಬೇರೆಡೆಗೆ ವರ್ಗಾವಣೆಯಾಗಿದ್ದು ಹೇಗೆ ಎಂದು ಪ್ರಶ್ನಿಸಿದ ರಾಮುಲು, ಸಿದ್ದರಾಮಯ್ಯ ಅವರ ಮೇಲೆ ಅನುಮಾನ ಬರುತ್ತಿದೆ ಎಂದರು.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಚಂದ್ರಶೇಖರ್ ಎಂಬ ಅಮಾಯಕ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿವರ ಮೌಖಿಕ ಆದೇಶದನ್ವಯ 187 ಕೋಟಿ ರು. ಹಣ ದುರ್ಬಳಕೆ ಮಾಡಿಕೊಂಡಿದ್ದನ್ನು ಡೆತ್ ನೋಟ್‌ನಲ್ಲಿ ಅವರು ಬರೆದಿಟ್ಟಿದ್ದರು ಎಂದು ಹೇಳಿದರು.