ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ಶಾಲೆಗಳಲ್ಲಿ ಇನ್ನು ಮುಂದೆ ಶೈಕ್ಷಣಿಕೇತರ ಚಟುವಟಿಕೆ ನಡೆಸುವಂತಿಲ್ಲ. ಅಂದರೆ ಈ ಹಿಂದೆ ಸಾರ್ವಜನಿಕವಾಗಿ ನಡೆಯುತ್ತಿದ್ದ ಕೃಷ್ಣಾಷ್ಟಮಿ, ಗಣೇಶೋತ್ಸವ ಮುಂತಾದ ಹಬ್ಬಗಳ ಆಚರಣೆಗೆ ಬರೆ ಹಾಕಲಾಗಿದೆ.
ಮಂಗಳೂರು (ಜು.19): ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ಶಾಲೆಗಳಲ್ಲಿ ಇನ್ನು ಮುಂದೆ ಶೈಕ್ಷಣಿಕೇತರ ಚಟುವಟಿಕೆ ನಡೆಸುವಂತಿಲ್ಲ. ಅಂದರೆ ಈ ಹಿಂದೆ ಸಾರ್ವಜನಿಕವಾಗಿ ನಡೆಯುತ್ತಿದ್ದ ಕೃಷ್ಣಾಷ್ಟಮಿ, ಗಣೇಶೋತ್ಸವ ಮುಂತಾದ ಹಬ್ಬಗಳ ಆಚರಣೆಗೆ ಬರೆ ಹಾಕಲಾಗಿದೆ. ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರು(ಡಿಡಿಪಿಐ) ಈ ಕುರಿತು ಹೊರಡಿಸಿದ ಜ್ಞಾಪನಾ ಪತ್ರ ಈಗ ವಿವಾದಕ್ಕೆ ಕಾರಣವಾಗಿದೆ. ಈ ರೀತಿ ಸುತ್ತೋಲೆ ಹೊರಡಿಸಿರುವುದು ಸರ್ಕಾರದ ಹಿಂದೂ ವಿರೋಧಿ ನೀತಿಗೆ ಸಾಕ್ಷಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಕ್ಷೇಪಿಸಿದ್ದಾರೆ. ಜು.16ರಂದು ಡಿಡಿಪಿಐ ಈ ಜ್ಞಾಪನಾ ಪತ್ರ ಹೊರಡಿಸಿದ್ದು, ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕಳುಹಿಸಲಾಗಿದೆ. ಹಬ್ಬಗಳ ಆಚರಣೆ ಕುರಿತು ನಾಗರಿಕ ಸಮಿತಿ ಮುಖಂಡರು ಶಾಲೆಗಳಿಗೆ ಭೇಟಿ ನೀಡಿ ಅನುಮತಿ ಕೇಳಿದಾಗ ಶಿಕ್ಷಣ ಇಲಾಖೆ ಜ್ಞಾಪನಾ ಪತ್ರ ಹೊರಡಿಸಿರುವುದು ಬೆಳಕಿಗೆ ಬಂದಿದೆ.
ಜ್ಞಾಪನಾ ಪತ್ರದಲ್ಲಿ ಏನಿದೆ?: ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ ಮೈದಾನ ಅಥವಾ ಆವರಣವನ್ನು ಯಾವುದೇ ಸಂದರ್ಭದಲ್ಲಿ ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನೂ ನೀಡಬಾರದು. ಅಲ್ಲದೆ ಅನುಮತಿಗಾಗಿ ಡಿಡಿಪಿಐ ಕಚೇರಿಗೂ ಪ್ರಸ್ತಾವನೆ ಸಲ್ಲಿಸಬಾರದು ಎಂದು ಖಡಕ್ ಸೂಚನೆ ನೀಡಲಾಗಿದೆ. ಈ ಆದೇಶ ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆ ಎಂದು ಜ್ಞಾಪನಾ ಪತ್ರದಲ್ಲಿ ತಿಳಿಸಲಾಗಿದೆ.
ಧಾರವಾಡ ಡಿ.ಸಿ.ಕ್ಯಾಂಟಿನ್ ಮಾಯವಾಗಿದೆ: ಹುಡುಕಿಕೊಡಿ ಎಂದು ಜನಸಾಮಾನ್ಯರ ಕೂಗು!
ಪ್ರಾಧಿಕಾರ ಮೂಲಕ ಕನ್ನಡ ಕೆಲಸ: ನಮ್ಮ ಭಾಷೆ, ಸಂಸ್ಕೃತಿ, ಕಲೆಯನ್ನು ಬೆಳೆಸುವಂತಹ ಮಹತ್ತರ ಕೆಲಸವು ಗಡಿನಾಡಿನಲ್ಲಿ ನಡೆಯುತ್ತಿದೆ. ಕರಾವಳಿ ಭಾಗದವರು ಕಲೆಗೆ ನೀಡುವಂತಹ ಪ್ರೋತ್ಸಾಹ ಮೆಚ್ಚುವಂತದ್ದಾಗಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ, ಮಾಜಿ ಶಾಸಕ ಸೋಮಣ್ಣ ಬೇವಿನಮರದ ಹೇಳಿದರು. ಅವರು ಕಾಸರಗೋಡು ಜಿಲ್ಲೆಯ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಗಡಿ ಪ್ರಾಧಿಕಾರದ ಸಹಯೋಗದಲ್ಲಿ ನಡೆದ ‘ಸಾಂಸ್ಕೃತಿಕ ಉತ್ಸವ ಹಾಗೂ ಸಿರಿಬಾಗಿಲು ಯಕ್ಷ ವೈಭವ ಪ್ರಶಸ್ತಿ ಪ್ರದಾನ’ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಭಕ್ತಾದಿಗಳೇ ಗಮನಿಸಿ.. ಶೃಂಗೇರಿಯ ಶಾರದಾ ಪೀಠದಲ್ಲಿ ಇನ್ಮುಂದೆ ವಸ್ತ್ರ ಸಂಹಿತೆ ಕಡ್ಡಾಯ: ಆಗಸ್ಟ್ 15ರಿಂದ ಜಾರಿ
ಕರ್ನಾಟಕ ಸಂಭ್ರಮ-50 ಇದರ ಸವಿ ನೆನಪಿನಂಗವಾಗಿ ಮಂಗಳೂರಿನಲ್ಲಿ ದೊಡ್ಡ ಕನ್ನಡ ಕಾರ್ಯಕ್ರಮವನ್ನು ಇಟ್ಟುಕೊಳ್ಳುವ ಸಲುವಾಗಿ ಈಗಾಗಲೇ ಕರ್ನಾಟಕದ 14 ಅಕಾಡೆಮಿಗಳ ನೇತೃತ್ವದಲ್ಲಿ ಸಚಿವರು ಸಭೆ ಕರೆದು ನಿರ್ಣಯ ಮಾಡಲಾಗಿದೆ. ಅಲ್ಲಿ ಕನ್ನಡ ಭಾಷೆ, ಕಲೆಗಳನ್ನು ಪ್ರೋತ್ಸಾಹಿಸುವರಿಗೆ ಗೌರವವನ್ನು ಸಲ್ಲಿಸಬೇಕು. ಸರ್ಕಾರದ ಸಹಾಯದಿಂದ ಮಾತ್ರ ಕಲೆಗಳನ್ನು ಉಳಿಸಲು ಸಾಧ್ಯ. ಅದಕ್ಕಾಗಿ ಗಡಿ ಪ್ರದೇಶ ಅಭಿವೃದ್ಧಿ ಸಾಕಷ್ಟು ಅನುದಾನವನ್ನು ನೀಡುತ್ತಿದೆ. ಇದಲ್ಲದೇ ಗಡಿನಾಡಿನ ಕನ್ನಡ ಶಾಲೆಗಳಿಗೆ ಅನುದಾನ, ಕನ್ನಡ ಶಾಲೆಗಳಲ್ಲಿ ಕನ್ನಡ ಬಲ್ಲ ಶಿಕ್ಷಕ ನೇಮಕ ವಿಚಾರ ಸೇರಿದಂತೆ ಎಲ್ಲ ವಿಷಯಗಳಲ್ಲೂ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಗಡಿನಾಡಿನೊಂದಿಗಿದೆ ಎಂದು ಅವರು ಹೇಳಿದರು.