ಎಥೆನಾಲ್ ಉತ್ಪಾದನೆಗೆ ಕಬ್ಬು ಬಳಕೆಯನ್ನು ನಿಷೇಧ: ಕೇಂದ್ರ, ರಾಜ್ಯಕ್ಕೆ ಹೈ ನೋಟಿಸ್‌

Published : Oct 31, 2026, 08:14 AM IST
Sugarcane

ಸಾರಾಂಶ

ಎಥೆನಾಲ್ ಉತ್ಪಾದನೆಗೆ ಕಬ್ಬು ಬಳಕೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಎಥೆನಾಲ್ ಕಂಪನಿಗಳು ಹೈಕೋರ್ಟ್ ಮೆಟ್ಟಿಲೇರಿವೆ. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಲಾಗಿದೆ.

ಬೆಂಗಳೂರು: ಎಥೆನಾಲ್ ಉತ್ಪಾದನೆಗೆ ಕಬ್ಬು ಬಳಕೆಯನ್ನು ನಿಷೇಧಿಸಿರುವ ಕ್ರಮ ಪ್ರಶ್ನಿಸಿರುವ ಅರ್ಜಿ ಸಂಬಂಧ ಕೇಂದ್ರ ಮತ್ತು ರಾ‍ಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಬೆಳಗಾವಿ ಮೂಲದ ಎಥೆನಾಲ್ ಉತ್ಪಾದನಾ ಕಂಪೆನಿ ಮೆಸರ್ಸ್ ಆಸ್ಕಿನ್ಸ್ ಬಯೋಫ್ಯೂಯಲ್ಸ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ಜೆ. ಅಸ್ಕಿ ಹಾಗೂ ಶ್ರೀ ಬ್ರಹ್ಮಾನಂದಸಾಗರ್ ಜಾಗರಿ ಇಂಡಸ್ಟ್ರೀಸ್ ಪಾಲುದಾರ ಮಹಾವೀರ್ ಜೆ. ಅಸ್ಕಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ಪೀಠ, ಪ್ರತಿವಾದಿಗಳಾದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು. ಅಲ್ಲದೆ, ಎಥನಾಲ್‌ ಬಳಕೆಗೆ ನಿಷೇಧ ಹೇರಿ ಹೊರಡಿಸಿರುವ ಪ್ರಕಟಣೆಗೆ ತಡೆ ನೀಡಬೇಕು ಎಂಬ ಅರ್ಜಿದಾರರ ಮಧ್ಯಂತರ ಮನವಿಯನ್ನು ಮುಂದಿನ ವಿಚಾರಣೆ ವೇಳೆ ಪರಿಗಣಿಸಲಾಗುವುದು ಎಂದು ತಿಳಿಸಿದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ನ.5ಕ್ಕೆ ಮುಂದೂಡಿತು.

ಆದೇಶ ಪ್ರಶ್ನಿಸಿದ್ದ ಎಥೆನಾಲ್‌ ಕಂಪನಿ

ದೇಶದಲ್ಲಿ ಸಕ್ಕರೆ ಲಭ್ಯತೆ ಹೆಚ್ಚಿಸಲು 2026-27ರ ಎಥೆನಾಲ್ ಪೂರೈಕೆ ವರ್ಷ (2026ರ ನ.1ರಿಂದ 2027ರ ಅ.31ರವರೆಗೆ) ಕಬ್ಬಿನ ರಸ ಮತ್ತು ಬಿ-ಹೆವಿ ಮೊಲಾಸಸ್ ಬಳಸಿ ಎಥೆನಾಲ್‌ ಉತ್ಪಾದಿಸುವುದನ್ನು ನಿಷೇಧಿಸಿ ಕೇಂದ್ರ ಸರ್ಕಾರ 2026ರ ಅ.22ರಂದು ಪ್ರಕಟಣೆ ಹೊರಡಿಸಿತ್ತು.

ಅದನ್ನು ಪ್ರಶ್ನಿಸಿರುವ ಅರ್ಜಿದಾರರು, ಕೇಂದ್ರ ಸರ್ಕಾರ ಎಥೆನಾಲ್ ಉತ್ಪಾದನೆಗೆ ಕಬ್ಬಿನ ರಸ ಬಳಕೆಯನ್ನು ನಿಷೇಧಿಸಿರುವುದರಿಂದ ಸಂಕಷ್ಟ ಎದುರಾಗಿದೆ. ತಮ್ಮ ಕಂಪನಿಗಳಲ್ಲಿ ಎಥೆನಾಲ್ ಉತ್ಪಾದನೆ ನಿಂತು ಹೋಗಿದೆ. ಇದು ಆರ್ಥಿಕ ದುಷ್ಪರಿಣಾಮಗಳನ್ನು ಉಂಟು ಮಾಡಲಿದೆ. ಆದ್ದರಿಂದ ಅ.22ರ ಕೇಂದ್ರ ಸರ್ಕಾರದ ಪ್ರಕಟಣೆಗೆ ತಡೆ ನೀಡಬೇಕು ಎಂದು ಕೋರಿದರು.

ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ. ಅರವಿಂದ್ ಕಾಮತ್, ಕೇಂದ್ರ ಸರ್ಕಾರದ ಪ್ರಕಟಣೆಗೆ ತಡೆ ನೀಡುವುದಕ್ಕೆ ಬಲವಾದ ವಿರೋಧ ವ್ಯಕ್ತಪಡಿಸಿದರು. ಜತೆಗೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕರ್ನಾಟಕದ 7 ಶಾಸಕರ ವಿರುದ್ಧ ದಾಖಲಾಗಿದೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ: ಎಡಿಆರ್ ವರದಿಯಲ್ಲಿ ಬಹಿರಂಗ
ಜಾಮೀನು ಸಿಕ್ಕ ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಚಿನ್ನ ಕಳ್ಳಸಾಗಣೆ ಆರೋಪಿ ನಟಿ ರನ್ಯಾ ರಾವ್, ವಿಐಪಿ ಮೂಲಕ ಹಾಸನಾಂಬೆ ದರ್ಶನ!