
ಬೆಂಗಳೂರಿನಲ್ಲಿ ನಡೆದ 2025 ರ ಏರೋ ಶೋನ ಮೊದಲ ದಿನದಂದು ಆಹಾರದಲ್ಲಿ ಜಿರಳೆಗಳು ಪತ್ತೆಯಾಗಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಆಹಾರದಲ್ಲಿ ಜಿರಳೆಗಳು ಪತ್ತೆಯಾಗಿರುವ ಘಟನೆಯ ಚಿತ್ರಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕಲುಷಿತ, ಕಳಪೆ ಆಹಾರ ಪೂರೈಕೆ ಮಾಡಿದ್ದಕ್ಕೆ ಅಧಿಕಾರಿಗಳ ವಿರುದ್ಧ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಳೆ(ಫೆ.10) ರಿಂದ ಏರೋ ಇಂಡಿಯಾ ಏರ್ ಶೋ ನಡೆಯಲಿರುವ ಹಿನ್ನೆಲೆ ಕರ್ನಾಟಕ ಪ್ರವಾಸದಲ್ಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಾಳೆ ಳಗ್ಗೆ 9 ಗಂಟೆಗೆ ಏರ್ ಶೋ ಉದ್ಘಾಟಿಸಲಿದ್ದಾರೆ. ಈಗಾಗಲೇ ಬೆಂಗಳೂರಿಗೆ ಆಗಮಿಸಿರುವ ರಕ್ಷಣಾ ಸಚಿವರು. ಇತ್ತ ನಾಳೆ ನಡೆಯಲಿರುವ ಕಾರ್ಯಕ್ರಮಕ್ಕೆ ಎಲ್ಲ ಸಿದ್ಧ ತೆ ಮಾಡಿಕೊಳ್ಳಲಾಗಿದೆ. ಬಿಗಿ ಭದ್ರತೆಗೆ ಪೊಲೀಸ ಭದ್ರತಾ ಪಡೆಗಳನ್ನ ನಿಯೋಜಿಸಲಾಗಿದೆ.
ಇದನ್ನೂ ಓದಿ: ಈ ಬಾರಿಯ ಏರ್ ಶೋದಲ್ಲಿ ತೇಜಸ್ ಟಾಪರ್? #Aeroindia2025 #DKSunil #BengaluruBuzz
ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಊಟದ ವೇಳೆ ಆಹಾರದಲ್ಲಿ ಜಿರಳೆ ಇರುವುದು ಪತ್ತೆಯಾದ ಬಳಿಕ ಕಾರ್ಯಕ್ರಮದ ವ್ಯವಸ್ಥೆ ಬಗ್ಗೆ ಪೊಲೀಸರು ತೀವ್ರವಾಗಿ ಟೀಕಿಸಿದ್ದಾರೆ. ಉನ್ನತ ಮಟ್ಟದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಇಂಥ ಕಳಪೆ ಆಹಾರ ಪೂರೈಕೆಯಾಗುತ್ತಿರುವುದು, ಆಹಾರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ