ಮೈಸೂರು - ಬೆಂಗಳೂರು ದಶಪಥ ಹೆದ್ದಾರಿಗೆ ದೇವೆಗೌಡರ ಹೆಸರಿಡಿ.
ವಿಧಾನಪರಿಷತ್ ಸದಸ್ಯ ಟಿ ಎ ಶರವಣ ಒತ್ತಾಯ.
ಬಿಜೆಪಿ ಸರ್ಕಾರ ದೇವೆಗೌಡರ ಹೆಸರನ್ನು ಶಿಫಾರಸು ಮಾಡಬೇಕು.
ಬೆಂಗಳೂರು (ಜ.05): ಬೆಂಗಳೂರು- ಮೈಸೂರು (Bengaluru-Mysuru)ದಶಪಥ ಹೆದ್ದಾರಿ ವೀಕ್ಷಣೆಗೆ ಮತ್ತು ವೈಮಾನಿಕ ಸಮೀಕ್ಷೆಗೆ ರಾಜ್ಯಕ್ಕೆ ಧಾವಿಸಿರುವ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಮಂತ್ರಿಗಳಾದ ನಿತಿನ್ ಗಡ್ಕರಿ ಅವರೇ ಈ ಭಾಗದ ಜನರ ಭಾವನೆಗಳನ್ನು ನೀವು ಅರ್ಥ ಮಾಡಿಕೊಂಡಿದ್ದಾದರೆ ಈ ಹೆದ್ದಾರಿಗೆ ಮಾಜಿ ಪ್ರಧಾನಮಂತ್ರಿ, ಕರ್ನಾಟಕದ ಸಾಕ್ಷಿ ಪ್ರಜ್ಞೆಯಾಗಿರುವ ಮಾಜಿ ಪ್ರಧಾನಿ ದೇವೇಗೌಡರ (Ex Prime minister Devegowda) ಹೆಸರಿಡಿ ಎಂದು ವಿಧಾನ ಪರಿಷತ್ ಸದಸ್ಯ ಟಿ. ಎ.ಶರವಣ ಮನವಿ ಮಾಡಿದ್ದಾರೆ.
ಈ ರಸ್ತೆ ಹಾದು ಹೋಗುವ ಉದ್ದಗಲಕ್ಕೂ ಇರುವ ಮಣ್ಣಿನ ಕಣಕಣದಲ್ಲೂ, ರೈತರ ಬೆವರ ಹನಿ ಶ್ರಮದಲ್ಲಿ ದೇವೇಗೌಡರ ಹೆಸರು ಅಭಿಮಾನದಿಂದ ರಾರಾಜಿಸುತ್ತಿದೆ. ದೇವೇಗೌಡರು ಈ ನೆಲದ ಸಾರ್ವಭೌಮ ರಾಜಕಾರಣಿ ಮತ್ತು ಅಜಾತ ಶತ್ರು ಆಗಿದ್ದಾರೆ . ಇದನ್ನು ಮನಗಂಡು ದಿಗ್ಗಜ ನಾಯಕರ ಹೆಸರಿಗೆ ಗೌರವಿಸುವ ದೃಷ್ಟಿಯಿಂದ ಈ ದಶಪಥ ರಸ್ತೆಗೆ ಅವರ ಹೆಸರಿಡುವುದು ಸೂಕ್ತ ಎಂದು ಶರವಣ (sharavana) ವಿನಂತಿಸಿದ್ದಾರೆ. ಇದರಿಂದ ಮಾಜಿ ಪ್ರಧಾನಿಯಾಗಿರುವ ದೇವೆಗೌಡರಿಗೆ ಗೌರವ (honour) ನೀಡದಂತಾಗಲಿದೆ ಎಂದಿದ್ದಾರೆ.
ಬೆಂಗಳೂರು-ಮೈಸೂರು ಹೈವೇಗೆ ನಾಲ್ವಡಿ, ಕಾವೇರಿ ಹೆಸರಿಗೆ ಪೈಪೋಟಿ
ನಾಡು, ನುಡಿ, ಜಲಕ್ಕೆ ದೇವೇಗೌಡರ ಕೊಡುಗೆ: ಕನ್ನಡ ನಾಡಿನ ನೆಲ ಜಲಕ್ಕೆ, ಇಲ್ಲಿಯ ಹಕ್ಕುಗಳಿಗೆ, ನಾಡಿನ ಅಸ್ಮಿತೆಗೆ ದೇವೇಗೌಡರ ಕೊಡುಗೆ (Contribution) ಅಭೂತಪೂರ್ವ. ನಾಡಿನ ಜೀವ ನದಿಗಳಾದ ಕಾವೇರಿ (Kaveri) ಹೋರಾಟದಿಂದ ಹಿಡಿದು, ಕೃಷ್ಣೆಯ (Krishne) ವರೆಗೂ ಅವರ ಜನಪರ ಆಂದೋಲನ ಕರ್ನಾಟಕದಲ್ಲಿ ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಪ್ರಧಾನಿಯಂತಹ ಉನ್ನತ ಹುದ್ದೆಯನ್ನು ಅಲಂಕರಿಸಿದ ಪ್ರಪ್ರಥಮ ಕನ್ನಡಿಗ (First Kannadiga) ಎನ್ನುವ ಹಿರಿಮೆ ದೇವೇಗೌಡರದ್ದು. ಕರ್ನಾಟಕದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಕೊಂಡೊಯ್ದ ಹೆಮ್ಮೆ. ದಶ ಪಥ ರಸ್ತೆಗೆ ಅವರ ಹೆಸರಿಟ್ಟರೆ ಕೇಂದ್ರಕ್ಕೂ (Central Govt) ಹೆಸರು ಬರುತ್ತದೆ ಎಂದು ಹೇಳಿದ್ದಾರೆ.
ರಾಜಕಾರಣ ಬದಿಗಿಟ್ಟು ಹೆಸರಿಡಿ: ರಾಜ್ಯದ ಬಿಜೆಪಿ ಸರಕಾರ ಪಕ್ಷ ರಾಜಕಾರಣವನ್ನು (Political) ಬದಿಗಿಟ್ಟು, ಬೆಂಗಳೂರು ಮೈಸೂರು ದಶಪಥ ರಸ್ತೆಗೆ (corridor) ದೇವೇಗೌಡರ ಹೆಸರು ಇಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರಿಗೆ ಶರವಣ ಮನವಿ ಪತ್ರ ಸಲ್ಲಿಕೆ ಮಾಡಿದ್ದಾರೆ.
Ramanagara: ಚನ್ನಪಟ್ಟಣದಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ: ಸ್ಥಳದಲ್ಲೇ 3 ಜನರ ಸಾವು
ಹಲವು ಹೆಸರುಗಳು ಮುನ್ನೆಲೆಗೆ: ರಾಜ್ಯದ ಆಡಳಿತ ರಾಜಧಾನಿ ಬೆಂಗಳೂರು ಹಾಗೂ ಸಾಂಸ್ಕೃತಿಕ ರಾಜಧಾನಿ ಆಗಿರುವ ಮೈಸೂರು ನಗರಕ್ಕೆ ಸಂಪರ್ಕ ಕಲ್ಪಿಸುವ ದಶಪಥ ಹೆದ್ದಾರಿಯನ್ನು ಸುಮಾರು ೯ ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ದಶಪಥ ಹೆದ್ದಾರಿಯು ಫೆಬ್ರವರಿ ವೇಳೆ ಸಾರ್ವಜನಿಕರ ಸಂಚಾರಕ್ಕೆ ಸಂಪೂರ್ಣವಾಗಿ ಮುಕ್ತವಾಗಲಿದೆ. ಆದರೆ, ಈ ಹೆದ್ದಾರಿಗೆ ಮೈಸೂರಿನ ಒಡೆಯ, ರಾಜ್ಯದ ಅಭಿವೃದ್ಧಿ ಹರಿಕಾರ ನಾಲ್ವಡಿ ಕೃಷ್ಣರಾಜ ಒಡೆಯರ (Nalvadi Krishnaraja wodeyar) ಹೆಸರಿಡಬೇಕು ಎಂದು ಒತ್ತಾಯಿಸಲಾಗಿದೆ. ಜೊತೆಗೆ, ಇಲ್ಲಿನ ಜನರ ಜೀವನಾಡಿ ಕಾವೇರಿ ನದಿ ಆಗಿದ್ದು, ಕಾವೇರಿ ಎಕ್ಸ್‌ಪ್ರೆಸ್ ಹೈವೇ (Kaveri express highway) ಎಂದು ಹೆಸರಿಡುವಂತೆ ಮನವಿ ಸಲ್ಲಿಕೆ ಆಗಿವೆ. ಈಗ ಪುನಃ ನಾಡಿನ ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರ ಹೆಸರಿಡುವಂತೆ ಮನವಿ ಸಲ್ಲಿಕೆಯಾಗಿದೆ.