
ಬೆಂಗಳೂರು (ಆ.22) : ನಗರದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಅನಧಿಕೃತವಾಗಿ ಬ್ಯಾನರ್ ಅಳವಡಿಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ ಬಿಬಿಎಂಪಿಯು .50 ಸಾವಿರ ದಂಡ ವಿಧಿಸಿದೆ.
ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ನಗರದಲ್ಲಿ ಅನಧಿಕೃತ ಬ್ಯಾನರ್, ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ಬಿಬಿಎಂಪಿ ಆರಂಭಿಸಿದೆ. ವಸಂತನಗರ ವಾರ್ಡ್ ವ್ಯಾಪ್ತಿಯ ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC office)ಯ ಹಿಂದುಳಿದ ವರ್ಗಗಳ ವಿಭಾಗ, ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ಹಾಗೂ ರಾಜ್ಯದ ಎಲ್ಲಾ ಪದಾಧಿಕಾರಿಗಳು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಬ್ಯಾನರ್ ಅಳವಡಿಸಿದ್ದರು.
ಬ್ಯಾನರ್ ಅಳವಡಿಗೆಗೆ ಬಿಬಿಎಂಪಿಯಿಂದ ಪರವಾನಗಿ ಪಡೆದಿರಲಿಲ್ಲ. ಹೀಗಾಗಿ, ಬಿಬಿಎಂಪಿಯ ವಸಂತ ನಗರ ವಾರ್ಡ್‌ನ ಸಹಾಯಕ ಕಂದಾಯ ಅಧಿಕಾರಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಿಗೆ .50 ಸಾವಿರ ದಂಡ ವಿಧಿಸಿ, ಮುಖ್ಯ ಆಯುಕ್ತರ ಖಾತೆಗೆ ದಂಡ ಮೊತ್ತವನ್ನು ಪಾವತಿಸುವಂತೆ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ