ಬನ್ನೇರುಘಟ್ಟದಲ್ಲಿ ವಿಶ್ವದಲ್ಲೇ ಮೊಟ್ಟಮೊದಲ ಬಾರಿಗೆ ಕರಡಿಗೆ ಕೃತಕ ಕಾಲು ಜೋಡಣೆ ಯಶಸ್ವಿ

Published : Sep 17, 2025, 11:17 AM IST
bear

ಸಾರಾಂಶ

ವಿಶ್ವದಲ್ಲಿಯೇ ಮೊಟ್ಟಮೊದಲ ಬಾರಿಗೆ ಕರಡಿಗೆ ಕೃತಕ ಕಾಲು ಜೋಡಿಸಿರುವ ಅಪರೂಪದ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನಡೆದಿದೆ. ಈ ಮೂಲಕ ಪಶು ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಕರಡಿ ಕಾಲು ಜೋಡಣೆಯ ಮೈಲಿಗಲ್ಲಾಗಿದೆ.

ಬನ್ನೇರುಘಟ್ಟ (ಸೆ.17): ವಿಶ್ವದಲ್ಲಿಯೇ ಮೊಟ್ಟಮೊದಲ ಬಾರಿಗೆ ಕರಡಿಗೆ ಕೃತಕ ಕಾಲು ಜೋಡಿಸಿರುವ ಅಪರೂಪದ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನಡೆದಿದೆ. ಈ ಮೂಲಕ ಪಶು ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಕರಡಿ ಕಾಲು ಜೋಡಣೆಯ ಮೈಲಿಗಲ್ಲಾಗಿದೆ. ಕಾಲಿಲ್ಲದ ಕರಡಿಗೆ ಕೃತಕ ಕಾಲು ಜೋಡಣೆ ಮಾಡಿ ಯಶಸ್ವಿಯಾಗಿದ್ದಾರೆ. ಹೌದು! ಕಾಲು ಕಳೆದುಕೊಂಡಿದ್ದ ವಸಿಕರನ್ ಎಂಬ ಕರಡಿಗೆ ಮೂರು ದಿನಗಳ ಕಾಲ ಕಾಲು ಜೋಡಣೆಯ ಕಾರ್ಯ ನಡೆದಿತ್ತು.

ಬನ್ನೇರುಘಟ್ಟ ಜೈವಿಕ ಉದ್ಯಾನವನ ಮತ್ತು ವೈಲ್ಡ್ ಲೈಫ್ sos ಸಂಸ್ಥೆ, ಕರ್ನಾಟಕ ಅರಣ್ಯ ಇಲಾಖೆ ಸಹಯೋಗದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ ಮಾಡಿದ್ದಾರೆ. 2019 ರಲ್ಲಿ ಬಳ್ಳಾರಿ ಅರಣ್ಯ ಪ್ರದೇಶದಿಂದ ಕರಡಿಯನ್ನು ರಕ್ಷಣೆ ಮಾಡಲಾಗಿತ್ತು. ಬೇಟೆಗಾರರ ಬಲೆಗೆ ಸಿಲುಕಿ ಜೀವನ್ಮರಣ ಹೋರಾಟ ನಡೆಸಿದ್ದ ಕರಡಿಯ (ವಸಿಕರನ್), ಹಿಂಬದಿ ಎಡಗಾಲು ಮುರಿದು ನರಳಾಡಿತ್ತು. ನಂತರ ಅದನ್ನು ಬನ್ನೇರುಘಟ್ಟ ಕರಡಿ ಆರೈಕೆ ಕೇಂದ್ರಕ್ಕೆ ಕರೆತರಲಾಗಿತ್ತು.

ಮೊದಲಿನ ಹಾಗೆ ಕರಡಿ ಓಡಾಟ

ಗಾಯಗೊಂಡಿದ್ದ ಕರಡಿಗೆ ಚಿಕಿತ್ಸೆ ನೀಡಿದ ಬಳಿಕ ಆರೋಗ್ಯ ಸುಧಾರಣೆಯಾಗಿತ್ತು. ಅಲ್ಲದೇ ಮೂರು ಕಾಲಿನಿಂದ ನಡೆಯಲು ಕರಡಿ ಅಭ್ಯಾಸ ಮಾಡಿಕೊಂಡಿತ್ತು. ಪ್ರಾಣಿಗಳ ಜಾಗತಿಕ ಮೂಳೆ ತಜ್ಞರಾದ ಅಮೆರಿಕದ ಡೆರಿಕ್ ಕಂಪನಾ ಬನ್ನೇರುಘಟ್ಟಕ್ಕೆ ಭೇಟಿ ನೀಡಿ, ಕರಡಿ ವಸಿಕರನ್ ಓಡಾಡುವುದನ್ನ ಗಮನಿಸಿದ್ದರು. ಮಣ್ಣು ತೋಡಲು, ಮರ ಹತ್ತಲು, ಮೇವು ಸಂಗ್ರಹಕ್ಕೆ ಕೃತಕ ಕಾಲನ್ನ ತಜ್ಞರು ಸಿದ್ದಪಡಿಸಿದ್ದರು. ಸದ್ಯ ಕೃತಕ ಕಾಲಿನಿಂದ ಮೊದಲಿನ ಹಾಗೆ ಕರಡಿ ಓಡಾಟ ನಡೆಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನಾಯಕತ್ವ ಬದಲಾವಣೆ ಹೇಳಿಕೆ ಒಂದು ತಿಂಗಳ ಮೌನವ್ರತ : ಪಿ.ರವಿಕುಮಾರ್
ಡಿಕೆ ಊಟ ವರ್ಸಸ್‌ ಸಿದ್ದು ನಾಷ್ಟ! ಕಾಂಗ್ರೆಸ್‌ ಬಣಗಳ ಔತಣ ಸಮರ