ಹಾಸನದ ಬಾನು ಮುಷ್ತಾಕ್‌ರ 'ಹಾರ್ಟ್ ಲ್ಯಾಂಪ್' ಕಥಾಸಂಕಲನಕ್ಕೆ ಬೂಕರ್ ಪ್ರಶಸ್ತಿ

Published : May 21, 2025, 09:16 AM ISTUpdated : May 21, 2025, 09:20 AM IST
ಹಾಸನದ ಬಾನು ಮುಷ್ತಾಕ್‌ರ 'ಹಾರ್ಟ್ ಲ್ಯಾಂಪ್' ಕಥಾಸಂಕಲನಕ್ಕೆ ಬೂಕರ್ ಪ್ರಶಸ್ತಿ

ಸಾರಾಂಶ

ಖ್ಯಾತ ಸಾಹಿತಿ ಬಾನು ಮುಷ್ತಾಕ್‌ ಅವರ 'ಹಾರ್ಟ್ ಲ್ಯಾಂಪ್' ಕಥಾ ಸಂಕಲನಕ್ಕೆ ಪ್ರತಿಷ್ಠಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿದೆ. ದೀಪಾ ಬಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ ಈ ಕೃತಿಗೆ 50 ಸಾವಿರ ಡಾಲರ್ ಬಹುಮಾನ ಲಭಿಸಿದೆ.

ಬೆಂಗಳೂರು: ಕನ್ನಡ ಸಾಹಿತ್ಯಕ್ಕೆ ವಿಶ್ವ ಮಟ್ಟದ ಪ್ರಶಸ್ತಿ ಗೌರವ ಲಭ್ಯವಾಗಿದೆ. ಪ್ರತಿಷ್ಠಿತ ಬೂಕರ್ ಪ್ರಶಸ್ತಿಯನ್ನು ಕನ್ನಡದ ಕೃತಿ ತನ್ನದಾಗಿಸಿಕೊಂಡಿದೆ. ಹಾಸನದ ಖ್ಯಾತ ಸಾಹಿತಿ ಬಾನು ಮುಷ್ತಾಕ್‌ರ  ಕಥಾ ಸಂಕಲನ ' ಹಾರ್ಟ್ ಲ್ಯಾಂಪ್' ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಸಿಕ್ಕಿದೆ. ಸಾಹಿತಿ ಬಾನು ಮುಷ್ತಾಕ್‌ ಅವರ ಹಾರ್ಟ್ ಲ್ಯಾಂಪ್ ಕಥಾ ಸಂಕಲನ ಇಂಗ್ಲಿಷ್‌ಗೆ ಅನುವಾದಗೊಂಡಿತ್ತು. ಹಸೀನಾ ಮತ್ತು ಇತರೆ ಕಥೆಗಳು ಕಥಾ ಸಂಕಲದಿಂದ ಆಯ್ದ ಕಥೆಗಳನ್ನು ಹಾರ್ಟ್ ಲ್ಯಾಂಪ್ ಒಳಗೊಂಡಿದೆ. ಈ ಕೃತಿಯನ್ನು ಕನ್ನಡದಿಂದ ಇಂಗ್ಲಿಷ್‌ಗೆ ಲೇಖಕಿ ದೀಪಾ ಬಸ್ತಿ ಅನುವಾದ ಮಾಡಿದ್ದರು. 

ಇದೇ ಮೊದಲ ಬಾರಿಗೆ ಬೂಕರ್ ಕನ್ನಡ ಸಾಹಿತ್ಯ ಸ್ಪರ್ಧೆಗೆ ಅವಕಾಶ ಕಲ್ಪಿಸಿತ್ತು. ಮೊದಲ ಅವಕಾಶದಲ್ಲಿ ಕನ್ನಡ ಸಾಹಿತ್ಯ ಪ್ರಶಸ್ತಿ ಗೆದ್ದುಕೊಂಡಿದೆ. ಮಂಗಳವಾರ ರಾತ್ರಿ ಲಂಡನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾರ್ಟ್‌ಲ್ಯಾಂಪ್ ಕೃತಿ ಆಯ್ಕೆ ಮಾಡಲಾಗಿತ್ತು. ಬೂಕರ್ ಪ್ರಶಸ್ತಿ 50 ಸಾವಿರ ಡಾಲರ್ ಬಹುಮಾನ ಮೊತ್ತವನ್ನು ಒಳಗೊಂಡಿದೆ. 

ಆಯ್ಕೆ ಪ್ರಕ್ರಿಯೆ ಹೇಗೆ?: 

ಲಾಂಗ್‌ಲಿಸ್ಟ್‌ನಲ್ಲಿರುವ 13 ಕೃತಿಗಳ ಪೈಕಿ 6 ಕೃತಿಗಳನ್ನು ಎರಡನೇ ಸುತ್ತಿಗೆ ಆಯ್ಕೆ ಮಾಡಿ ಏ.8ರಂದು ಘೋಷಿಸಲಾಗುತ್ತದೆ. ಈ ಸುತ್ತಿಗೆ ಆಯ್ಕೆಯಾದ ಪ್ರತಿ ಕೃತಿಗೆ 5,51,387 ರು. ಬಹುಮಾನ ಮೊತ್ತ ಸಿಗಲಿದೆ. ಇದು ಲೇಖಕ ಮತ್ತು ಅನುವಾದಕ ಇಬ್ಬರಿಗೂ ಹಂಚಿಕೆಯಾಗುತ್ತದೆ. ಎರಡನೇ ಸುತ್ತಿಗೆ ಆಯ್ಕೆಯಾದ 6 ಕೃತಿಗಳಲ್ಲಿ ಅಂತಿಮವಾಗಿ ಒಂದು ಕೃತಿಗೆ 2025ನೇ ಸಾಲಿನ ಬೂಕರ್‌ಪ್ರಶಸ್ತಿ ಘೋಷಿಸಲಾಗುತ್ತದೆ. ಮೇ 20ರಂದು ಲಂಡನ್‌ನ ಟೇಟ್ ಮಾಡರ್ನ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿಯ ಘೋಷಣೆ ನಡೆಯಲಿದೆ. ವಿಜೇತ ಲೇಖಕರಿಗೆ ಮತ್ತು ಅನುವಾದಕರಿಗೆ ತಲಾ 27,58,110 ರು. ಬಹುಮಾನ ಸಿಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ