
ಬೆಂಗಳೂರು(ನ.23): ರಾಜ್ಯ ಸರ್ಕಾರ 180 ಕೋಟಿ ರು. ವೆಚ್ಚ ಮಾಡಿ ನಡೆಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯ ಮೂಲಪ್ರತಿ ಕಾಣೆಯಾಗಲು ಕಾರಣರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.
ಈ ಸಂಬಂಧ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರಿಗೆ ಪತ್ರ ಬರೆದಿರುವ ಅವರು, ಹಿಂದುಳಿದ ವರ್ಗಗಳ ಆಯೋಗ ಹಿಂದಿನ ಅಧ್ಯಕ್ಷರ ಆಪ್ತ ಕಾರ್ಯದರ್ಶಿಯವರಿಗೆ ನೋಟಿಸ್ ನೀಡಿ ನಂತರ ರಾಜಕೀಯ ಒತ್ತಡಕ್ಕೆ ಮಣಿದು ತನಿಖೆಯನ್ನೇ ಅರ್ಧಕ್ಕೆ ಕೈಬಿಟ್ಟಿರುವುದು ಆಶ್ಚರ್ಯದ ಸಂಗತಿ. ಈ ಕೂಡಲೇ ವರದಿ ನೈಜತೆಯ ಬಗ್ಗೆ ತನಿಖೆ ಮಾಡಬೇಕು ಹಾಗು ನಿರ್ಲಕ್ಷ್ಯಕ್ಕೆ ಕಾರಣರಾದ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಬಿಜೆಪಿ ಒಂದು ಕುಟುಂಬದ ಪಕ್ಷ ಆಗಬಾರದು: ಶಾಸಕ ಬಸನಗೌಡ ಯತ್ನಾಳ್
2015ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಇದ್ದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಯಿತು.180 ಕೋಟಿ ರು. ವೆಚ್ಚದಲ್ಲಿ ಸಮೀಕ್ಷೆ ವರದಿ ಸಿದ್ದಪಡಿಸಲಾಗಿದೆ. ಆ ವರದಿ ಕಳೆದು ಹೋಗಿರುವುದು ಪೂರ್ವ ನಿಯೋಜಿತ ಷಡ್ಯಂತ್ರ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಮೂಲ ಪ್ರತಿ ಕಳೆದುಹೋಗಿದ್ದರೂ ಅಧಿಕಾರಿಗಳು ಯಾವುದೇ ಪೊಲೀಸ್ ಠಾಣೆಗೆ ದೂರು ದಾಖಲಿಸದಿರುವುದು ಆಶ್ಚರ್ಯದ ಸಂಗತಿ. ಇಂತಹ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ