ಯತ್ನಾಳ ತಮಗಾದ ಅನ್ಯಾಯದ ಬಗ್ಗೆ ಮಾತಾಡಿದ್ದಾರೆ, ಅದರಲ್ಲಿ ತಪ್ಪೇನಿದೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ

By Kannadaprabha NewsFirst Published Dec 31, 2023, 1:30 AM IST
Highlights

ಬಿಜೆಪಿ ನಾಯಕ ಬಸನಗೌಡ ಪಾಟೀಲ ಯತ್ನಾಳ ಯಾವುದೇ ಭ್ರಷ್ಟಾಚಾರದಲ್ಲಿ ತೊಡಗಿಲ್ಲ. ಅವರು ತಮಗೆ ಆದ ಅನ್ಯಾಯದ ಬಗ್ಗೆ ಮಾತಾಡಿರುವುದರಲ್ಲಿ ತಪ್ಪೇನಿದೆ? ಎಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಪ್ರಶ್ನಿಸಿದ್ದಾರೆ.

ಗಂಗಾವತಿ (ಡಿ.31): ಬಿಜೆಪಿ ನಾಯಕ ಬಸನಗೌಡ ಪಾಟೀಲ ಯತ್ನಾಳ ಯಾವುದೇ ಭ್ರಷ್ಟಾಚಾರದಲ್ಲಿ ತೊಡಗಿಲ್ಲ. ಅವರು ತಮಗೆ ಆದ ಅನ್ಯಾಯದ ಬಗ್ಗೆ ಮಾತಾಡಿರುವುದರಲ್ಲಿ ತಪ್ಪೇನಿದೆ? ಎಂದು ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಪ್ರಶ್ನಿಸಿದ್ದಾರೆ. ನಗರದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಯತ್ನಾಳ ನಿಷ್ಠುರವಾಗಿ ಮಾತನಾಡುವ ಛಲಗಾರ. ಹಾಗಾಗಿ ಬಿಜೆಪಿ ನಾಯಕರ ಬಗ್ಗೆ ಟೀಕಿಸುತ್ತಾರೆ ಎಂದರು. ಯತ್ನಾಳ ಬೆನ್ನಿಗೆ ಪಂಚಮಸಾಲಿ ಸಮಾಜದ ಶಕ್ತಿ ಇದೆ ಎನ್ನುವುದು ಬಿಜೆಪಿಗೆ ಮನವರಿಕೆಯಾಗಿದೆ. ವರಿಷ್ಠರು ಯತ್ನಾಳ ಅವರನ್ನು ಕರೆದು ಮಾತನಾಡಬೇಕು ಎಂದರು.

ಕಾಂತರಾಜ ವರದಿ ಬಗ್ಗೆ ಸುತ್ತೂರುಮಠ ಸ್ವಾಮೀಜಿ ಒಪ್ಪಿಲ್ಲ. ಸ್ವಾಮೀಜಿಗಳ ನಿರ್ಣಯಕ್ಕೆ ತಾವು ಸಂಪೂರ್ಣ ಬೆಂಬಲಿಸುತ್ತೇವೆ. ಲಿಂಗಾಯತರು ಮೂಲಧರ್ಮ ಮರೆಯಬಾರದು. ಪ್ರಮಾಣಪತ್ರಗಳಲ್ಲಿ ಲಿಂಗಾಯತ ಪಂಚಮಸಾಲಿ ಎಂದು ನಮೂದಿಸಬೇಕೆಂದರು. ದಾವಣಗೆರೆಯಲ್ಲಿ ಜರುಗಿದ ವೀರಶೈವ ಲಿಂಗಾಯತ ಮಹಾಸಭೆ ಬಗ್ಗೆ ನಮಗೆ ಗೊತ್ತಿಲ್ಲ. ಇದರ ಅಧ್ಯಕ್ಷರು ಯಾರು ಎನ್ನುವುದೂ ಗೊತ್ತಿಲ್ಲ ಎಂದರು. ಪ್ರತಿ ದಿನ ಎಲ್ಲೊ ಒಂದೊಂದು ಸಭೆ ನಡೆಯುತ್ತಿರುತ್ತವೆ, ಅದೇ ರೀತಿ ಯಾವುದೋ ಸಭೆ ನಡೆದಿರಬಹುದೆಂದರು.

ಬಿಜೆಪಿ ಮನೆಯಲ್ಲಿ ನಾಯಿ ಸತ್ತು ನಾರುತ್ತಿದೆ ಕಾಂಗ್ರೆಸ್ ಬಗ್ಗೆ ಮಾತನಾಡುವುದೇಕೆ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿ

ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಂದಿದೆ. ತಾವು ಹೋಗುವುದಾಗಿ ತಿಳಿಸಿದರು. ಮಾಜಿ ಸಂಸದ ಶಿವರಾಮಗೌಡ, ಮಹಾಲಿಂಗಪ್ಪ ಬನ್ನಿಕೊಪ್ಪ, ಕಳಕನಗೌಡ, ನಾಗರಾಜ ಬರಗೂರ, ರಾಚಪ್ಪ ಗುಂಜಳ್ಳಿ, ಬ್ರಾಹ್ಮಣ ಸಮಾಜದ ಅಧ್ಯಕ್ಷ ಮೇಗೂರು ರಾಘವೇಂದ್ರ, ನಾರಾಯಣರಾವ ಎಸ್.ಬಿ.ಎಚ್., ಅಳವಂಡಿಕರ್, ನಿಜಲಿಂಗಪ್ಪ ಮೆಣಸಗಿ, ಎ.ಕೆ. ಮಹೇಶಕುಮಾರ, ಒ.ಎಂ. ಬೆಳ್ಳುಳ್ಳಿ ಸೇರಿದಂತೆ ಸಮಾಜದ ಮುಖಂಡರು ಇದ್ದರು.

ಯಾವುದಾದರೂ ವರ್ಗ ಕೊಡಿ ನಮಗೆ ಮೀಸಲಾತಿ ಬೇಕಷ್ಟೆ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಕೂಡಲಸಂಗಮ ಪಂಚಮಸಾಲಿಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸಮುದಾಯದ ಸಾವಿರಾರು ಜನರು ಚನ್ನಮ್ಮ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿ, ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಭೆಯಲ್ಲಿ 2 ವಾರ ಕಾಲಾವಕಾಶ ಕೇಳಿದ್ದು, ಅಲ್ಲಿಯವರೆಗೆ ಕಾಲಾವಕಾಶ ನೀಡೋಣ ಎಂದು ಬಸವಜಯ ಮೃತ್ಯುಂಜಯ ಶ್ರೀಗಳು ಘೋಷಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ಹತ್ತಾರು ವರ್ಷಗಳಿಂದ ನಮ್ಮ ಸಮಾಜದ ಹಿರಿಯರು ಹೋರಾಟ ಮಾಡಿಕೊಂಡು ಬಂದಿದ್ದಾರೆ. ಸ್ವಾಮೀಜಿಯವರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಮಠ ಬಿಟ್ಟು ಹೋರಾಟ ಮಾಡಿದ್ದಾರೆ. ಸಮಾಜಕ್ಕೂ ಸಹನಶಕ್ತಿ ಇದೆ.‌ ನಮ್ಮದೇ ಸರ್ಕಾರ ಇದ್ದರೂ ಸದನದ ಬಾವಿಗಿಳಿದು ಹೋರಾಟ ಮಾಡಿದ್ದೇನೆ. ನೀವು ಯಾವುದಾದರೂ ವರ್ಗ ಕೊಡಿ, ನಮಗೆ ಮೀಸಲಾತಿ ಬೇಕಷ್ಟೆ ಎಂದು ಒತ್ತಾಯಿಸಿದರು.

ಹೊಸ ವರ್ಷಾಚರಣೆಗೆ ಕಾಫಿನಾಡಿನತ್ತ ಪ್ರವಾಸಿಗರ ದಂಡು: ಹೋಂ ಸ್ಟೇ, ರೆಸಾರ್ಟ್ ಹೌಸ್‌ಫುಲ್!

ಈ ಅಧಿವೇಶನ ಮುಗಿದ ತಕ್ಷಣ ಬೆಂಗಳೂರಿಗೆ ಹೋಗಿ ಹಿಂದುಳಿದ ವರ್ಗಗಳ ಆಯುಕ್ತರು, ಸರ್ಕಾರದ ವಕೀಲರು, ಸಂಬಂಧಿಸಿದ ಇಲಾಖೆಯವರೊಂದಿಗೆ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಆದ್ದರಿಂದ ಇಷ್ಟು ದಿನ ಕಾಯ್ದಿದ್ದೇವೆ. ಇನ್ನೊಂದು ವಾರ ಕಾದು ನೋಡೋಣ. ಸರ್ಕಾರದ ವಿರುದ್ಧ ಮಾತನಾಡುವ ಶಕ್ತಿಯನ್ನು ಕಾಂಗ್ರೆಸ್ ಶಾಸಕರು,‌ ಸಚಿವರಿಗೆ ನೀಡುವಂತೆ ಚನ್ನಮ್ಮ ಆಶೀರ್ವದಿಸಲಿ ಎಂದು ವ್ಯಂಗ್ಯವಾಡಿದರು. ಏನೂ ಆಗುವುದಿಲ್ಲ ಹೆದರಬೇಡಿ. ಯಾರೇ ಮಾಡಿಕೊಂಡು ಬಂದರೂ ನಮ್ಮದೇನೂ ಸಮಸ್ಯೆ ಇಲ್ಲ. ಅವರು ಮಾಡಿಕೊಂಡು ಬಂದರೆ ಸದಾಕಾಲ ಅವರಿಗೆ ಆಶೀರ್ವಾದ ಮಾಡಬೇಕು ಎಂದರು.

click me!