ಮತ್ತೆ ಸಿಡಿದೆದ್ದ ಜಯ ಮೃತ್ಯುಂಜಯ ಸ್ವಾಮೀಜಿ: ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಸಂದೇಶ

Published : Jul 05, 2021, 04:36 PM ISTUpdated : Jul 05, 2021, 04:38 PM IST
ಮತ್ತೆ ಸಿಡಿದೆದ್ದ ಜಯ ಮೃತ್ಯುಂಜಯ ಸ್ವಾಮೀಜಿ: ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಸಂದೇಶ

ಸಾರಾಂಶ

* ಪಂಚಮಸಾಲಿಗೆ 2A ಮೀಸಲಾತಿ ವಿಚಾರ * ಮತ್ತೆ ಸಿಡಿದೆದ್ದ ಜಯ ಮೃತ್ಯುಂಜಯ ಸ್ವಾಮೀಜಿ * ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಸಂದೇಶ ರವಾನೆ

ಮೈಸೂರು, (ಜುಲೈ.05): ಪಂಚಮಸಾಲಿ ಸಮುದಾಯಕ್ಕೆ  2A ಮೀಸಲಾತಿ ವಿಚಾರವಾಗಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತೆ ಸಿಡಿದೆದ್ದಿದ್ದು, ಮುಂಚಿತವಾಗಿಯೇ ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.

ಮೈಸೂರಿನಲ್ಲಿ ಇಂದು (ಸೋಮವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಕೊಟ್ಟ ಮಾತಿನಂತೆ ಭರವಸೆ ಈಡೇರಿಸಬೇಕು. ಇಲ್ಲವಾದರೆ ಮತ್ತೆ ಹೋರಾಟ ಅನಿವಾರ್ಯ. ಈ ಬಾರಿಯೂ ಅರಮನೆ ಮೈದಾನದಲ್ಲೇ ಹೋರಾಟ ಎಂದು ಎಚ್ಚರಿಸಿದರು.

ಬಿಜೆಪಿ ನಾಯಕತ್ವ ಬದಲಾವಣೆ ಮಧ್ಯೆ ಪಂಚಮಸಾಲಿ ಸ್ವಾಮೀಜಿಗಳ ಸಭೆ: ಮೀಟಿಂಗ್‌ ನಡೆಸಿದ್ದೇಕೆ?

20ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಿ ಹೋರಾಟ ನಡೆಸಲಾಗುವುದು. ಒಂದು ಬಾರಿ ನಮ್ಮ ಹೋರಾಟ ನಿರ್ಲಕ್ಷ್ಯ ಮಾಡಿ ಬಿಜೆಪಿ ನಷ್ಟ ಅನುಭವಿಸಿದೆ. ಎರಡು ಉಪ ಚುನಾವಣೆಯಲ್ಲೂ ಕೈ ಸುಟ್ಟುಕೊಂಡಿದೆ. ಮತ್ತೆ ಈ ತಪ್ಪು ಮಾಡಬೇಡಿ ಎಂದು ಸಿಎಂ ಬಿಎಸ್‌ ಯಡಿಯೂರಪ್ಪ ಸರ್ಕಾರಕ್ಕೆ ಕಿವಿ ಮಾತು ಹೇಳಿದರು.

ಯತ್ನಾಳರಂತಹ ನಾಯಕರು ವಿಧಾನಸಭೆಯಲ್ಲಿ ಇದ್ದಿದ್ದಕ್ಕೆ ನಮ್ಮ ಪರ ಧ್ವನಿ ಆಯ್ತು. ಇದೇ ಕಾರಣಕ್ಕೆ ಸದನದಲ್ಲೂ ಅದು ರೆಕಾರ್ಡ್ ಆಯ್ತು.
ಯಡಿಯೂರಪ್ಪ ನಮ್ಮ ಸಮುದಾಯದ ಪ್ರಶ್ನಾತೀತ ನಾಯಕ. ಅವರ ಅವಧಿಯಲ್ಲೇ ನಮಗೆ ಮೀಸಲಾತಿ ಸಿಗಬೇಕು ಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ