
ಮಂಗಳೂರು, (ಜುಲೈ, 28): ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಇಂದು(ಗುರುವಾರ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದರು. ಇದೇ ವೇಳೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ 25 ಲಕ್ಷ ರೂಪಾಯಿ ಹಣಕಾಸಿ ನೆರವು ನೀಡಿದರು.
ಬಳಿಕ ಮಾಧ್ಯಮದ ಜತೆ ಮಾತಾಡಿದ ಸಿಎಂ ಬೊಮ್ಮಾಯಿ, ನಾವು ಪ್ರವೀಣ್ ಹತ್ಯೆ ಕೇಸನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸೋಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಹತ್ಯೆ ಹಿಂದೆ ಯಾವುದೇ ಸಂಘಟನೆ ಇದ್ದರೂ ಬಂಧಿಸುತ್ತೇವೆ. ರಾಜ್ಯ ಸರ್ಕಾರದಿಂದ 25 ಲಕ್ಷ, ಬಿಜೆಪಿಯಿಂದ 25 ಲಕ್ಷ ಚೆಕ್ ನೀಡಿದ್ದೇವೆ. ನಮ್ಮ ಸರ್ಕಾರ ಮತ್ತು ಪಕ್ಷದಿಂದ ಪ್ರವೀಣ್ ಮನೆಯವರಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಹೇಳಿದರು.
ಹತ್ಯೆಯಾದ ಪ್ರವೀಣ್ ಕುಟುಂಬಕ್ಕೆ ವೈಯಕ್ತಿಕ 10 ಲಕ್ಷ ರೂ. ನೆರವು ಘೋಷಿಸಿದ ಅಶ್ವತ್ಥ ನಾರಾಯಣ
ಪ್ರವೀಣ್ ನೆಟ್ಟಾರು ಹತ್ಯೆ ಅತ್ಯಂತ ಖಂಡನೀಯ. ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಕೇರಳದ ಗಡಿಯಲ್ಲೇ ಹತ್ಯೆ ನಡೆದಿರೋ ಕಾರಣ ಇದು ವ್ಯವಸ್ಥಿತ ಕೊಲೆ ಎನ್ನಬಹುದು. ಹಲವಾರು ವರ್ಷಗಳಿಂದ ಹೀಗೆ ಕರಾವಳಿ ಪ್ರದೇಶದಲ್ಲಿ ಕೊಲೆಗಳು ನಡೆಯುತ್ತಿರೋ ಪರಿಣಾಮ ನಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.
ವೈಯಕ್ತಿಕ 10 ಲಕ್ಷ ರೂ. ನೆರವು ಘೋಷಿಸಿದ ಅಶ್ವತ್ಥ ನಾರಾಯಣ
ಸಮಾಜ ವಿರೋಧಿ ಶಕ್ತಿಗಳ ಅಮಾನುಷ ಕ್ರೌರ್ಯಕ್ಕೆ ಬಲಿಯಾದ ಬಿಜೆಪಿ ಕಾರ್ಯಕರ್ತ ಮತ್ತು ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕ ವಾಗಿ 10 ಲಕ್ಷ ರೂ. ನೆರವು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರಿನಲ್ಲಿಇಂದು (ಗುರುವಾರ) ಸುದ್ದಿಗಾರರ ಜತೆ ಮಾತನಾಡಿದ ಅವರು, 10 ಲಕ್ಷ ರೂ.ಗಳ ಚೆಕ್ ಅನ್ನು ಪ್ರವೀಣ್ ಅವರ ಕುಟುಂಬಕ್ಕೆ ತಲುಪಿಸಲಾಗುವುದು. ಅವರ ಬಲಿದಾನಕ್ಕೆ ನಾವು ಬೆಲೆ ಕಟ್ಟಲು ಸಾಧ್ಯವಿಲ್ಲ. ಇದನ್ನು ನೆರವು ಎಂದು ಹೇಳಲು ಇಷ್ಟ ಪಡುವುದಿಲ್ಲ. ಇದು ನನ್ನ ಕರ್ತವ್ಯವಾಗಿದೆ ಗದ್ಗದಿತರಾದರು.
ಪ್ರವೀಣ್ ಅವರ ಹಂತಕರು ಎಲ್ಲೇ ಇದ್ದರೂ ಕಠಿಣ ಕ್ರಮ ಜರುಗಿಸಲಾಗುವುದು. ಪಕ್ಷದ ಕಾರ್ಯಕರ್ತರ ಆಕ್ರೋಶ ನನಗೆ ಅರ್ಥವಾಗುತ್ತದೆ. ಅಪರಾಧಿಗಳ ಹೆಡೆಮುರಿ ಕಟ್ಟುವ ಶಕ್ತಿ ಬಿಜೆಪಿ ಸರಕಾರಕ್ಕಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ