
ಬೆಂಗಳೂರು, (ನ.08): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಭಾನುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ಮಿಷನ್-2022ರ (Bengaluru Mission 2022) ಪ್ರಗತಿ ಪರಿಶೀಲನೆ ನಡೆಸಿದರು
ಮಳೆಯಿಂದಾಗಿ (Rain) ನಗರದ ರಸ್ತೆಗಳಲ್ಲಿ ಗುಂಡಿ ಬಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಬೆಂಗಳೂರು ಮಿಷನ್-2022 ರ ಪ್ರಗತಿ ಪರಿಶೀಲನೆ ನಡೆಸಿ, ರಸ್ತೆಗಳ ಅತ್ಯುತ್ತಮ ನಿರ್ವಹಣೆ ಹಾಗೂ ಸುಗಮ ಸಂಚಾರ ವ್ಯವಸ್ಥೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಳೆ ಹಾನಿ ಸಿಎಂ ಸಭೆಗೆ ಸಚಿವರೇ ಗೈರು: ಮಕ್ಕಳ ಜೊತೆ ಕ್ರಿಕೆಟ್ ಆಡ್ತಿದ್ದ ಅಶೋಕ್..!
ಗೃಹ ಕಚೇರಿ ಕೃಷ್ಣಾದಲ್ಲಿ ವಿವಿಧ ಇಲಾಖೆಗಳ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದ ಅವರು, ನಗರದ ಕೇಂದ್ರ ಭಾಗದ ರಸ್ತೆಗಳನ್ನು ಸರಿಯಾಗಿ ನಿರ್ವಹಣೆ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಈ ಬಗ್ಗೆ ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಸಭೆ ನಡೆಸಿ ಪರಿಶೀಲಿಸುವುದಾಗಿ ತಿಳಿಸಿದರು.
ಬೆಂಗಳೂರು ಮೆಟ್ರೋ ರೈಲು ಯೋಜನೆಯನ್ನು ನಿಗದಿತ ಗುರಿಗೆ ಒಂದು ವರ್ಷ ಮೊದಲೇ ಪೂರ್ಣಗೊಳಿಸಬೇಕು. ಇದಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಅಧಿಕಾರಿಗಳು ಮಾಡಿಕೊಳ್ಳಬೇಕು. ಉಪನಗರ ರೈಲು ಯೋಜನೆಯು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, 15.40 ಕಿ.ಮೀ. ಮಾರ್ಗ ನಿರ್ಮಾಣಕ್ಕೆ ಕೆಐಎಡಿಬಿ ಮೂಲಕ ಕೈಗೊಂಡಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ನಿರ್ದೇಶನ ನೀಡಿದರು.
ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
25 ಕೆರೆ ಅಭಿವೃದ್ಧಿ
ಕೆ 100 ವಾಟರ್ ವೇ ಯೋಜನೆಯಡಿ 11 ಕಿ.ಮೀ. ರಾಜಕಾಲುವೆಯನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿಪಡಿಸುವ ಕಾಮಗಾರಿಯಲ್ಲಿ ಒಳಚರಂಡಿ ನೀರು ಕಾಲುವೆಗೆ ಸೇರದಂತೆ ಮುನ್ನೆಚ್ಚರಿಕೆ ವಹಿಸಿ. ಕೆರೆಗಳ ಅಭಿವೃದ್ಧಿ ಮತ್ತು ಪುನಶ್ಚೇತನ ಯೋಜನೆಯಡಿ ಸುಮಾರು .128 ಕೋಟಿ ವೆಚ್ಚದಲ್ಲಿ 25 ಕೆರೆ ಅಭಿವೃದ್ಧಿ ಮಾಡಲಾಗುತ್ತಿದ್ದು, ಜನವರಿ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳಲಿದೆ. ಕೆರೆ ಅಭಿವೃದ್ಧಿ ಮಾಡುವಾಗ ಒತ್ತುವರಿ ತೆರವುಗೊಳಿಸಿ ಹಸಿರು ಬೇಲಿ ಹಾಕಬೇಕು. ಕೆರೆಗಳಿಗೆ ಒಳಚರಂಡಿ ನೀರು ಸೇರದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ನೀಡಿದ ಸಲಹೆಗಳು:
* ನಗರದ ಕೇಂದ್ರ ಭಾಗದ ರಸ್ತೆಗಳ ಅತ್ಯುತ್ತಮ ನಿರ್ವಹಣೆ ಹಾಗೂ ಸುಗಮ ಸಂಚಾರ ವ್ಯವಸ್ಥೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ಕೊಟ್ಟಿದ್ದಾರೆ
* ಇದಕ್ಕಾಗಿ ಸ್ಮಾರ್ಟ್ ಸಿಟಿ ಯೋಜನೆ ಕುರಿತು ಪ್ರತ್ಯೇಕ ಸಭೆ ನಡೆಸಿ ಪರಿಶೀಲಿಸುವುದಾಗಿ ತಿಳಿಸಿದ್ದಾರೆ
* ಬೆಂಗಳೂರು ಮೆಟ್ರೋ ರೈಲು ಯೋಜನೆಯನ್ನು ನಿಗದಿತ ಗುರಿಗೆ ಒಂದು ವರ್ಷ ಮೊದಲೇ ಪೂರ್ಣಗೊಳಿಸಲು ಸೂಚನೆ ಹಾಗೂ ಇದಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ
* ಉಪನಗರ ರೈಲು ಯೋಜನೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಗೆ 15.40 ಕಿ.ಮೀ. ಮಾರ್ಗ ನಿರ್ಮಾಣಕ್ಕೆ ಕೆಐಎಡಿಬಿ ಮೂಲಕ ಕೈಗೊಂಡಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದ್ದಾರೆ
* ಕೆ 100 ವಾಟರ್ ವೇ ಯೋಜನೆಯಡಿ 11 ಕಿ.ಮೀ. ರಾಜಕಾಲುವೆಯನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿಪಡಿಸುವ ಕಾಮಗಾರಿಯಲ್ಲಿ ಒಳಚರಂಡಿ ನೀರು ಕಾಲುವೆಗೆ ಸೇರದಂತೆ ಮುನ್ನೆಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದ್ದಾರೆ
* ಕೆರೆಗಳ ಅಭಿವೃದ್ಧಿ ಮತ್ತು ಪುನಶ್ಚೇತನ ಯೋಜನೆಯಡಿ ಸುಮಾರು 128 ಕೋಟಿ ರೂ. ವೆಚ್ಚದಲ್ಲಿ 25 ಕೆರೆಗಳ ಅಭಿವೃದ್ಧಿ ಕಾರ್ಯ ಜನವರಿ ಅಂತ್ಯದ ವೇಳೆಗೆ ಪೂರ್ಣ ಆಗುವ ಬಗ್ಗೆ ಹೇಳಿದ್ದಾರೆ
* ಕೆರೆ ಅಭಿವೃದ್ಧಿ ಮಾಡುವಾಗ ಒತ್ತುವರಿ ತೆರವುಗೊಳಿಸಿ ಹಸಿರು ಬೇಲಿ ಹಾಕುವಂತೆ ಸೂಚನೆ ಕೊಟ್ಟಿದ್ದಾರೆ
* ಈ ಕೆರೆಗಳಿಗೆ ಒಳಚರಂಡಿ ನೀರು ಸೇರದಂತೆ ಕ್ರಮ ವಹಿಸುವಂತೆ ಸೂಚನೆ ಕೊಡಲಾಗಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ