* ಲಾಕ್‌ಡೌನ್ ವಿಸ್ತರಣೆ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
*ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ
* ಕೆಲ ಜಿಲ್ಲೆಗಳಲ್ಲಿ ಕೊರೋನಾ ಕಡಿಮೆ ಆಗಬೇಕಾಗಿದೆ ಎಂದು ಗೃಹ ಸಚಿವ
ಹಾವೇರಿ, (ಜೂನ್.02): ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್ ವಿಸ್ತರಣೆಯ ಕುರಿತು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ಇಂದು (ಬುಧವಾರ) ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್‌ಡೌನ್ ವಿಸ್ತರಣೆ ಬಗ್ಗೆ ಜೂನ್ 5 ರಂದು ನಿಗದಿಯಾಗಿರುವ ಮಹತ್ವದ ಸಭೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಸ್ಪಷ್ಟಪಡಿಸಿದರು.
ಲಾಕ್‌ಡೌನ್ ವಿಸ್ತರಣೆ ಬಗ್ಗೆ ಸುಳಿವು ಕೊಟ್ಟ ಸಿಎಂ: 2ನೇ ಪ್ಯಾಕೇಜ್ ಘೋಷಣೆಗೆ ಸಿದ್ಧತೆ
ಜೂ.4ರಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ವಿವಿಧ ಜಿಲ್ಲೆಗಳಲ್ಲಿರುವ ಪರಿಸ್ಥಿತಿಯನ್ನು ಅವರು ಅರಿತುಕೊಳ್ಳುತ್ತಾರೆ. ಕೆಲ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಕಡಿಮೆ ಇದೆ. ಕೆಲ ಜಿಲ್ಲೆಗಳಲ್ಲಿ ಕಡಿಮೆ ಆಗಬೇಕಾಗಿದೆ. ಈ ಎಲ್ಲ ಅಂಶಗಳನ್ನು ಗಮನಿಸಿ ತಜ್ಞರು ನೀಡುವ ವರದಿಯನ್ನು ವಿಶ್ಲೇಷಣೆ ಮಾಡಿ ರಾಜ್ಯದಲ್ಲಿ ಲಾಕ್‌ಡೌನ್ ಯಾವ ರೀತಿ ಇರಬೇಕು ಮತ್ತು ಹೇಗೆ ಮುಂದುವರಿಸಬೇಕು ಎಂಬುದರ ಕುರಿತು ಸಭೆಯಲ್ಲಿ ಮುಖ್ಯಮಂತ್ರಿಗಳು ನಿರ್ಧರಿಸಲಿದ್ದಾರೆ ಎಂದು ಹೇಳಿದರು.
ಬೆಳಗ್ಗೆ ಸಿಎಂ ಕೂಡು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಜೂನ್ 7ರ ಬಳಿಕೆ ಇನ್ನಷ್ಟು ದಿನ ಲಾಕ್‌ಡೌನ್ ವಿಸ್ತರಣೆ ಮಾಡುವ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಆದ್ರೆ, ಈ ಬಾರಿ ಲಾಕ್‌ಡೌನ್ ವೇಳೆ ಕೆಲ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡುವ ಮಾತುಗಳನ್ನಾಡಿದ್ದಾರೆ.