
ಬೆಂಗಳೂರು(ಮೇ.17): ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜತೆ ಅನೌಪಚಾರಿಕ ಮಾತುಕತೆ ನಡೆಸಿದ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆಡಳಿತಾವಧಿಯಲ್ಲಿ ದಿಟ್ಟ ತೀರ್ಮಾನ ಕೈಗೊಳ್ಳಲು ಸಹಕಾರ ನೀಡಿದ್ದಕ್ಕೆ ಧನ್ಯವಾದಗಳನ್ನು ಹೇಳಿದರು.
ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಚಹಾಕೂಟ ಏರ್ಪಡಿಸಿ ಅನೌಪಚಾರಿಕವಾಗಿ ಮಾತನಾಡಿದರು. ಈ ವೇಳೆ ನನ್ನ ಆಡಳಿತವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದಗಳು. ನಾವು ಸಂವಿಧಾನ ಒಪ್ಪಿಕೊಂಡಿದ್ದೇವೆ. ಆಡಳಿತದಲ್ಲಿ ಕಾರ್ಯಾಂಗ, ಶಾಸಕಾಂಗ, ಎರಡೂ ಪ್ರಮುಖ ಪಾತ್ರ ವಹಿಸುತ್ತವೆ. ನಾವು ಅದರಡಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಬಿಜೆಪಿ ಸೋಲಿನ ಬಗ್ಗೆ ಆರ್‌ಎಸ್‌ಎಸ್‌ಗೆ ಬೊಮ್ಮಾಯಿ ವಿವರಣೆ
‘ನಾನು ಆಧಿಕಾರಕ್ಕೆ ಬಂದಾಗ ಕೋವಿಡ್, ಪ್ರವಾಹ ಸಂದರ್ಭ ಎದುರಾಯಿತು. ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದ್ದೇವೆ. ನಮ್ಮ ಆಡಳಿತದಲ್ಲಿ ಯಾವುದೇ ಹಿಂಸಾತ್ಮಕ ಚಟುವಟಿಕೆಗಳು ನಡೆಯಲಿಲ್ಲ. ಚುನಾವಣೆ ಸಂದರ್ಭದಲ್ಲಿಯೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಗೃಹ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ. ನಾವು ಅನೇಕ ಮಹತ್ವದ ತೀರ್ಮಾನಗಳನ್ನು ತೆಗೆದುಕೊಂಡಿದ್ದೇವೆ. ಮೀಸಲಾತಿ ಹೆಚ್ಚಳ, ಸರ್ಕಾರಿ ನೌಕರ ಸವಾಲು, ಹೊಸ ನೀತಿಗಳನ್ನು ಜಾರಿಗೆ ತಂದಿದ್ದೇವೆ. ಉದ್ಯೋಗ ನೀತಿ, ಕೈಗಾರಿಕಾ ನೀತಿ ಎಲ್ಲಾ ಹೊಸ ಯೋಜನೆಗಳನ್ನು ತರಲು ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ನಿಮ್ಮ ಸಹಕಾರ ಅತ್ಯಂತ ಮುಖ್ಯವಾಗಿತ್ತು’ ಎಂದರು.
‘ನಾವು ಐದು ವರ್ಷಕ್ಕೆ ಬರುವವರು, ಅಧಿಕಾರಿಗಳು ಸುದೀರ್ಘ ಅಧಿಕಾರದಲ್ಲಿರುವವರು. ರಾಜ್ಯದ ಏಳ್ಗೆಗೆ ಎಲ್ಲರೂ ಶ್ರಮಿಸೋಣ. ಕೆಲಸ ವೇಗವಾಗಿ ಆಗಲಿ ಎಂದು ನಾನು ಗಟ್ಟಿದನಿಯಲ್ಲಿ ಹೇಳಿರಬಹುದು. ಆದರೆ, ಯಾವುದೇ ವೈಯಕ್ತಿಕ ಅಭಿಪ್ರಾಯ ಇರಲಿಲ್ಲ. ಕರ್ನಾಟಕ ಹಲವಾರು ವಿಚಾರದಲ್ಲಿ ಮುಂಚೂಣಿಯಲ್ಲಿದೆ. ಜೆಎಸ್‌ಟಿಯಲ್ಲಿ ಮುಂಚೂಣಿಯಲ್ಲಿದ್ದೇವೆ. ಬಂಡವಾಳ ಸೆಳೆಯುವಲ್ಲಿ ಮೊದಲ ಸ್ಥಾನದಲ್ಲಿದ್ದೇವೆ. ಕರ್ನಾಟಕ ಅಭಿವೃದ್ಧಿಗೆ ಅಧಿಕಾರಿಗಳ ಪಾತ್ರ ಮುಖ್ಯವಾಗಿದ್ದು, ರಾಜ್ಯದ ಅಭಿವೃದ್ಧಿಗೆ ಎಲ್ಲರೂ ಕೆಲಸ ಮಾಡೋಣ’ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ