ರಾಜ್ಯದಲ್ಲಿ ಕೊರೋನಾ 2ನೇ ಅಲೆ: ಕಠಿಣ ಕ್ರಮದ ಎಚ್ಚರಿಕೆ ಕೊಟ್ಟ ಗೃಹ ಸಚಿವ

Published : Apr 09, 2021, 04:12 PM IST
ರಾಜ್ಯದಲ್ಲಿ ಕೊರೋನಾ 2ನೇ ಅಲೆ: ಕಠಿಣ ಕ್ರಮದ ಎಚ್ಚರಿಕೆ ಕೊಟ್ಟ ಗೃಹ ಸಚಿವ

ಸಾರಾಂಶ

ಕರ್ನಾಟಕದಲ್ಲಿ ಕೊರೋನಾ ಎರಡನೇ ಜೋರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವರು ಸಾರ್ವಜನಿಕರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ಬೀದರ್, (ಏ.09): ಜನರ ಸಹಕಾರ ಇದ್ದರೆ ಮಾತ್ರ ಯಾವುದೇ ಲಾಕ್‌ಡೌನ್ ಮತ್ತು ಆರ್ಥಿಕ ನಿರ್ಬಂಧ ಇಲ್ಲದೆ ಕೋವಿಡ್ ನಿಯಂತ್ರಣ ಸಾಧ್ಯ. ಇಲ್ಲದಿದ್ದರೆ ಎಲ್ಲರೂ ಕಠಿಣ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ಕೊಟ್ಟಿದ್ದಾರೆ.

ಇಂದು (ಶುಕ್ರವಾರ) ಹುಮ್ನಾಬಾದ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಈಗ ಕೋವಿಡ್ ಬಗ್ಗೆ ಹೆಚ್ಚಿಗೆ ಹೇಳಬೇಕಾದ ಅವಶ್ಯಕತೆ ಇಲ್ಲ. ಕೋವಿಡ್ ನಿಯಂತ್ರಣ ತಪ್ಪಿದರೆ ಕಠಿಣ ಪರಿಸ್ಥಿತಿ ಎದುರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಅದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಮನವಿ ಮಾಡಿದರು. 

ಬೆಂಗಳೂರಿನಲ್ಲಿ ಇಂದಿನಿಂದ ಮನೆ ಮನೆಯಲ್ಲೂ ಕೋವಿಡ್ ಟೆಸ್ಟ್

ಸದ್ಯಕ್ಕೆ ನಾವೇ ಪರಿಸ್ಥಿತಿಯನ್ನು ನಿಭಾಯಿಸುವ ಸ್ಥಿತಿಯಲ್ಲಿದ್ದೇವೆ. ಆದರೆ ಇದಕ್ಕೆ ಜನರ ಸಹಕಾರ ಅತಿಮುಖ್ಯ. ಜನರ ಸಹಕಾರ ಸಿಕ್ಕಿದ್ದೇ ಆದರೆ ಇದನ್ನು ನಾವು ಯಾವುದೇ ಲಾಕ್ಡೌನ್ ಇಲ್ಲದೆ, ಆರ್ಥಿಕ ನಿರ್ಬಂಧ ಎದುರಿಸದೇ ನಿಯಂತ್ರಿಸಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಮತ್ತೊಮ್ಮೆ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಎಚ್ವರಿಸಿದರು.

ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ನೈಟ್ ಕರ್ಪ್ಯೂ ಜಾರಿಗೊಳಿಸಿದ್ದಾರೆ. ಮುಖ್ಯಮಂತ್ರಿ ಬಿ ಎಸ್ ಯಡಯೂರಪ್ಪ ಅವರು ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ನೈಟ್ ಕರ್ಪ್ಯೂ ಜಾರಿಗೊಳಿಸಿದ್ದಾರೆ. ಕೋವಿಡ್ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ರಾತ್ರಿ ಕರ್ಫ್ಯೂ ಜಾರಿ ಅನಿವಾರ್ಯವಾಗಿದೆ ಎಂದರು.

ನೈಟ್ ಕರ್ಫ್ಯೂ ಜಾರಿ ಮಾಡಲಾಗಿರುವ ಜಿಲ್ಲೆಗಳಲ್ಲಿ ನಿಯಂತ್ರಣ ಕ್ರಮಗಳನ್ನ ಕಟ್ಟುನಿಟ್ಟಾಗಿ ಅನುಷ್ಠಾಕ್ಕೆ ಥುವಂತೆ ಈಗಾಗಲೇ ನಾನು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು  ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಳಗಾವಿ ಅಧಿವೇಶನ: 89 ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, 6000ಕ್ಕೂ ಹೆಚ್ಚು ಪೊಲೀಸರಿಂದ ಸರ್ಪಗಾವಲು
Karnataka Winter Session: ಬೆಳಗಾವಿ ಅಧಿವೇಶನದಲ್ಲಿ ಮಂಡನೆಯಾಗಲಿರುವ ವಿಧೇಯಕಗಳು