ಪಾಸಿಂಗ್‌ ಮಾರ್ಕ್ಸ್‌ 33ಕ್ಕೆ ಇಳಿಕೆ, ಶಿಕ್ಷಣ ಸಚಿವರಿಗೆ ಕ್ಲಾಸ್‌ ತೆಗೆದುಕೊಂಡ ಸಭಾಪತಿ ಬಸವರಾಜ್‌ ಹೊರಟ್ಟಿ!

Published : Oct 29, 2025, 08:38 PM IST
Basavaraj Horatti And Madhu Bangarappa In Pasing Marks Remark

ಸಾರಾಂಶ

Basavaraj Horatti Slams Madhu Bangarappa Over Reducing Pass Marks to 33 ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳ ಪಾಸಿಂಗ್ ಮಾರ್ಕ್ಸ್ ಅನ್ನು 35 ರಿಂದ 33ಕ್ಕೆ ಇಳಿಸುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ನಿರ್ಧಾರಕ್ಕೆ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಅ.29): ಪ್ರೌಢಶಾಲೆ ಮತ್ತು ಪಿಯು ಕಾಲೇಜು ವಿದ್ಯಾರ್ಥಿಗಳ ಪಾಸಿಂಗ್ ಮಾರ್ಕ್ಸ್ ಅನ್ನು 33ಕ್ಕೆ ಇಳಿಸುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಪ್ರಯತ್ನಕ್ಕೆ ಸಭಾಪತಿ ಬಸವರಾಜ್‌ ಹೊರಟ್ಟಿ ಫುಲ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಪತ್ರ ಬರೆದ ಸಭಾಪತಿ ಬಸವರಾಜ್ ಹೊರಟ್ಟಿ, ಅವರ ನಿರ್ಧಾರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕನಿಷ್ಠ 33 ಅಂಕಗಳನ್ನು ತೆಗೆದುಕೊಂಡರೆ ಅವರನ್ನು ಉತ್ತೀರ್ಣಗೊಳಿಸುತ್ತೇವೆ ಎಂದು ಹೇಳಿಕೆ ನೀಡಿರುತ್ತೀರಿ. ಇದು ಬಹಳ ಖೇದಕರ ಸಂಗತಿ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಲಿಖಿತ ಪರೀಕ್ಷೆ ವಿಶೇಷ ಘಟ್ಟ. ಅಂಕಗಳನ್ನು ಗಳಿಸುವುದು ಒಂದು ಮುಖ್ಯ ಉದ್ದೇಶವಾಗಿದ್ದರೂ ಸಹ, ವಿದ್ಯಾರ್ಥಿ ಜೀವನದಲ್ಲಿ ಏಕಾಗ್ರತೆ, ಧೈರ್ಯ, ಜ್ಞಾಪಕ ಶಕ್ತಿ, ಕಲಿಕೆಯ ನೈಪುಣ್ಯತೆ, ವಿಷಯಗಳ ಮನನ ಮಾಡುವುದು, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ, ಅನೇಕ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದೆ.

ಹಿಂದೆ ನಿಗಧದಿ ಮಾಡಿರುವಂತೆ ಶೇ. 35 ಅಂಕಗಳು ಸಮಂಜಸವಾಗಿತ್ತು. 35 ಅಂಕ ದೀರ್ಘಕಾಲದಿಂದ ಸಾಬೀತಾದ ಮಾನದಂಡವಾಗಿದೆ. ಇಂಥ ಮಾನದಂಡವನ್ನು ಎಕಾಏಕಿ 33 ಅಂಕಗಳಿಗೆ ಕಡಿತಗೊಳಿಸುವಂತಹ ನಿರ್ಧಾರವು ಯಾವ ಕೋನದಿಂದಲೂ ಸಹ ಸರಿಯಲ್ಲ. ಈ ರೀತಿ ನಿರ್ಧಾರಗಳು ವಿದ್ಯಾರ್ಥಿಗಳ ಸ್ಪರ್ಧಾತ್ಮಕ ಮನೋಭಾವಕ್ಕೆ ಪೆಟ್ಟು ಬೀಳುತ್ತದೆ. ನಿರ್ದಿಷ್ಟ ಬ್ಯಾಚಿನ ಅಭ್ಯರ್ಥಿಗಳು ಶೇ. 33 ರ ಬ್ಯಾಚಿಗೆ ಸೇರಿದವರು ಎಂದು ಗೇಲಿ ಮಾಡುವಂತಹ ಪ್ರಸಂಗ ಉಂಟಾಗುತ್ತದೆ. ಇದು ಕೀಳರಿಮೆಯ ಅನುಭವ ಉಂಟಾಗುವುದಕ್ಕೆ ಎಡೆ ಮಾಡಿದಂತಾಗುತ್ತದೆ. ಈ ನಿರ್ಧಾರ ಕೈಬಿಟ್ಟು ಈ ಮುಂಚೆ ಇದ್ದ ಹಾಗೆ ಕನಿಷ್ಠ 35 ಅಂಕ ನಿಗದಿ ಮಾಡಿ ಎಂದು ಪತ್ರದಲ್ಲಿ ಬರೆದಿದ್ದಾರೆ.

ಮೊದಲು ಖಾಲಿ ಇರುವ ಶಿಕ್ಷಕರ ಹುದ್ದೆ ತುಂಬಿ

ಪಾಸಿಂಗ್‌ ಮಾರ್ಕ್ಸ್‌ಅನ್ನು ಕಡಿಮೆ ಮಾಡುವ ಮೊದಲು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತುಂಬಿ. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಿ. ಎಲ್ಲಾ ಶಾಲಾ ಹಾಗೂ ಕಾಲೇಜುಗಳಲ್ಲಿ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡಿ. ಶಿಕ್ಷಕರಿಗೂ ಹಾಗೂ ವಿದ್ಯಾರ್ಥಿಗಳಿಗೂ ಅನುಕೂಲ ಮಾಡಿಕೊಡುವತ್ತ ಗಮನ ಹರಿಸಿ ಎಂದು ಬರೆದಿದ್ದಾರೆ.

ಶಿಕ್ಷಕರು ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಅಗತ್ಯವಿರುವ ಸೌಕರ್ಯಗಳನ್ನು ಒದಗಿಸಿ. ಈ ಹಿಂದೆ ನಾನು ಶಿಕ್ಷಣ ಸಚಿವನಾಗಿ ಕಾರ್ಯ ನಿರ್ವಹಿಸಿದ್ದು, ನನ್ನ ಕಾಲಾವಧಿಯಲ್ಲಿ ಅಗತ್ಯವಿರುವ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರನ್ನು ನೇಮಕಾತಿ ಮಾಡಿದ್ದೆ. ವಿದ್ಯಾರ್ಥಿಗಳು ಪ್ರತಿ ವಿಷಯದಲ್ಲೂ ಕನಿಷ್ಠ 33 ಅಂಕಗಳನ್ನು ತೆಗೆದುಕೊಂಡರೆ ಉತ್ತೀರ್ಣ ಮಾಡುತ್ತೇವೆ ಎಂಬುದನ್ನು ಕೈಬಿಟ್ಟು ಮುಂಚೆ ಇದ್ದ ಪದ್ದತಿಯನ್ನೇ ಮುಂದುವರೆಸಬೇಕೆಂದು ಕೋರುತ್ತೇನೆ ಎಂದು ಬರೆದಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹಾವೇರಿ: ಮತ್ತೆ ಮುನ್ನಲೆಗೆ ಬಂದ ಹಿಜಾಬ್ VS ಕೇಸರಿ ವಿವಾದ: ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪರಸ್ಪರ ಸವಾಲು!
ಬೆಂಗಳೂರು ಮತ್ತೊಂದು ಲವ್ ಜಿಹಾದ್ ಕೇಸ್; ಇಸ್ಲಾಂಗೆ ಮತಾಂತರ ಆಗದಿದ್ರೆ ಹುಡುಗಿಯನ್ನ 32 ಪೀಸ್ ಮಾಡೋದಾಗಿ ಬೆದರಿಕೆ!