
ಬೆಂಗಳೂರು (ಮಾ.4) : ದೇಶದ ಜಿಡಿಪಿಗೆ ದಿವ್ಯಾಂಗರ ಕೊಡುಗೆ ಏನು ಎಂದು ರಾಷ್ಟ್ರ ಮಟ್ಟದಲ್ಲಿ ಸಮೀಕ್ಷೆಯಾಗಬೇಕು. ಆಗ ಅವರ ಸೇವೆ ಏನಿದೆ ಎಂದು ಎಲ್ಲರಿಗೂ ತಿಳಿಯುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಚಾಮರಾಜಪೇಟೆಯ ಕುವೆಂಪು ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸಕ್ಷಮ ವಿಶೇಷ ಚೇತನರ ದಕ್ಷಿಣ ಪ್ರಾಂತ ಅಧಿವೇಶನ ಉದ್ಘಾಟಿಸಿ ಮಾತನಾಡಿದ ಅವರು, ದಿವ್ಯಾಂಗರ ಬಗ್ಗೆ ಅನುಕಂಪ ಬೇಡ, ಅವಕಾಶ ನೀಡಿದರೆ ಸಾಧನೆ ಮಾಡುತ್ತಾರೆ. ಸರ್ಕಾರಗಳು ಅನೇಕ ಯೋಜನೆ ಜಾರಿಗೊಳಿಸಿದರೂ ಸರಿಯಾಗಿ ತಲುಪಿಸುವ ಕೆಲಸ ಆಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಯೋಜನೆ ಅಂತಿಮ ವ್ಯಕ್ತಿಗೆ ತಲುಪಿಸುವ ಕಾರ್ಯ ಮಾಡುತ್ತಾರೆ. ನಾವು ಅಧಿಕಾರದಲ್ಲಿದ್ದಾಗ ಸಕ್ಷಮ ಸಂಸ್ಥೆಯ ಸೇವೆ ಗುರುತಿಸಿ ಪ್ರಶಸ್ತಿ ನೀಡಿದ್ದೆವು. ಉತ್ತಮ ಕೆಲಸ ಮಾಡುವವರನ್ನು ಗೌರವಿಸುವುದರಲ್ಲಿ ತಪ್ಪಿಲ್ಲ ಎಂದು ಅಭಿಪ್ರಾಯಪಟ್ಟರು.
ಇನ್ಮುಂದೆ ತಂದೆ-ತಾಯಿ ನಿರ್ಲಕ್ಷಿಸಿದರೆ ಮಕ್ಕಳ ಮೇಲೆ ಕ್ರಿಮಿನಲ್ ಕೇಸ್..!
ದಿವ್ಯಾಂಗರು ಎಲ್ಲ ರಂಗದಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಸಾಮಾನ್ಯ ಮನುಷ್ಯರಿಗಿಂತ ಮಿಗಿಲಾದ ಕಲ್ಪನಾ ಶಕ್ತಿಯನ್ನು ಹೊಂದಿರುತ್ತಾರೆ, ದಿವ್ಯಾಂಗರನ್ನು ವಿಕಲಚೇತನ, ವಿಶೇಷ ಚೇತನ ಎಂದು ಕರೆಯುತ್ತೇವೆ. ಸಾಧಿಸುವ ಛಲ ಹೊಂದಿರುವ ಅವರಿಗೆ ಅವಕಾಶ ನೀಡಿದರೆ ಸ್ವಾಭಿಮಾನದಿಂದ ಬದುಕುತ್ತಾರೆ. ಅವರೇ ನಿಜವಾದ ಯೋಗಿಗಳು ಎಂದು ಬಣ್ಣಿಸಿದರು.
ಎಲ್ಲ ಅಂಗಾಂಗಳನ್ನು ಹೊಂದಿರುವ ನಾವು ನೆಮ್ಮದಿ, ಖುಷಿಯಿಂದ ಇಲ್ಲ. ಭಗವಂತ ಕೊಟ್ಟಿರುವ ಎಲ್ಲ ಆಂಗಗಳನ್ನು ಸರಿಯಾಗಿ ಬಳಸಿಕೊಂಡಿದ್ದೇವೆಯೇ. ಇಎನ್‌ಟಿ ಪರೀಕ್ಷೆ ಮಾಡಿಸುವವರು ಯಾರು? ಕಣ್ಣಿನ ಪರೀಕ್ಷೆ ಮಾಡಿಸುವ ನಾವು ನಿಜವಾದ ದಿವ್ಯಾಂಗರು. ಕೆಲವು ಅಂಗ ಊನ ಇರುವವರು ಛಲದಿಂದ ಬದುಕುತ್ತಾರೆ ಎಂದು ತಿಳಿಸಿದರು.
ತಾಯಿ ಸ್ಥಾನದಲ್ಲಿ ನಿಂತು ನಿಮ್ಮ ಬೇಡಿಕೆ ಈಡೇರಿಸುವೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ
ನಾವು ಕೆಲವು ಸಾರಿ ಭಿಕ್ಷುಕರಾಗುತ್ತೇವೆ. ರಾಜಕಾರಣಿಗಳು ಟಿಕೆಟ್ ಭಿಕ್ಷೆ ಬೇಡುತ್ತಾರೆ. ವ್ಯಾಪಾರಿ ಹಣಕ್ಕಾಗಿ ಬೇಡಿಕೆ ಇಡುತ್ತಾರೆ. ಆದರೆ, ದಿವ್ಯಾಂಗರು ಸ್ವಾಭಿಮಾನದಿಂದ ಬದುಕುತ್ತಾರೆ. ನಾನು ಪಂಡಿತ ಪುಟ್ಟರಾಜ ಗವಾಯಿಗಳ ಸಂಪರ್ಕದಲ್ಲಿ ಸಾಕಷ್ಟು ಪಡೆದಿದ್ದೇನೆ ಎಂದು ಬೊಮ್ಮಾಯಿ ಸ್ಮರಿಸಿದರು.
ಶಾಸಕರಾದ ಉದಯ ಗರುಡಾಚಾರ್, ಎನ್.ರವಿಕುಮಾರ್ ಸಮಾರಂಭದಲ್ಲಿ ಹಾಜರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ